ಶ್ರೀನಿವಾಸಪುರ:ತಾಲ್ಲೂಕಿನ ಮುತ್ತಕಪಲ್ಲಿ ಗ್ರಾಮ ಪಂಚಾಯಿತಿಯಲ್ಲಿ ಅಕ್ರಮಗಳ ಸರಮಾಲೆ ನಡೆದಿದೆ ಜನ ಓಡಾಡುವ ರಸ್ತೆಗೂ ಖಾತೆ ಮಾಡಿರುವ ಅಲ್ಲಿನ ಅಧಿಕಾರಿಗಳು ಅಕ್ರಮಗಳ ವ್ಯವಹಾರ ಸಾಬಿತು ಪಡಿಸಿದ್ದಾರೆ ಎಂದು ಡಾ..ಬಿ.ಅರ್. ಅಂಬೇಡ್ಕರ್ ಯುವ ವೇದಿಕೆ ಕರ್ನಾಟಕ ಸಂಘಟನೆ ಆರೋಪಿಸಿದೆ. ಮುತ್ತಕಪಲ್ಲಿ ಪಂಚಾಯಿತಿಯಲ್ಲಿ ನಡೆದಿರುವ ಅಕ್ರಮಗಳನ್ನು ತನಿಖೆ ಮಾಡುವಂತೆ ಒತ್ತಾಯಿಸಿ ಶ್ರೀನಿವಾಸಪುರ ಪಟ್ಟಣದ ತಾಲ್ಲೂಕು ಪಂಚಾಯಿತಿ ಕಾರ್ಯಲಯದ ಮುಂದೆ ಡಾ..ಬಿ.ಅರ್. ಅಂಬೇಡ್ಕರ್ ಯುವ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಜೈ ಭೀಮ್ ಶ್ರೀನಿವಾಸ್ ನೇತೃತ್ವದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದರು. ಈ ಸಮಯದಲ್ಲಿ ಮಾತಾನಾಡಿದ ಜೈ ಭೀಮ್ ಶ್ರೀನಿವಾಸ್ ಮಾತನಾಡಿ ಗ್ರಾಮಪಂಚಾಯಿತಿಯಲ್ಲಿ ದೂಡ್ಡಮಟ್ಟದಲ್ಲಿ ಅಕ್ರಮಗಳು ನಡೆದಿದ್ದು ಸಿ.ಸಿ ರಸ್ತೆಗೂ ಇ ಖಾತಾ ಮಾಡಿದ್ದಾರೆ ಅದನ್ನು ರದ್ದು ಗೊಳಿಸುವಂತೆ ಒತ್ತಾಯಿಸಿದರು. ಮುತ್ತಕಪಲ್ಲಿ ಪಂಚಾಯಿತಿಯಲ್ಲಿ ನಡೆದಿರುವ ಅಕ್ರಮಗಳ ತನಿಖೆ ಮಾಡಲು ವಿಶೇಷ ತಂಡ ರಚಿಸಬೇಕು ಹಾಗೂ ಸಿ.ಸಿ ರಸ್ತೆಗೆ ಮಾಡಿರುವ ಇ ಖಾತಾ ರದ್ದು ಗೊಳಿಸಿ ವೆಂಕಟರಾಮಪ್ಪ ಮನೆಗೆ ಹೋಗಲು ರಸ್ತೆ ಅನುಕೂಲ ಮಾಡಬೇಕು ತಾಲೂಕಿನಾದ್ಯಂತ ಆಗಿರುವ ನರೇಗಾ ಕಾಮಗಾರಿಗಳಲ್ಲಿ ಬಾರಿ ಅವ್ಯವಹಾರಗಳು ನಡೆದಿದ್ದು ವಿಶೇಷವಾಗಿ ಪರಿಶೀಲನೆ ಮಾಡಬೇಕು ತಪ್ಪಿತಸ್ಥರನ್ನು ಶಿಕ್ಷೆಗೆ ಒಳಪಡಿಸಬೇಕು ಎಂದು ಆಗ್ರಹಿಸಿ ತಾಲ್ಲೂಕು ಪಂಚಾಯಿತಿ ಇವೋಗೆ ಮನವಿ ಪತ್ರ ಸಲ್ಲಿಸಿದರು.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



