ನ್ಯೂಜ್ ಡೆಸ್ಕ್:ವಿಭಜಿತ ಕೋಲಾರ ಜಿಲ್ಲೆಯ ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಮನೆ ಹಾಗೂ ಕಚೇರಿಯ ಮೇಲೆ ಗುರುವಾರ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಶಾಸಕರಿಗೆ ಸಂಬಂಧಿಸಿದ ಐದು ಕಡೆಗಳಲ್ಲಿ ಇ.ಡಿ ದಾಳಿ ನಡೆದಿದ್ದು ವಿದೇಶದಲ್ಲಿ ಹಣ ಹೂಡಿಕೆ ವಿಚಾರವಾಗಿ ಈ ದಾಳಿ ನಡೆದಿದೆ ಎನ್ನಲಾಗುತ್ತಿದೆ ದಾಳಿಯ ವೇಳೆ ಮಹತ್ವದ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದು ದಾಳಿಗೆ ನಿಖರವಾದ ಮಾಹಿತಿ ಹೊರಬರಬೇಕಿದೆ.
ವಿದೇಶಗಳಲ್ಲಿನ ಬ್ಯಾಂಕ್ ಖಾತೆಗಳು, ವಿದೇಶಿ ವಹಿವಾಟುಗಳಲ್ಲಿನ ಹೂಡಿಕೆಗಳು ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಈ ದಾಳಿ ನಡೆದಿರಬಹುದು ಎನ್ನಲಾಗುತ್ತಿದೆ.
ಸುಬ್ಬಾರೆಡ್ಡಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದು, ಹಾಂಗ್ ಕಾಂಗ್, ಮಲೇಷ್ಯಾ ಮತ್ತು ಜರ್ಮನಿಯಾದ್ಯಂತ ಬ್ಯಾಂಕ್ಗಳಲ್ಲಿ ಕಪ್ಪು ಹಣ ಹೊಂದಿದ್ದಾರೆ, ಸರ್ಕಾರಕ್ಕೆ ದಾಖಲೆಗಳನ್ನು ತಿಳಿಸದೆ ವಾಹನಗಳು ಮತ್ತು ಆಸ್ತಿಗಳನ್ನು ಖರೀದಿಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ದಾಳಿ ನಡೆದಿದೆ. ಎನ್ನಲಾಗುತ್ತಿದೆ.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



