ಚಿಂತಾಮಣಿ:ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ವಾರ್ಡ್ ನಂ 7ರ.ಸದಸ್ಯ ಆರ್ ಜಗನ್ನಾಥ್, ಉಪಾಧ್ಯಕ್ಷರಾಗಿ ವಾರ್ಡ್ ನಂ:27 ರ ರಾಣಿಯಮ್ಮರವರು ಅವಿರೋಧ ಆಯ್ಕೆಯಾಗುವ ಮೂಲಕ ಕಾಂಗ್ರೆಸ್ ಅಧಿಕಾರ ಮುಂದುವರದಿದೆ.
ಇಂದು ನಡೆದ ಚಿಂತಾಮಣಿ ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಸ್ಥಾನಕ್ಕೆ ಚುನಾವಣೆ ನಿಗದಿಯಾಗಿದ್ದು ಚುನಾವಣಾ ಅಧಿಕಾರಿಯಾದ ಅಶ್ವಿನ್ ರವರು ಚುನಾವಣೆಯನ್ನು ನಡೆಸಿದ್ದು ಕಾಂಗ್ರೆಸ್ ಪಕ್ಷದ ಸದಸ್ಯ ಆರ್ ಜಗನ್ನಾಥ್, ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ರಾಣಿಯಮ್ಮ ನಾಮಪತ್ರ ಸಲ್ಲಿಸಿದ್ದು ಇತರೆ ಯಾರು ಸಹ ನಾಮಪತ್ರ ಸಲ್ಲಿಸದ ಹಿನ್ನಲೆಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರು ಆವಿರೋಧವಾಗಿ ಆಯ್ಕೆಯಾದರು.
ಸಚಿವರಿಂದ ಶುಭಹಾರೈಕೆ
ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮತ್ತು ಉಪಾಧ್ಯಕ್ಷರು ಆವಿರೋಧವಾಗಿ ಆಯ್ಕೆ ಘೋಷಣೆಯಾದ ನಂತರ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಹಾಗೂ ಉನ್ನತ ಶಿಕ್ಷಣ ಸಚಿವರಾದ ಡಾ.ಎಂ ಸಿ ಸುಧಾಕರ್ ರವರು ಕಾಂಗ್ರೆಸ್ ನಗರಸಭಾ ಸದಸ್ಯರೊಂದಿಗೆ ಆಗಮಿಸಿ ನೂತನ ಅಧ್ಯಕ್ಷ ಉಪಾಧ್ಯಕ್ಷರಿಗೆ ಶುಭಕೋರಿ ಮಾತನಾಡಿ ಚಿಂತಾಮಣಿ ನಗರವನ್ನು ಅಭಿವೃದ್ಧಿ ಪಥದತ್ತ ತಗೆದುಕೊಂಡು ಹೋಗಲು ಪಕ್ಷಾತೀತವಾಗಿ ಶ್ರಮಿಸುವಂತೆ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರಿಗೆ ಸೂಚಿಸಿದರು,ಈ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ನಗರಸಭೆ ಮುಂಭಾಗ ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ನಗರಸಭಾ ಸದಸ್ಯರಾದ ಜಗದೀಶ್.ರಾಜಾಚಾರಿ. ಹರೀಶ್.ಅಕ್ಷಯ್,ಸೇರಿದಂತೆ ನಗರಸಭಾ ಸದಸ್ಯರು ಹಾಗು ಕಾಂಗ್ರೆಸ್ ಮುಖಂಡರುಗಳು ಇದ್ದರು.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



