ಶ್ರೀನಿವಾಸಪುರ:ಜಮೀನು ವಿವಾದ ಮುಂದಿಟ್ಟುಕೊಂಡು ಅವರ ಮನೆ ಬಳಿಯೆ ವಕೀಲರೊಬ್ಬರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಶ್ರೀನಿವಾಸಪುರ ಪಟ್ಟಣದ ಹೊರವಲಯದಲ್ಲಿನ ಹೆಚ್.ನಲ್ಲಪಲ್ಲಿಯಲ್ಲಿ ನಡೆದಿರುತ್ತದೆ ಹಲ್ಲೆಯಲ್ಲಿ ಗಾಯಗೊಂಡ ವಕೀಲ ಸೊಣ್ಣೇಗೌಡ ಎಂದು ಗುರತಿಸಲಾಗಿದೆ.
ಬಾಯಲ್ಲಿ ರಕ್ತ ಬರುವಂತೆ ಗುಂಪುಕಟ್ಟಿಕೊಂಡು ಬಂದವರು ಕಲ್ಲು ದೊಣ್ಣೆಯಲ್ಲಿ ಮಾರಾಣಾಂತಿಕವಾಗಿ ಹಲ್ಲೆ ನಡೆಸಿದ್ದು ತೀವ್ರವಾಗಿ ಗಾಯಗೊಂಡಂತ ವಕೀಲ ಸೊಣ್ಣೇಗೌಡ ಅವರು ಎಸ್.ಎನ್.ಆರ್ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ವಕೀಲರ ಸಂಘದಿಂದ ಕಲಾಪಕ್ಕೆ ಬಹಿಷ್ಕಾರ
ವಕೀಲ ಸೊಣ್ಣೇಗೌಡರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ 24 ಗಂಟೆ ಕಳೆದರು ಹಲ್ಲೆ ಮಾಡಿದ ಆರೋಪಿಗಳನ್ನು ಶ್ರೀನಿವಾಸಪುರದ ಪೋಲಿಸರು ಬಂಧಿಸದೆ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಶ್ರೀನಿವಾಸಪುರ ವಕೀಲರ ಸಂಘ ಆಕ್ರೋಶ ವ್ಯಕ್ತಪಡಿದೆ.ವಕೀಲ ಸೊಣ್ಣೇಗೌಡರ ಮೇಲೆ ನಡೆದ ಹಲ್ಲೆ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಶ್ರೀನಿವಾಸಪುರ ವಕೀಲರ ಸಂಘ ಪದಾಧಿಕಾರಿಗಳು ಇಂದು ಕೋರ್ಟ್ ಕಲಾಪಗಳನ್ನು ಬಹಿಷ್ಕರಿಸಿದ್ದಾರೆ
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



