ಶ್ರೀನಿವಾಸಪುರ : ಬಡ ಕುಟುಂಬದ ಹಿನ್ನಲೆಯಿಂದ ಬಂದಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಬಡವರ ಹಸಿವು ನೋವು ಅರಿತವರಾಗಿ ಸಮಾನ್ಯನು ಅಕ್ಕಿ ಖರಿದಿ ಮಾಡಬೇಕು ಎಂಬ ಉದ್ದೇಶದಿಂದ ಭಾರತ್ ಅಕ್ಕಿಯನ್ನು 29 ರೂಗೆ ನೀಡುವಂತ ಮಹತ್ತರ ಯೋಜನೆಯನ್ನು ನರೇಂದ್ರ ಮೋದಿ ಜಾರಿಗೆ ತಂದಿದ್ದಾರೆ ಎಂದು ಬಿಜೆಪಿ ಕೋಲಾರ ಜಿಲ್ಲಾಧ್ಯಕ್ಷ ಡಾ.ಕೆ.ಎನ್.ವೇಣುಗೋಪಾಲ್ ಹೇಳಿದರು.ಅವರು ಶ್ರೀನಿವಾಸಪುರದಲ್ಲಿ ತಾಲೂಕು ಬಿಜೆಪಿ ವತಿಯಿಂದ ಭಾರತ್ ಅಕ್ಕಿ ಮಾರಾಟಕ್ಕೆ ಚಾಲನೆ ನೀಡಿ ಮಾತನಾಡಿದರು. ಇದೊಂದು ಮಹತ್ತರ ಯೋಜನೆಯಾಗಿದ್ದು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇದನ್ನು ಜಾರಿಗೆ ತಂದಿದ್ದು,ಬಡವರು ಸಾಮನ್ಯರು ಇದರ ಸದುಪಯೋಗ ಪಡೆಸಿಕೊಳ್ಳುವಂತೆ ಕರೆ ಇತ್ತರು.
ಪ್ರಸ್ತುತ 2ಸಾವಿರ ಮೂಟೆಯನ್ನು ವಿತರಣೆ ಮಾಡಲಾಗುತ್ತಿದೆ ಮುಂದಿನ ದಿನಗಳಲ್ಲಿ ಬೇಡಿಕೆ ತಕ್ಕಂತೆ ಭಾರತ್ ಅಕ್ಕಿಯನ್ನು ತರಿಸಿ ವಿತರಣೆ ಮಾಡಲಾಗುವುದು ಎಂದರು. ಈ ಸಂದರ್ಭದಲ್ಲಿ ಮುಖಂಡರಾದ ರೋಣೂರು ಚಂದ್ರು,ನಲ್ಲಪಲ್ಲಿ ರೆಡ್ಡಪ್ಪ, ಜೆಸಿಬಿ ಅಶೋಕ್ರೆಡ್ಡಿ,ರವಣಪ್ಪ ಮುಂತಾದವರು ಇದ್ದರು.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



