ಶ್ರೀನಿವಾಸಪುರ: ಮೇ 10 ರಂದು ನಡೆಯಲಿರುವ ಸಾರ್ವತ್ರಿಕ ಚುನಾವಣೆಯಲ್ಲಿ ನಮ್ಮ ಮತ, ನಮ್ಮ ಹಕ್ಕು ಎಂದು ಭಾವಿಸಿ ಪ್ರತಿಯೊಬ್ಬ ನಾಗರಿಕನೂ ಕಡ್ಡಾಯವಾಗಿ ಮತವನ್ನು ಚಲಾಯಿಸಿ, ದೇಶದ ಪ್ರಜಾತಂತ್ರದ ವ್ಯವಸ್ಥೆಯನ್ನುಎತ್ತಿ ಹಿಡಿಯಲು ಪ್ರಯತ್ನ ಮಾಡುವಂತೆ ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣಾಧಿಕಾರಿ ಇ. ಕೃಷ್ಣಪ್ಪ ಕರೆ ಇತ್ತರು.
ಶ್ರೀನಿವಾಸಪುರ ಪುರಸಭಾ ವ್ಯಾಪ್ತಿಯಲ್ಲಿ ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಮತದಾರರಿಗೆ ಜಾಗೃತಿ ಅಭಿಯಾನ ಸಲುವಾಗಿ ಪಟ್ಟಣ ಎಂ. ಜಿ. ರಸ್ತೆಯಲ್ಲಿ ಮೊಂಬತ್ತಿ ಮತ್ತು ಪಂಜಿನ ಮೆರವಣಿಗೆ ಉದ್ಘಾಟಿಸಿ ಮಾತನಾಡಿದ ಇ.ಒ. ಕೃಷ್ಣಪ್ಪ, ದೇಶ ಮುನ್ನೆಡಸಲು ಉತ್ತಮ ವ್ಯಕ್ತಿಯನ್ನು ಮತದಾನದ ಮೂಲಕ ಆಯ್ಕೆಮಾಡಿಕೊಳ್ಳಲು ಅವಕಾಶ ಇರುತ್ತದೆ 18 ವರ್ಷ ತುಂಬಿದ ಪ್ರತಿಯೊಬ್ಬ ಭಾರತದ ಪ್ರಜೆ ಮತದಾನ ಹಕ್ಕು ಚಲಾಯಿಸಬೇಕು, ಈ ನಿಟ್ಟಿನಲ್ಲಿ ಮತದಾರರು ಮೇ 10 ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂತೆಯ ತನಕ ತಮ್ಮ ಅಮೂಲ್ಯವಾದ ಮತವನ್ನು ಚಲಾಯಿಸಲು ಮುಂದಾಗಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ಉಪ ಚುನಾವಣಾ ಅಧಿಕಾರಿಗಳಾದ ತಹಸೀಲ್ದಾರ್ ಶೀರಿನ್ತಾಜ್, ವೃತ್ತನಿರೀಕ್ಷಕ ನಾರಾಯಣಸ್ವಾಮಿ, ಪುರಸಭಾ ಮುಖ್ಯಾಧಿಕಾರಿ ವೈ.ಎನ್. ಸತ್ಯನಾರಾಯಣ, ಬಿ.ಇ.ಒ.ಉಮಾದೇವಿ, ತೋಟಗಾರಿಕಾ ಇಲಾಖಾ ಹಿರಿಯ ಸಹಾಯಕ ನಿರ್ದೇಶಕ ಡಾ.ಎಂ. ಶ್ರೀನಿವಾಸನ್, ನರೇಗ ಎ.ಡಿ.ರಾಮಪ್ಪ, ಪಿ.ಡಿ.ಒ ಕೃಷ್ಣ,ಗೌಸಸಾಬ್ ಮುಂತಾದವರು ಇದ್ದರು.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



