ಶ್ರೀನಿವಾಸಪುರ:- ತಾಲೂಕಿನ ಕೆಲ ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು ನಿಗದಿತ ಅವಧಿಯಲ್ಲಿ ಕೆಲಸ ಮಾಡಿಕೊಡದೆ ರೈತರನ್ನು ಕಚೇರಿಗಳಿಗೆ ಅಲೆದಾಡಿಸುತ್ತ ಹಣ ಪೀಕಲು ಸಬೂಬು ಹೇಳುತ್ತ ಸತಾಯಿಸುತ್ತಿದ್ದಾರೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ ಕಾರ್ಯಕರ್ತರು ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಉಪತಹಶೀಲ್ದಾರ್ ಮೂಲಕ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ರೈತ ಸಂಘದ ರಾಜ್ಯ ಕಾರ್ಯದರ್ಶಿ ವೀರಬದ್ರಸ್ವಾಮಿ ಮಾತನಾಡಿ ಕಂದಾಯ ಇಲಾಖೆ.ತೋಟಗಾರಿಕೆ ಇಲಾಖೆ,ಕೃಷಿ ಇಲಾಖೆ ತಾಲೂಕು ಪಂಚಾಯಿತಿ, ರೇಷ್ಮೇ ಇಲಾಖೆಗಳಲ್ಲಿ ರೈತರ ಮತ್ತು ಸಾರ್ವಜನಿಕರಿಗೆ ಸ್ಪಂದನೆ ಇಲ್ಲ ಸಣ್ಣ ಕೆಲಸವಾದರೂ ಕನಿಷ್ಟ ಎರಡು ಮೂರು ತಿಂಗಳುಗಳ ಕಾಲ ಕಚೇರಿಗಳಿಗೆ ಅಲೆದಾಡಿಸುತ್ತಾರೆ ಇಲ್ಲವಾದರೆ ಲಂಚ ಕೇಳುತ್ತಾರೆ ಇದರಿಂದ ತಾಲೂಕು ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ ಎಂದು ನೇರವಾಗಿ ಆರೋಪಿಸಿದರು.
ತಾಲೂಕು ಸಂಘದ ಅಧ್ಯಕ್ಷ ನಂಬಿಹಳ್ಳಿಶ್ರೀರಾಮರೆಡ್ಡಿ ಮಾತನಾಡಿ ಭೂದಾಖಲಾತಿ ಮತ್ತು ಸರ್ವೆ ಇಲಾಖೆಗಳಲ್ಲಿ ಅಧಿಕಾರಿಗಳು ದುಡ್ಡಿಗೆ ಪ್ರಾಮುಖ್ಯತೆ ಹೆಚ್ಚು ನೀಡುತ್ತಾರೆ ಎಂದ ಅವರು ತಾಲೂಕಿನ ಆಡಳಿತ ವ್ಯವಸ್ಥೆಯಲ್ಲಿನ ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ತೊಡಗಿದ ಪರಿಣಾಮ ತಾಲೂಕಿನಲ್ಲಿ ಆಡಳಿತ ಯಂತ್ರ ಸಂಪೂರ್ಣವಾಗಿ ಕುಸದಿದೆ ಈ ಬಗ್ಗೆ ಜಿಲ್ಲಾಧಿಕಾರಿಗಳು ತಾಲೂಕಿಗೆ ಖುದ್ದು ಭೇಟಿ ನೀಡಿ ಪರಶೀಲನೆ ಮಾಡಬೇಕು ಭ್ರಷ್ಟಾಚಾರದಲ್ಲಿ ತೊಡಗಿರುವ ಅಧಿಕಾರಿಗಳ ವಿರುದ್ದ ಕ್ರಮ ಜರಿಗಿಸುವಂತೆ ಮತ್ತು ರೈತರ ಮತ್ತು ಸಾರ್ವಜನಿಕರ ಕೆಲಸ ಕಾರ್ಯಗಳು ಸುಗಮವಾಗಿ ನಡೆಯಲು ಅನಕೂಲ ವಾತವರಣ ನಿರ್ಮಿಸುವಂತೆ ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ರೈತ ಸಂಘ ಜಿಲ್ಲಾಧ್ಯಕ್ಷ ರಾಮೇಗೌಡ, ಬೈರಾರೆಡ್ಡಿ, ಗಂಗಾಧರ್,ನರಸಿಂಹಯ್ಯ ಶ್ರೀಧರ್,ಅಸ್ಲಾಂ ಪಾಷ ರಾಮಕೃಷ್ಣ ಮುಂತಾದವರು ಇದ್ದರು
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



