ನ್ಯೂಜ್ ಡೆಸ್ಕ್:ಮಹಿಳೆ ಕೂದಲು ಹಿಡಿದು ಎಳೆದಾಡಿ ಕಾಲಿನಿಂದ ಒದ್ದು ಭೀಕರವಾಗಿ ಹಲ್ಲೆ ಮಾಡಿರುವ ದಾರುಣ ಘಟನೆ ಬೆಂಗಳೂರು ಬಳಿಅಯ ಆನೇಕಲ್ ಪಟ್ಟಣದಲ್ಲಿ ನಡೆದಿದೆ.ಮಹಿಳೆಯ ಗಂಡನ ಮನೆಯವರು ಮನೆ ಸೊಸೆ ಮೇಲೆ ಮೃಗೀಯವಾಗಿ ವರ್ತಿಸಿದ್ದಾರೆ.
ಬೆಂಗಳೂರಿನ ಆನೇಕಲ್ ಪಟ್ಟಣದ ನಾರಾಯಣಪುರದ ಅರುಣ್ 5 ವರ್ಷಗಳ ಹಿಂದೆ ಕುಟುಂಬದವರೆ ನೋಡಿದ ಹೆಣ್ಣು ಶ್ರೀಲಜಾ ಎಂಬಾಕೆಯನ್ನು ಮದುವೆಯಾಗಿದ್ದರು. ಈ ದಂಪತಿಗಳಿಗೆ ನಾಲ್ಕು ವರ್ಷದ ಹೆಣ್ಣು ಮಗು ಕೂಡ ಇದೆ.ಅದರೆ ಇತ್ತಿಚಿಗೆ ಗಂಡ ಅರುಣ್ ಅತ್ತೆ ಪ್ರಭಾವತಿ, ಮಾವ ಚೌಡಪ್ಪ ಮೂವರು ಸೇರಿಕೊಂಡು ಮಹಿಳೆಯ ಮೇಲೆ ಹಲ್ಲೆ ಮಾಡಿದ್ದು,ಗಜೇಂದ್ರ, ನರಸಿಂಹಮೂರ್ತಿ, ಲಕ್ಷ್ಮಿ, ಚೌಡಪ್ಪ ಎನ್ನುವರೂ ಸಹ ಸಹಕಾರ ನೀಡಿದಲ್ಲದೆ ಕಾಲಿನಿಂದ ಒದ್ದು ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ.
ಶ್ರೀಲಜಾ ಮೇಲೆ ಅನುಮಾನ ವ್ಯಕ್ತಪಡಿಸುತ್ತ, ವರದಕ್ಷಿಣೆ ತರುವಂತೆ ಕಿರುಕುಳ ನೀಡುತ್ತಿದ್ದು ಇದಕ್ಕಾಗಿ ಆಗಾಗ ಜಗಳ ನಡೆಯುತ್ತಿದ್ದು ಇದಕ್ಕಾಗಿ ಹಿರಿಯರ ಸಮ್ಮುಖದಲ್ಲಿ ರಾಜಿ ಪಂಚಾಯತಿ ಕೂಡ ನಡೆದಿತ್ತು. ಕಳೆದ ಒಂದು ವಾರದ ಹಿಂದೆ ಶ್ರೀಲಜಾ ತವರು ಮನೆಗೆ ತೆರಳಿದ್ದು ಇದೀಗ ಅತ್ತೆ ಮನೆಗೆ ವಾಪಸ್ಸು ಬಂದ ವೇಳೆ ಸೊಸೆಯನ್ನು ಮನೆಗೆ ಸೇರಿಸಿದೆ ರಸ್ತೆಯಲ್ಲೆ ಆಕೆಯ ಕೂದಲು ಎಳೆದಾಡಿ, ಕಾಲಿನಿಂದ ಒದ್ದು ಭೀಕರವಾಗಿ ಹಲ್ಲೆ ಮಾಡಿದ್ದಾರೆ. ಈ ಕುರಿತು ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



