ಶ್ರೀನಿವಾಸಪುರ :ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಸಮಾಜದಲ್ಲಿ ಅದರಲ್ಲೂ ವಿಶೇಷವಾಗಿ ಗ್ರಾಮೀಣ ಜನರ ಬದುಕು ಹಸನಾಗಲು ನಿಸ್ವಾರ್ಥವಾಗಿ ಯೋಜನೆಗಳನ್ನು ಹಮ್ಮಿಕೊಂಡು ಕಾರ್ಯನಿರ್ವಹಿಸುತ್ತಿದೆ ಎಂದು ಮಾದರಿ ರೈತ ಶಂಕರರೆಡ್ಡಿ ಹೇಳಿದರು ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ಅಡ್ಡಗಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಲ್ಲಿಮೋರಪಲ್ಲಿಯ ಲಕ್ಕಮ್ಮನಕೆರೆ 2023 – 24 ನೇ ಸಾಲಿನ 669 ನೇ ನಮ್ಮೂರು ನಮ್ಮ ಕೆರೆ ನಾಮಫಲಕ ಅನಾವರಣ ಹಾಗೂ ಕೆರೆ ಹಸ್ತಾಂತರ ಕಾರ್ಯಕ್ರಮವನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು.
ಧರ್ಮಸ್ಥಳ ಸಂಸ್ಥೆ ಬಡ ಹಾಗು ಮದ್ಯಮವರ್ಗದವರ ಬಗ್ಗೆ ಕಾಳಜಿ ವಹಿಸಿ ಸೇವಾಮನೋಭಾವದಿಂದ ಕೆಲಸ ಮಾಡುತ್ತಿದೆ ಎಂದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ತಾಲೂಕು ಯೋಜನಾಧಿಕಾರಿ ಪ್ರಕಾಶ್ ಕುಮಾರ್ ಮಾತನಾಡಿ ರಾಜ್ಯದೆಲ್ಲೆಡೆ ಮುಂಗಾರು ಉತ್ತಮವಾಗಿ ಆಗುತ್ತಿದ್ದು ದಕ್ಷಿಣ ಒಳನಾಡು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಿದೆ ತಕ್ಕ ಮಟ್ಟಿಗೆ ಕೆರೆಗಳು ತುಂಬಿ ಕೃಷಿ ಚಟುವಟಿಕೆಗಳಿಗೆ ನೀರು ಬಳಕೆಯಾಗುತ್ತಿರುವುದು ಉತ್ತಮ ವಾತವರಣ ನಿರ್ಮಾಣ ಆಗಿದೆ ಎಂದರು.
ರಾಜ್ಯದಲ್ಲಿ ಇನ್ನು ಹಲವು ಜಿಲ್ಲೆಗಳಲ್ಲಿ ಮಳೆ ಅಭಾವ ಇದೆ ಜೊತೆಗೆ ಕೆಲ ಜಿಲ್ಲೆಗಳಲ್ಲಿ ಕೆರೆಗಳಲ್ಲಿ ಹೂಳು ತುಂಬಿರುವುದರಿಂದ ನೀರಿಗೆ ಬರ ಇದ್ದು ಕೃಷಿ ಚಟುವಟಿಕೆಗೆ ಸಮಸ್ಯೆಯಾಗಿದೆ ಇದನ್ನು ಅರಿತ ಪೂಜ್ಯ ಡಾಕ್ಟರ್ ಡಿ ವೀರೇಂದ್ರ ಹೆಗ್ಗಡೆಯವರು 2016ರಲ್ಲಿ ನಮ್ಮೂರು ನಮ್ಮ ಕೆರೆ ಕಾರ್ಯಕ್ರಮವನ್ನು ಜಾರಿಗೆ ತಂದು ರಾಜ್ಯಾದ್ಯಂತ ಇದುವರೆಗೂ 6105.51 ಕೋಟಿ ಅನುದಾನ ನೀಡಿ 787 ಕೆರೆಗಳನ್ನು ಅಭಿವೃದ್ಧಿಪಡಿಸಿರುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಮದ್ದಿರೆಡ್ಡಿ,ಅಶ್ವಥರೆಡ್ಡಿ, ಜಯಮ್ಮ, ಹಾಗೂ ವಲಯದ ಮೇಲ್ವಿಚಾರಕರಾದ ಉಮೇಶ್ ಕೃಷಿ ಮೇಲ್ವಿಚಾರಕರಾದ ರಮೇಶ್ ಸೇವಾ ಪ್ರತಿನಿಧಿ ನಾಗರತ್ನಮ್ಮ ಹಾಗೂ ಪ್ರಗತಿ ಬಂದು ಸ್ವಸಹಾಯ ಸಂಘದ ಸದಸ್ಯರು ಗ್ರಾಮಸ್ಥರು ಇದ್ದರು.
Breaking News
- ನಾಗಮಂಗಲ ಗಲಭೆ ಸಂಬಂಧ ಕೇರಳದ ಇಬ್ಬರ ಬಂಧನ!
- J&Kಚುನಾವಣೆ ವೇಳೆ ಎನ್ಕೌಂಟರ್ ಮೂವರು ಉಗ್ರರ ಹತ್ಯೆ ಇಬ್ಬರು ಸೈನಿಕರ ವೀರ ಮರಣ!
- BIGSHOK ಏರಿಕೆಯಾದ ಅಡುಗೆ ಎಣ್ಣೆ ರೇಟು!
- ಶ್ರೀನಿವಾಸಪುರದ KSRTC ಗಣೇಶ ವಿಸರ್ಜನೆ
- ಶ್ರೀನಿವಾಸಪುರದ ಯುವಕ ಗೋಕರ್ಣದಲ್ಲಿ ಸಮುದ್ರದಪಾಲು
- ಮದನಪಲ್ಲಿ-ತಿರುಪತಿ ಘಾಟ್ ರಸ್ತೆಯಲ್ಲಿ ಅಪಘಾತ ಕರ್ನಾಟಕದ ನಾಲ್ವರ ಸಾವು!
- ಕಮ್ಯುನಿಸ್ಟ್ ಧ್ವನಿ ಸೀತಾರಾಂ ಯೆಚೂರಿ ಇನ್ನಿಲ್ಲ!
- ಚಿಂತಾಮಣಿ ನಗರಸಭೆ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ
- ಅಮೇರಿಕಾದಲ್ಲಿ ರಾಹುಲ್-ಶಿವಕುಮಾರ್ ಭೇಟಿ ರಾಜಕೀಯ ಸಂಚಲನ
- ಮೃತ ಪತ್ರಕರ್ತನ ಕುಟುಂಬಕ್ಕೆ ಪರಿಹಾರ ಮಂಜೂರು ಮಾಡಿದ ಸಿಎಂ
Monday, September 16