ಶ್ರೀನಿವಾಸಪುರ:ಶ್ರೀನಿವಾಸಪುರದ ಗ್ರಾಮ ದೇವತೆಯಂದು ಪೂಜಿಸುವ ಶ್ರೀಚೌಡೇಶ್ವರಿ ವರ್ಧಂತೋತ್ಸವ ಜಯಂತಿ ಕಾರ್ಯಕ್ರಮ ಭಕ್ತಿ ಭಾವದಿಂದ ಅದ್ದೂರಿಯಾಗಿ ಆಚರಿಸಲಾಯಿತು.
ಆಷಾಢದಲ್ಲಿ ಮಂಗಳಕರವಾದ ರೇವತಿ ನಕ್ಷತ್ರದಂದು ಚೌಡೇಶ್ವರಿ ವರ್ಧಂತಿಯನ್ನು ಆಚರಿಸಲಾಗುತ್ತದೆ.
ವರ್ಧಂತೋತ್ಸವ ಅಂಗವಾಗಿ ಚೌಡೇಶ್ವರಿ ಅಮ್ಮನವರಿಗೆ ವಿಶೇಷವಾಗಿ ಹೂವಿನ ಅಲಂಕಾರ ಮಾಡಲಾಗಿತ್ತು ಬೆಳಿಗ್ಗೆ ಬ್ರಹ್ಮ ಮುಹೂರ್ತದ ಸಮಯದಲ್ಲಿ ಸುಪ್ರಭಾತ ಸೇವೆಯೊಂದಿಗೆ ಆರಂಭವಾದ ಪೂಜಾ ಕಾರ್ಯಕ್ರಮಗಳು ಪಂಚಾಮೃತಾಭಿಷೇಕ, ಪುಷ್ಪಾರ್ಚನೆ, ನಂತರ ಸಾಮೂಹಿಕ ಶ್ರೀಲಲಿತಾ ಸಹಸ್ರನಾಮ ಪಾರಯಣ. ಸಹಸ್ರನಾಮ ಕುಂಕುಮಾರ್ಚನೆ ಮಂತ್ರಪುಷ್ಪ, ಅಷ್ಟಾವಧ ಸೇವೆ ನಂತರ ಮತ್ತಿತರ ಧಾರ್ಮಿಕ ವಿಧಿವಿಧಾನಗಳ ಆಚರಣೆ ನಂತರ ಮಹಾಮಂಗಳಾರತಿ ಕಾರ್ಯಕ್ರಮಗಳು ನಡೆದವು. ಮಧ್ಯಾಹ್ನ ಸಾರ್ವಜನಿಕರಿಗೆ ಅನ್ನ ಸಂತರ್ಪಣೆ ಆಯೋಜಿಸಲಾಗಿತ್ತು.
ಸಹಸ್ರ ಸಂಖ್ಯೆಯಲ್ಲಿ ಆಗಮಿಸಿದ ಭಕ್ತಾಧಿಗಳು
ವರ್ಧಂತೋತ್ಸವ ಅಂಗವಾಗಿ ಸಹಸ್ರ ಸಂಖ್ಯೆಯಲ್ಲಿ ಭಕ್ತಾಧಿಗಳು ಮುಂಜಾನೆಯಿಂದಲೆ ದೇವಾಲಯಕ್ಕೆ ಆಗಮಿಸಿ ಶ್ರೀಚೌಡೇಶ್ವರಿ ಅಮ್ಮನ ದರ್ಶನ ಪಡೆದು ಪ್ರಸಾದ ಸ್ವೀಕರಿಸಿ ಪುನಿತರಾದರು.ರಾತ್ರಿ ಒಂಬತ್ತು ಗಂಟೆಯಾದರೂ ಆಗಮಿಸುತ್ತಿದ್ದ ಭಕ್ತರು.
ಕೊಳ್ಳೂರು ಬಡಾವಣೆಯಲ್ಲಿರುವ ಶ್ರೀ ಚೌಡೇಶ್ವರಿ ದೇವಾಲಯದಲ್ಲೂ ವರ್ಧಂತೋತ್ಸವ ಅಂಗವಾಗಿ ವಿಶೇಷ ಪೂಜೆ ದುರ್ಗಾ ಹೋಮ ಹವನ ನಡೆಸಿದ್ದು,ಭವ್ಯವಾಗಿ ಹೂವಿನ ಅಲಂಕಾರ ಮಾಡಲಾಗಿತ್ತು.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



