ಶ್ರೀನಿವಾಸಪುರ:ಭಾರತದ ಚಂದ್ರಯಾನ-3 ಯಶಸ್ವಿಯಾಗಿದೆ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ದಕ್ಷಿಣ ಭಾಗದಲ್ಲಿ ಯಶಸ್ವಿಯಾಗಿ ಇಳಿದಿದ್ದು ಇದೊಂದು ವಿಶ್ವ ಸಾಧನೆ ಇದನ್ನು ಸಾಧಿಸಿದ ಮೊದಲ ರಾಷ್ಟ್ರ ನಮ್ಮ ದೇಶ ಎಂದು ಹೆಮ್ಮೆ ಆಗುತ್ತದೆ ಇದರ ಸಂಪೂರ್ಣ ಕೀರ್ತಿ ನಮ್ಮ ಹೆಮ್ಮೆಯ ಇಸ್ರೋ ವಿಜ್ನಾನಿಗಳಿಗೆ ಸಲ್ಲಬೇಕು ಅವರ ಸಾಧನೆ ಅನನ್ಯ ಎಂದು ಕೋಲಾರ ಜಿಲ್ಲಾ ಬಿಜೆಪಿ ಅಧ್ಯಕ್ಷ ಡಾ.ವೇಣುಗೋಪಾಲ್ ಹೇಳಿದರು ಅವರು ಚಂದ್ರಯಾನ-3 ಯಶಸ್ವಿಯಾದ ಹಿನ್ನಲೆಯಲ್ಲಿ ರಾಷ್ಟ್ರ ಪ್ರೇಮಿಗಳ ವೇದಿಕೆ ಪಟ್ಟಣದ ಇಂದಿರಾಭವನ್ ವೃತ್ತದಲ್ಲಿ ಆಯೋಜಿಸಿದ್ದ ಸಂಭ್ರದ ವಿಜಯೋತ್ಸವದಲ್ಲಿ ಪಾಲ್ಗೋಂಡು ಮಾತನಾಡಿದರು.
ಭಾರತೀಯ ಜನತಾ ಪಕ್ಷದ ಕೋಲಾರ ಜಿಲ್ಲಾ ರೈತ ಮೊರ್ಚಾ ಅಧ್ಯಕ್ಷ ಚಿರುವನಹಳ್ಳಿಲಕ್ಷ್ಮಣಗೌಡ ಮಾತನಾಡಿ ಚಂದ್ರಯಾನ-3 ವಿಕ್ರಮ ಲ್ಯಾಂಡರ್ ಯಶಸ್ವಿಯಾಗಿ ಚಂದ್ರನ ಮೇಲೆ ಇಳಿಯುವ ಮೂಲಕ ಇಸ್ರೋ ವಿಜ್ನಾನಿಗಳ ಐತಿಹಾಸಿಕ, ಸಾಧನೆಯನ್ನು ಇಡೀ ವಿಶ್ವವೇ ಭಾರತದೆಡೆಗೆ ತಿರುಗಿ ನೋಡುವಂತೆ ಮಾಡಿದೆ, ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ವಿಶ್ವಗುರುವನ್ನಾಗಿಸಿದೆ ಎಂದರು.
ರಾಷ್ಟ್ರಧ್ವಜಗಳೊಂದಿಗೆ ಭಾರತ ಮಾತಾ ಕೀ ಜೈ ಘೋಷಣೆಯೊಂದಿಗೆ ಜನತೆ ಹಾಗು ಕಾರ್ಯಕರ್ತರು ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಸಪ್ತಗಿರಿ ವಿದ್ಯಾಸಂಸ್ಥೆ ಮುಖ್ಯಸ್ಥ ಪೆದ್ದಣ್ಣ,ಹಿರಿಯ ಮುಖಂಡ ಟಿ.ನಾರಯಣಸ್ವಾಮಿ,ಬಿಜೆಪಿ ಮುಖಂಡ ಹೊದಲಿನಾರಯಣಸ್ವಾಮಿ,ಯುವ ಮುಖಂಡರಾದ ನಾಗದೇನಹಳ್ಳಿ ಚಂದ್ರು,ಸುರೇಶ್ ನಾಯ್ಕ್,ಶ್ರೀನಾಥ್ ಬಾಬು,ಶ್ರೀರಾಮ್,ರಾಮಾಂಜಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23



