ಶ್ರೀನಿವಾಸಪುರ: ಲೋಕಸಭೆ ಚುನಾವಣೆಗೆ ಭಾರತ ಚುನಾವಣಾ ಆಯೋಗವು ಶೀಘ್ರದಲ್ಲಿಯೇ ವೇಳಾಪಟ್ಟಿ ಪ್ರಕಟಿಸಲಿದ್ದು, ಚುನಾವಣೆ ಘೋಷಣೆಯಾದ ತಕ್ಷಣದಿಂದಲೇ ನೀತಿ ಸಂಹಿತೆ ಜಾರಿಗೆ ಬರುತ್ತದೆ. ಹೀಗಾಗಿ ಎಲ್ಲ ಸಿದ್ಧತೆಗಳನ್ನು ತ್ವರಿತವಾಗಿ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಅಕ್ರಂಪಾಷ ತಿಳಿಸಿದರು.
ಅವರು ಲೋಕಸಭೆ ಚುನಾವಣೆ ಸಂಬಂಧ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ನಾರಯಣ್ ಜೊತೆಗೂಡಿ ಶ್ರೀನಿವಾಸಪುರಕ್ಕೆ ಭೇಟಿ ನೀಡಿ ತಹಶೀಲ್ದಾರ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಚುನಾವಣೆ ಸಂಬಂದಿತ ತಾಲೂಕು ಆಡಳಿತ ಕೈಗೊಂಡಿರುವ ಕಾರ್ಯಚಟುವಟಿಕೆಗಳನ್ನು ವೀಕ್ಷಿಸಿದರು.
ಚುನಾವಣೆಗೆ ನೀತಿ ಸಂಹಿತೆ ಜಾರಿಯಾದ ಕೂಡಲೆ ಸಾರ್ವಜನಿಕ ಸ್ಥಳಗಳು ಸೇರಿದಂತೆ ವಿವಿಧೆಡೆ ಅಳವಡಿಸಲಾಗಿರುವ ಜಾಹೀರಾತು, ಪ್ರಕಟಣೆ, ಬ್ಯಾನರ್ಗಳನ್ನು ತೆರವುಗೊಳಿಸಿ,ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ನಡೆಸುವ ನಿಟ್ಟಿನಲ್ಲಿ ತಹಸಿಲ್ದಾರರ ಸೇರಿದಂತೆ ತಾಲೂಕಿನ ಅಧಿಕಾರಿಗಳ ಪಾತ್ರ ಮುಖ್ಯವಾಗಿದ್ದು ಚುನಾವಣಾ ಆಯೋಗದ ನಿರ್ದೇಶನವನ್ನು ಪಾಲಿಸಲು ಅಧಿಕಾರಿಗಳು ಸಹಕಾರ ನೀಡುವಂತೆ ಸೂಚಿಸಿದರು.
ಚುನಾವಣೆಗಾಗಿ ಈಗಾಗಲೆ ನಿಗದಿಪಡಿಸಲಾಗಿರುವ ಮತಗಟ್ಟೆಗಳಲ್ಲಿ ವಿಕಲಚೇತನರಿಗಾಗಿ ರ್ಯಾಂಪ್ ವ್ಯವಸ್ಥೆ ಇರುವುದು ಸೇರಿದಂತೆ ಶೌಚಾಲಯ, ವಿದ್ಯುತ್ ಸಂಪರ್ಕ ಸೇರಿದಂತೆ ಇತರೆ ಮೂಲಭೂತ ಸೌಕರ್ಯಗಳು ಇರುವ ಕುರಿತು ಪರಶೀಲಿಸಿ ಅವಶ್ಯಕತೆಗಳನ್ನು ಸರಿಪಡಿಸುವಂತೆ ಹೇಳಿದರು.
ಮತಯಂತ್ರಗಳನ್ನು ಇಡುವಂತ ಸ್ಟ್ರಾಂಗ್ ರೂಮ್ ಕುರಿತಂತೆ ಬಾಲಕೀಯರ ಕಾಲೇಜಿಗೆ ಕೋಲಾರ ಜಿಲ್ಲಾಧಿಕಾರಿ ಅಕ್ರಂಪಾಷ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ್ ರವರು ಭೇಟಿ ನೀಡಿ ಸ್ಟ್ರಾಂಗ್ ರೂಮ್ ಗಳನ್ನು ಪರಿಶೀಲನೆ ನಡೆಸಿದರು ಈ ಸಂದರ್ಭದಲ್ಲಿ ತಾಲ್ಲೂಕು ದಂಡಾಧಿಕಾರಿ ಸುಧೀಂದ್ರ,ತಾಲೂಕು ಪಂಚಾಯತಿ ಕಾರ್ಯನಿರ್ವಾಹಣಾಧಿಕಾರಿ ಶಿವಕುಮಾರಿ ಪುರಸಭೆ ಮುಖ್ಯಾಧಿಕಾರಿ ಸತ್ಯನಾರಾಯಣ ಕಂದಾಯ ನೀರಿಕ್ಷಕಾರದ ಮುನಿರೆಡ್ಡಿ,ಗುರುರಾಜರಾವ್,ಕಂದಾಯ ಇಲಾಖೆ ಅಧಿಕಾರಿಗಳು ಸಿಬ್ಬಂದಿ ಇದ್ದರು
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



