ಶ್ರೀನಿವಾಸಪುರ: ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರವಾದ ಯಲ್ದೂರು ಚೋಳರ ಕಾಲದ ಇತಿಹಾಸ ಹೊಂದಿರುವ ಪ್ರಾಚೀನ ಗ್ರಾಮ,ಆ ಕಾಲದಲ್ಲೇ ಪ್ರಮುಖ ವಸತಿ ಗ್ರಾಮವಾಗಿದ್ದ ಯಲ್ದೂರಿನ ಜನರ ನೀರಿನ ಅವಶ್ಯಕತೆ ಅನುಗುಣವಾಗಿ ಗ್ರಾಮದಲ್ಲಿ ಕುಂಟೆ (ಕೆರೆಯು) ಶತಮಾನಗಳ ಹಿಂದೆಯೆ ನಿರ್ಮಾಣ ಮಾಡಲಾಗಿದ್ದು ಜನರ ಕುಡಿಯುವ ನೀರು, ಕೃಷಿ ಮತ್ತು ಗ್ರಾಮೀಣ ಜೀವನದ ಜೀವನಾಡಿಯಾಗಿತ್ತು.ಹಾಗಾಗಿ ಇದನ್ನು ಗ್ರಾಮದ ಬದುಕಿನೊಂದಿಗೆ ಬೆಸೆದುಕೊಂಡ ಜಲಪರಂಪರೆಯ ಪ್ರಮುಖ ಕುರುಹು ಎನ್ನುತ್ತಾರೆ ಗ್ರಾಮಸ್ಥರು.
ಗ್ರಾಮದ ಹೃದಯ ಭಾಗದಲ್ಲಿರುವ ಕುಂಟೆಗೆ ಪಂಚಾಯಿತಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಮನೆಗಳ ಬಳಕೆಯ ಚರಂಡಿ ನೀರು ಸೇರುತ್ತಿರುವುದರಿಂದ ಕುಂಟೆಯ ನೀರು ರಾಡಿಯಾಗಿ, ಸುತ್ತಮುತ್ತಲಿನ ಪ್ರದೇಶದಲ್ಲಿ ಸ್ವಚ್ಛತೆ ಇಲ್ಲದೆ ಗಬ್ಬು ನಾರುತ್ತಿದೆ ಎಂದು ಗ್ರಾಮದ ಯುವಕರು ಆತಂಕ ವ್ಯಕ್ತಪಡಿಸಿದ್ದಾರೆ.
ಶಾಶ್ವತ ಪರಿಹಾರ ಕಲ್ಪಿಸಲು ಮನವಿ
ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿ ಯುವಕರು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳಿಗೆ ಪತ್ರ ಬರೆದು ಮನವಿ ಸಲ್ಲಿಸಿದ್ದು ಗ್ರಾಮದಲ್ಲಿ ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದಿರುವುದರಿಂದ ಮನೆಗಳ ಬಳಕೆಯ ನೀರು ಸೂಕ್ತ ರೀತಿಯಲ್ಲಿ ಹರಿದು ಹೋಗದೆ ಕುಂಟೆಯತ್ತ ಹರಿಯುತ್ತಿದೆ. ಇದರಿಂದ ಕುಂಟೆಯ ನೀರು ಕಲುಷಿತವಾಗುವುದರ ಜೊತೆಗೆ ಸುತ್ತಮುತ್ತ ದುರ್ವಾಸನೆ ಬೀರುತ್ತಿದ್ದು, ಸೊಳ್ಳೆಗಳ ಉತ್ಪತ್ತಿ ಹಾಗೂ ಆರೋಗ್ಯ ಸಂಬಂಧಿತ ಸಮಸ್ಯೆಗಳು ಉಂಟಾಗುವ ಆತಂಕವೂ ಎದುರಾಗಿದೆ.
ಈ ಹಿನ್ನೆಲೆಯಲ್ಲಿ ಯಲ್ದೂರು ಗ್ರಾಮದ ಕುಂಟೆಗೆ ಚರಂಡಿ ನೀರು ಸೇರುವುದನ್ನು ತಡೆಯಲು ತಾಲೂಕು ಆರೋಗ್ಯಾಧಿಕಾರಿಗಳು, ತಾಲೂಕು ಪಂಚಾಯಿತಿ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಸಮಸ್ಯೆಯ ಗಂಭೀರತೆಯನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಯುವಕರು ಒತ್ತಾಯಿಸಿದ್ದಾರೆ.
ಗ್ರಾಮದಲ್ಲಿ ಮುಚ್ಚಿದ ಚರಂಡಿ ವ್ಯವಸ್ಥೆ ಇಲ್ಲದೆ ತೆರೆದ ಚರಂಡಿ ವ್ಯವಸ್ಥೆ ಇದೆ. ಮನೆಗಳ ಬಳಕೆಯ ನೀರು ಕುಂಟೆಗೆ ನೇರವಾಗಿ ಸೇರುವುದನ್ನು ತಡೆಯಲು ಸೂಕ್ತ ಚರಂಡಿ ವ್ಯವಸ್ಥೆ ಕಲ್ಪಿಸುವುದರ ಜೊತೆಗೆ, ಅಗತ್ಯವಿರುವ ಕಡೆಗಳಲ್ಲಿ ಸೋಕ್ಪಿಟ್ (Soak Pit) ವ್ಯವಸ್ಥೆ ಕಲ್ಪಿಸುವ ಕುರಿತು ಪರಿಶೀಲನೆ ನಡೆಸಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಕುಂಟೆಯ ಸ್ವಚ್ಛತೆ, ಪರಿಸರ ಸಂರಕ್ಷಣೆ ಹಾಗೂ ಸಾರ್ವಜನಿಕ ಆರೋಗ್ಯದ ದೃಷ್ಟಿಯಿಂದ ಸಮಸ್ಯೆಯನ್ನು ತ್ವರಿತವಾಗಿ ಪರಿಹರಿಸಿ, ಕುಂಟೆಯ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛ ಹಾಗೂ ಸುಂದರವಾಗಿಡಲು ಕ್ರಮ ಕೈಗೊಳ್ಳಬೇಕು ಎಂದು ಗ್ರಾಮದ ಗಂಗಾಧರ್ ನೇತೃತ್ವದ ಯುವಕರ ಬಳಗ ಆಗ್ರಹಿಸಿದ್ದಾರೆ.
Trending
- ಶ್ರೀನಿವಾಸಪುರ:ಯಲ್ದೂರು ಇತಿಹಾಸದ ಕುಂಟೆಗೆ ಚರಂಡಿ ನೀರು: ಗಬ್ಬು ನಾರುತ್ತಿದೆ ಊರು!
- ಶ್ರೀನಿವಾಸಪುರ: ಸರ್ಕಾರಿ ಕಚೇರಿಗಳ ಆವರಣವೇ ಕಾರ್ಗತ್ತಲು: ಸರ್ಕಾರಿ ವ್ಯವಸ್ಥೆ ಇದೇನಾ?
- ನಾಯಿ ಕಾಟ ತಡೆಯಿರಿ:ಕಮಿಷನರ್ ಟೇಬಲ್ ಮೇಲೆ ನಾಯಿ ಬಿಟ್ಟು ಆಕ್ರೋಶ!
- ಶ್ರೀನಿವಾಸಪುರ:ಶಬರಿಮಲೆ ಅಲಂಕಾರದಲ್ಲಿ ಗಣೇಶೋತ್ಸವ:18 ಮೆಟ್ಟಿಲುಗಳೇ ಆಕರ್ಷಣೆ!
- ಬಿಜೆಪಿ ಶಾಸಕನ ಹೊತ್ತು ಮೆರೆದ ಪೊಲೀಸರು; ವಿಡಿಯೋ ವೈರಲ್,ಸಿಬ್ಬಂದಿ ವರ್ಗಾವಣೆ!
- ಅದ್ದೂರಿಯಾಗಿ ನಡೆದ ಕುರುಡುಮಲೆ ಶ್ರೀ ವಿನಾಯಕನ ಬ್ರಹ್ಮೋತ್ಸವ!
- ಯೂನಿವರ್ಸಿಟಿ ಎಡವಟ್ಟು: ಬಿಕಾಂ ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳು ನಾಪತ್ತೆ!
- ಶ್ರೀನಿವಾಸಪುರ ಸೇರಿ 108 ಪಟ್ಟಣಗಳಿಗೆ ರಿಂಗ್ Road ಭಾಗ್ಯ,ಸಂಪುಟ ಒಪ್ಪಿಗೆ.
Sunday, September 20



