ಶ್ರೀನಿವಾಸಪುರ:ತಾಲೂಕಿನ ಕೋಡಿಪಲ್ಲಿ ಗ್ರಾಮ ಪಂಚಾಯಿತಿಗೆ 4ನೇ ಅವಧಿಯ ಅಧ್ಯಕ್ಷರಾಗಿ ಶಿಲ್ಪಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಕೋಡಿಪಲ್ಲಿ ಪಂಚಾಯಿತಿಯಲ್ಲಿ ತೆರವಾಗಿ ಸಾಮಾನ್ಯ ಮಹಿಳಾ ಮೀಸಲು ನಿಗದಿಯಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು.ಕೋಡಿಪಲ್ಲಿ ಪಂಚಾಯಿತಿ ಮೊದಲಿನಿಂದಲೂ ಕಾಂಗ್ರೆಸ್ ಭದ್ರಕೋಟೆ ಹಾಗಾಗಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಶಿಲ್ಪ ಹೊರತು ಪಡಿಸಿ ಇತರೆ ಯಾರು ನಾಮಪತ್ರ ಸಲ್ಲಿಸಿದ ಕಾರಣ ಶಿಲ್ಪ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ್ದಾರೆ ಈ ಸಂದರ್ಭದಲ್ಲಿ ಚುನಾವಣಾ ಅಧಿಕಾರಿಯಾಗಿದ್ದ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಎಂ.ಶ್ರೀನಿವಾಸನ್ ಘೋಷಣೆ ಮಾಡಿದರು.
ಕೋಡಿಪಲ್ಲಿ ಪಂಚಾಯಿತಿ ಪ್ರಭಾವಿ ಮುಖಂಡ ಪಿ.ಎಲ್.ಡಿ ಬ್ಯಾಂಕ್ ಉಪಾಧ್ಯಕ್ಷ ಸುಬ್ಬಾರೆಡ್ಡಿ ಮಾತನಾಡಿ, ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ನಡೆದಂತ ಸಭೆಯಲ್ಲಿ ಪಂಚಾಯಿತಿ ಅಧ್ಯಕ್ಷರನ್ನು ಆಯ್ಕೆ ಮಾಡಲಾಗಿದ್ದು ಇಲ್ಲಿ ಭಿನ್ನಾಭಿಪ್ರಾಯಗಳನ್ನು ಪಕ್ಕಕ್ಕಿಟ್ಟು ಪಕ್ಷಾತೀತವಾಗಿ ಪಂಚಾಯಿತಿ ಅಭಿವೃದ್ಧಿ ಮಾಡಬೇಕು ಎಂದು ಹೇಳಿದರು.
ನೂತನ ಅಧ್ಯಕ್ಷೆ ಶಿಲ್ಪ ಮಾತನಾಡಿ, ನಾಲ್ಕನೇ ಅವಧಿಗೆ ಅಧ್ಯಕ್ಷ ಸ್ಥಾನದಲ್ಲಿ ಕೂರಿಸಿದಕ್ಕೆ ಮುಖಂಡರಿಗೆ ಧನ್ಯವಾದ ತಿಳಿಸಿದ ಅವರು ಎಲ್ಲಾ ಸದಸ್ಯರ ವಿಶ್ವಾಸ ಪಡೆದು ಆಡಳಿತ ನಡೆಸುವುದಾಗಿ ಇದಕ್ಕೆ ಎಲ್ಲರೂ ಸಹಕಾರ ನೀಡಬೇಕು ಎಂದರು.
ಉಪಾಧ್ಯಕ್ಷೆ ಮುನಿಯಮ್ಮ, ಮುಖಂಡರಾದ ನಾರಾಯಣಸ್ವಾಮಿ, ರವಿ, ಕುರಪಲ್ಲಿನರಸಿಂಹ, ಬೈಯಣ್ಣ, ಮೋಹನ್, ವೆಂಕಟಸ್ವಾಮಿಗೌಡ, ವಿಶ್ವ, ಪಿಡಿಒ ಸುನಂದ, ಕರ ವಸೂಲಿಗಾರ ಶ್ರೀನಿವಾಸ್, ಸಿಬ್ಬಂದಿ ಮಂಜುಳ, ಓಬಳೇಶ್ ಸಿರಿದಂತೆ ಪಂಚಾಯತಿಯ ಸದಸ್ಯರು ಮುಖಂಡರು ಹಾಜರಿದ್ದರು.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Saturday, April 26