ಶ್ರೀನಿವಾಸಪುರ:ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರ ಮಹತ್ವಾಕಾಂಕ್ಷೆಯ ಯೋಜನೆಗಳನ್ನು ಜಾರಿಗೊಳಿಸಿದ್ದು ಪ್ರತಿ ಗ್ರಾಮೀಣ ಪ್ರದೇಶದ ಜನರಿಗೂ ಕಾರ್ಯಕ್ರಮಗಳು ತಲುಪುತ್ತಿದೆ ಈ ನಿಟ್ಟಿನಲ್ಲಿ ಕಾರ್ಯಕ್ರಮಗಳು ಹಾಗು ಯೋಜನೆಗಳ ಕುರಿತಾಗಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಅಭಿಯಾನ ಆಯೋಜಿಸಲಾಗಿದೆ ಎಂದು ಸಂಸದ ಮುನಿಸ್ವಾಮಿ ಹೇಳಿದರು.
ಅವರು ಶ್ರೀನಿವಾಸಪುರ ತಾಲ್ಲೂಕಿನ ಚಲ್ದಿಗಾನಹಳ್ಳಿ ಗ್ರಾಮದಲ್ಲಿ ವಿಕಸಿತ ಸಂಕಲ್ಪ ಯಾತ್ರೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು ಕೇಂದ್ರ ಸರ್ಕಾರ ನಾಗರಿಕರ ಅಭಿವೃದ್ಧಿಗೆ ನೂರಾರು ಯೋಜನೆಗಳನ್ನು ರೂಪಿಸಿದೆ ಈ ಯೋಜನೆಗಳ ಲಾಭವನ್ನು ಪಡೆದ ಫಲಾನುಭವಿಗಳು ದೇಶದ ಪ್ರತಿ ಮನೆಯಲ್ಲೂ ಇದ್ದಾರೆ. ಮೋದಿ ಸರ್ಕಾರದ ಯೋಜನೆಗಳು ದೇಶದ ಕಟ್ಟ ಕಡೆಯ ವ್ಯಕ್ತಿಗೂ ತಲುಪಿಸುವುದೇ ನಮ್ಮ ಕೇಂದ್ರ ಸರಕಾರದ ಗುರಿಯಾಗಿದೆ ಎಂದರು.
ಕೇಂದ್ರದ ಸರ್ಕಾರದ ಮುದ್ರಾಯೋಜನೆ, ಜನಧನ್ ಯೋಜನೆ, ಪಿ.ಎಂ ವಿಶ್ವಕರ್ಮ ಯೋಜನೆ, ಉಜ್ವಲ ಸ್ಕೀಂ ಸೇರಿದಂತೆ ವಿವಿಧ ಯೋಜನೆಗಳ ಮಾಹಿತಿಯನ್ನು ಎಲ್ಇಡಿ ಪರದೆಯ ವಾಹನಗಳ ಮೂಲಕ ಗ್ರಾಮ ಪಂಚಾಯಿತಿ ಹಾಗೂ ನಗರ ಪ್ರದೇಶದಲ್ಲಿ ಸಂಚರಿಸಿ ಜನರಿಗೆ ಜಾಗೃತಿ ಮೂಡಿಸುವ ಸಲುವಾಗಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಸರ್ಕಾರದ ಯೋಜನೆಗಳ ಲಾಭ ಪಡೆದ ಫಲಾನುಭವಿಗಳನ್ನು ಒಗ್ಗೂಡಿಸಿ, ಈ ಯೋಜನೆಗಳಿಂದ ವಂಚಿತರಾದ ಫಲಾನುಭವಿಗಳಿಗೆ ಅದರ ಲಾಭ ಸಿಗುವಂತೆ ಮಾಡುವ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಅಧಿಕಾರಿಗಳಿಗೆ ಹಾಗೂ ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಲು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಉಜ್ವಲ ಯೋಜನೆಯಡಿ ಫಲಾನುಭವಿಗಳಿಗೆ ಗ್ಯಾಸ್ ಸಿಲಿಂಡ್ ಗಳನ್ನು ಸಂಸದ ಮುನಿಸ್ವಾಮಿ ವಿತರಿಸಿದರು. ಇದೇ ಸಂದರ್ಭದಲ್ಲಿ ಪ್ರತಿಜ್ಞಾವಿಧಿ ಭೋದಿಸಲಾಯಿತು.ಕೇಂದ್ರ ಸರ್ಕಾರದ ವತಿಯಿಂದ ಸಾರ್ವಜನಿಕರಿಗೆ ಸರ್ಕಾರದ ಯೋಜನೆಗಳ ಮಾಹಿತಿಯ ಕಿರುಪುಸ್ತಕ ಹಾಗು 2024 ರ ಕ್ಯಾಲೆಂಡರ್ ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಇಓ ಶಿವಕುಮಾರಿ,ರೇಷ್ಮೆ ಇಲಾಖೆ ಉಪನಿರ್ದೇಶಕ ಕೃಷ್ಣಪ್ಪ, ಕೃಷಿ ಇಲಾಖೆ ಉಪ ನಿರ್ದೇಶಕ ಮಂಜುನಾಥ್,ಕೋಲಾರ ಬಿಜೆಪಿ ಅಧ್ಯಕ್ಷ ಡಾ.ವೇಣುಗೋಪಾಲ್,ಗ್ರಾಮ ಪಂಚಾಯಿತಿ ಪಿಡಿಒ ಜಗದೀಶ್,ಅಧ್ಯಕ್ಷ ಶ್ರೀನಿವಾಸ,ಸದಸ್ಯ ಆನಂದ,ತಾಲೂಕಾ ಆರ್ಥಿಕ ಸಾಕ್ಷರತೆಯ ಸಲಹೆಗಾರ ರಾಮಚಂದ್ರಪ್ಪ ಸಂಯೋಜಕ ವೆಂಕಟೇಶ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಶರಣಮ್ಮ,ಆರೋಗ್ಯ ಇಲಾಖೆ ಸಂಯೋಜಕಿ ಅಂಜಲಪ್ಪ,ಆಶಾ ಕಾರ್ಯಕರ್ತರು,ಸ್ವಸಹಾಯ ಗುಂಪಿನ ಮಹಿಳ ಸದಸ್ಯರು,ಗ್ರಾಮೀಣ ಬ್ಯಾಂಕ್ ವ್ಯವಸ್ಥಾಪಕ ವಿಶ್ವನಾಥರೆಡ್ಡಿ,ಸಿಬ್ಬಂದಿ ಮೋಹನ್,ಕೃಷ್ಣಮೂರ್ತಿ ಜಿಲ್ಲಾ ಬಿಜೆಪಿ ರೈತ ಮೊರ್ಚಾ ಅಧ್ಯಕ್ಷ ಲಕ್ಷ್ಮಣಗೌಡ, ಮುಖಂಡ ರೋಣೂರುಚಂದ್ರು,ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Sunday, April 27