ನ್ಯೂಜ್ ಡೆಸ್ಕ್:ಬಾರ್ ಮಾಡಲು ಅಡ್ಡಿಯಾಗುತ್ತದೆ ಎಂಬ ಕಾರಣಕ್ಕೆ ರಾತ್ರೋ ರಾತ್ರಿ ಜೆಸಿಬಿ ತಂದು ಕಿಡಿಗೇಡಿಗಳು ಆಂಜನೇಯ ಸ್ವಾಮಿಯ ದೇವಸ್ಥಾನವನ್ನೇ ಧ್ವಂಸ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ನಂದಗುಡಿ ಗ್ರಾಮದಲ್ಲಿ ನಡೆದಿದೆ.
ಕೆಲ ಸ್ಥಳೀಯರು ಕಳೆದ ಕೆಲ ದಿನಗಳ ಹಿಂದೆ ದೇವಸ್ಥಾನದ ಸಮೀಪದಲ್ಲೇ ಬಾರ್ ನಿರ್ಮಾಣ ಮಾಡಲು ಮುಂದಾಗಿ ಅಬಕಾರಿ ಇಲಾಖೆಗೆ ಅರ್ಜಿ ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದು ಈ ವಿಷಯ ತಿಳಿದ ದೇವಸ್ಥಾನದ ಆಡಳಿತ ಮಂಡಳಿಯವರು ಅನುಮತಿ ನೀಡದಂತೆ ಅಬಕಾರಿ ಇಲಾಖೆಗೆ ಪತ್ರ ಬರೆದಿದ್ದಾರಂತೆ.
ಉದ್ದೇಶಿತ ಬಾರ್ ಮಾಡುವ ಸಮೀಪ ಆಂಜನೇಯನ ದೇಗುಲವಿದೆ. ಮಹಿಳೆಯರು ಹಾಗೂ ಮಕ್ಕಳು ಸೇರಿದಂತೆ ಭಕ್ತರು ದೇಗುಲಕ್ಕೆ ಬರುತ್ತಾರೆ ಬಾರ್ ನಿರ್ಮಾಣ ಮಾಡಿದ್ರೆ ತೊಂದರೆಯಾಗುತ್ತೆ ಎಂಬ ಕಾರಣಕ್ಕೆ ದೇವಸ್ಥಾನ ಆಡಳಿತ ಮಂಡಳಿ ಪತ್ರ ಬರೆದಿತ್ತು. ಇದರಿಂದ ಕಿಡಿಗೇಡಿಗಳು ರಾತ್ರೋ ರಾತ್ರಿ ದೇಗುಲವನ್ನೇ ಕೆಡವಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ನಸುಕಿನಲ್ಲಿ ವಾಕಿಂಗ್ ಬಂದಿದ್ದವರು ದೇಗುಲ ನೆಲಸಮ ಆಗಿದ್ದನ್ನು ಗಮನಿಸಿ ನಂದಗುಡಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಪೊಲೀಸರು ಮತ್ತು ದೇವಸ್ಥಾನದ ಭಕ್ತರು ದಾವಿಸಿದ್ದಾರೆ.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



