ಶ್ರೀನಿವಾಸಪುರ: ಪಂಚಾಯಿತಿ ಅಧ್ಯಕ್ಷರ ಅಧಿಕಾರನ್ನು ದುರುಪಯೋಗ ಪಡಿಸಿಕೊಳ್ಳುವಂತ ರಾಜಕೀಯ ಮುಖಂಡರಿಗೆ ನಾಚಿಕೆಯಾಗಬೇಕು ಎಂದು ಮಾಜಿ ಶಾಸಕ ವೆಂಕಟಶಿವಾರೆಡ್ಡಿ ಆರೋಪಿಸಿದರು. ಅವರು ಇಂದು ತಮ್ಮ ಗೃಹ ಕಚೇರಿಯಲ್ಲಿ ಮೀಸಲಾತಿ ಅಡಿಯಲ್ಲಿ ಅಧಿಕಾರದ ಚುಕ್ಕಾಣಿ ಹಿಡದಿದ್ದ ತಾಲೂಕಿನ ರಾಯಲ್ಪಾಡು ಹೋಬಳಿ ಯರ್ರಂವಾರಿಪಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಮಣಮ್ಮ ಅವರನ್ನು ಜೆಡಿಎಸ್ ಗೆ ಸೆರ್ಪಡೆ ಮಾಡಿಕೊಂಡು ಮಾತನಾಡಿದರು. ಗ್ರಾಮ ಪಂಚಾಯಿತಿ ಅಧಿಕಾರ ವ್ಯಾಪ್ತಿಯಲ್ಲಿ ಮೂರನೇ ವ್ಯಕ್ತಿ ರಾಜಕಾರಣ ಅಭಿವೃದ್ದಿಗೆ ಮಾರಕ ಆಗುತ್ತದೆ ಇದು ಒಳ್ಳೆಯ ಬೆಳವಣಿಗೆ ಅಲ್ಲ ಮೀಸಲಾತಿ ಅಡಿಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿರುವ ಮಹಿಳೆಗೆ ಅಧಿಕಾರ ನಡೆಸುವ ಸ್ವೆಚ್ಚೆ ಇರಬೇಕು ಎಂದರು.
ಈ ಸಂದರ್ಭದಲ್ಲಿ ಮಾತನಾಡಿದ ಅಧ್ಯಕ್ಷೆ ರವಣಮ್ಮ ಅಧ್ಯಕ್ಷೆಯಾದಾಗಿನಿಂದ ನಾನು ನಂಬಿದ್ದ ಕಾಂಗ್ರೆಸ್ ಮುಖಂಡರು ನನ್ನನ್ನು ನಾಮಕಾವಸ್ಥೆ ಅಧ್ಯಕ್ಷರನ್ನಾಗಿಸಿ ನನ್ನ ಹೆಸರಿನಲ್ಲಿ ಅಧಿಕಾರ ಚಲಾಯಿಸುವುದಲ್ಲದೆ ನನ್ನನ್ನು ಕೇವಲವಾಗಿ ಕಾಣುತ್ತಿದ್ದರು ಇದರಿಂದ ನನಗೆ ಮನಸ್ಸಿಗೆ ತುಂಬಾ ಬೇಸರ ಉಂಟಾಗಿ ಸಾರ್ವಜನಿಕ ಜೀವನದಲ್ಲಿ ಇಂತಹ ಅಪಮಾನ ಬೇಡ ಎಂದು, ಉಪಾಧ್ಯಕ್ಷ ಶ್ರೀನಿವಾಸರೆಡ್ಡಿ ಅವರೊಂದಿಗೆ ಚರ್ಚಿಸಿ ಜೆಡಿಎಸ್ ಸೇರುತ್ತಿರುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಪಂಚಾಯಿತಿ ಉಪಾಧ್ಯಕ್ಷ ಶ್ರೀನಿವಾಸರೆಡ್ಡಿ, ರಮಣಪ್ಪ, ರಾಮಪ್ಪ ಮುಂತಾದವರು ಇದ್ದರು.
ತಾಲೂಕಿನ ರಾಯಲ್ಪಾಡು ಹೋಬಳಿ ಯರ್ರಂವಾರಿಪಲ್ಲಿ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು 16 ಸಂಖ್ಯೆಯ ಸದಸ್ಯರಿದ್ದು ಇವರಲ್ಲಿ ಜೆಡಿಎಸ್ 9 ಹಾಗು ಕಾಂಗ್ರೆಸ್ 7 ಸದಸ್ಯರಿದ್ದರು ಅದ್ಯಕ್ಷೆ ರವಣಮ್ಮ ಪಂಚಾಯಿತಿಯಲ್ಲಿ ಕಾಂಗ್ರೆಸ್ ಬೆಂಬಲಿತ ಏಕೈಕ ಪರಿಶಿಷ್ಠ ಜಾತಿ ಮಹಿಳಾ ಅಭ್ಯರ್ಥಿಯಾಗಿ ಗೆಲವು ಸಾಧಿಸಿದ್ದರು ಅಧ್ಯಕ್ಷಗಾಧಿ ಪರಿಶಿಷ್ಠ ಜಾತಿ ಮಹಿಳೆಗೆ ಒಲಿದ ಹಿನ್ನಲೆಯಲ್ಲಿ ಜೆಡಿಎಸ್ ಪ್ರಾಭಲ್ಯದ ನಡುವೆವೂ ಮೀಸಲಾತಿ ಅಡಿಯಲ್ಲಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



