ಶ್ರೀನಿವಾಸಪುರ: ಮುಂದಿನ ಚುನಾವಣೆಗಳಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸವನ್ನು ಎಂ.ಎಲ್.ಸಿ. ಸಿ.ಟಿ. ರವಿ ವಿಶ್ವಾಸ ವ್ಯಕ್ತಪಡಿಸಿದರು ಅವರು ಶ್ರೀನಿವಾಸಪುರದ ವಿ.ಐ.ಪಿ. ಶಾಲಾ ಆವರಣದಲ್ಲಿ ಆಯೋಜಿಸಿದ್ದ ಆಗ್ನೇಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಪ್ರಚಾರ ಸಭೆಯಲ್ಲಿ ಎನ್ಡಿಎ ಅಭ್ಯರ್ಥಿ ಕೆ.ಎಂ. ಸುರೇಶ್ ಅವರ ಪರವಾಗಿ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದರು. ವಿದ್ಯಾವಂತ ಮತದಾರರು ಹೆಚ್ಚಿನ ಪ್ರಮಾಣದಲ್ಲಿ ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸುತ್ತಾರೆ ಎನ್ನುವ ನಂಬಿಕೆ ಇದೆ ಎಂದ ಅವರು ಸಂವಿಧಾನ ಮತ್ತು ಸಾಂವಿಧಾನಿಕ ಸಂಸ್ಥೆಗಳ ವಿರುದ್ಧ ನಡೆಯುತ್ತಿರುವ ಅಪಪ್ರಚಾರ, ಪ್ರಜಾಪ್ರಭುತ್ವದ ಮೇಲಿನ ಪರೋಕ್ಷ ದಾಳಿಯನ್ನು ತಡೆಯುವ ಪ್ರಯತ್ನಕ್ಕೆ ಈ ಚುನಾವಣೆ ರಾಜಕೀಯ ಸಂದೇಶ ನೀಡುವಂತಾಗಬೇಕು ಎಂದರು. ಸಂವಿಧಾನ, ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ಚುನಾವಣಾ ಆಯೋಗದ ಕಾರ್ಯವೈಖರಿಯ ಬಗ್ಗೆ ಮಾತನಾಡಿ ಹಿಂದೆ ಒಂದು ಚುನಾವಣೆ ಎಂದರೆ ಕೊಲೆ, ಗಲಭೆ, ಮರು ಚುನಾವಣೆ ಸಾಮಾನ್ಯವಾಗಿತ್ತು. ಈಗ ಯಾವುದಕ್ಕೂ ಆಸ್ಪದ ಇಲ್ಲದಂತೆ ಶಾಂತಿಯುತವಾದ ಚುನಾವಣೆಗಳು ನಡೆಯುತ್ತಿವೆ ಪ್ರಾಮಾಣಿಕವಾಗಿ ಚುನಾವಣೆ ನಡೆಸುತ್ತಿರುವ ಚುನಾವಣಾ ಆಯುಕ್ತರ ರಾಜೀನಾಮೆ ಕೇಳುತ್ತಿರುವುದು ಎಷ್ಟು ಸರಿಯೇ? ಅಕ್ರಮವಾಗಿ ಮತಗಳನ್ನು ತಿದ್ದಲು ಅವಕಾಶ ಕೊಡಲಿಲ್ಲ ಎಂಬ ಕಾರಣಕ್ಕೆ ಕಾಂಗ್ರೆಸ್ ನವರು ರಾಜೀನಾಮೆ ಕೇಳುತ್ತಿದ್ದಾರೆ ಎಂದು ಕಿಡಿಕಾರಿದರು.

ಶಾಸಕ ವೆಂಕಟಶಿವಾರೆಡ್ಡಿ ಮಾತನಾಡಿ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ ನೀಡುತ್ತಿದ್ದು, ಸುಮಾರು 400 ಹಳ್ಳಿಗಳಲ್ಲಿ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳುಲಾಗಿದೆ ಗ್ರಾಮಗಳಲ್ಲಿ ಹೈಮಾಸ್ ದೀಪಗಳು, ಸಿಸಿ ರಸ್ತಗಳು ಹಾಗೂ ಬೀದಿ ದೀಪಗಳ ವ್ಯವಸ್ಥೆ ಮಾಡಲಾಗುತ್ತಿದೆ. ದೇವಾಲಯಗಳ ಅಭಿವೃದ್ಧಿಗೆ ವಿಶೇಷ 15 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ ಮುಂದಿನ ಚುನಾವಣೆಯಲ್ಲಿ ಎನ್.ಡಿ.ಎ ಕೂಟದ ಸರ್ಕಾರ ರಚನೆಗೆ ನಾವೆಲ್ಲ ಸಜ್ಜಾಗಬೇಕಿದೆ ಇದಕ್ಕಾಗಿ ಆಗ್ನೇಯ ಪದವಿಧರ ಚುನಾವಣೆಯಲ್ಲಿ ಎನ್.ಡಿ.ಎ ಅಭ್ಯರ್ಥಿಯನ್ನು ಬೆಂಬಲಿಸುವ ಮೂಲಕ ಅಭಿವೃದ್ಧಿಯತ್ತ ಸಾಗುವ ಕ್ರಮಕ್ಕೆ ಪದವಿಧರರು ಮುಂದಾಗುವಂತೆ ಕರೆ ಇತ್ತರು. ಸಂಸದ ಮಲ್ಲೇಶ್ ಬಾಬು ಮಾತನಾಡಿ ದೇಶದ ಅಭಿವೃದ್ಧಿಗಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕೈಬಲಪಡಿಸಲು ನಾವೆಲ್ಲರೂ ಒಗ್ಗಟ್ಟಾಗಬೇಕಾಗಿದೆ
ಈ ಹಿನ್ನಲೆಯಲ್ಲಿ ಆಗ್ನೇಯ ಪದವಿಧರ ಕ್ಷೇತ್ರದ ಎಂಎಲ್ಸಿ ಅಭ್ಯರ್ಥಿ ಕೆ.ಎಂ. ಸುರೇಶ್ ಅವರನ್ನು ಗೆಲ್ಲಿಸುವಂತೆ ಕರೆ ನೀಡಿದರು.
ಮಾಜಿ ವಿಧಾನ ಪರಿಷತ್ ಸದಸ್ಯರಾದ ವೈ.ಎ. ನಾರಾಯಣಸ್ವಾಮಿ,ತೂಪಲ್ಲಿ ಚೌಡರೆಡ್ಡಿ, ಹರಿಹರ ಶಿವಶಂಕರ್, ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಬಿ.ಎ. ಶಿವಾರೆಡ್ಡಿ, ಬಿಜೆಪಿ ಜಿಲ್ಲಾಧ್ಯಕ್ಷ ಓಂಶಕ್ತಿ ಚಲಪತಿ, ಮಾಜಿ ಜಿಲ್ಲಾಧ್ಯಕ್ಷ ಡಾ.ಎಸ್. ವೇಣುಗೋಪಾಲ್, ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ತೂಪಲ್ಲಿ ನಾರಾಯಣಸ್ವಾಮಿ,ತಾ.ಪ ಮಾಜಿ ಅಧ್ಯಕ್ಷ ಬಂಡಪಲ್ಲಿ ಕೃಷ್ಣಾರೆಡ್ಡಿ, ಜೆಡಿಎಸ್ ಪಕ್ಷದ ಮಹಿಳಾ ಘಟಕದ ಅಧ್ಯಕ್ಷೆ ಗಾಯತ್ರಿಮುತ್ತಪ್ಪ, ಬಿಜೆಪಿ ಪಕ್ಷದ ಮಂಡಲ ಅಧ್ಯಕ್ಷ ರೋಣೂರು ಚಂದ್ರಶೇಖರ್, ನಿಲಟೂರು ಚಿನ್ನಪ್ಪರೆಡ್ಡಿ ರಾಮಚಂದ್ರಗೌಡ, ಬಿಜೆಪಿ ಪ್ರಧಾನ ಕಾರ್ಯದರ್ಶಿ ನಾಗಭೂಷಣ್, ಲಕ್ಷ್ಮಣಗೌಡ, ರಾಯಲಪಾಡು ಗ್ರಾ.ಪಂ. ಸದಸ್ಯ ಸಿಮೆಂಟ್ ನಾರಾಯಣಸ್ವಾಮಿ ಸೇರಿದಂತೆ ಹಲವರು ಇದ್ದರು.



