ಮುಳಬಾಗಿಲು: ಬೊಲೆರೊ ಟೆಂಪೊ ಡಿಕ್ಕಿ ಹೊಡೆದು ದ್ವಿಚಕ್ರ ವಾಹನಗಳಲ್ಲಿ ಹೋಗುತ್ತಿದ್ದ ಐವರು ಸ್ಥಳದಲ್ಲಿಯೆ ಸಾವನಪ್ಪಿರುವ ದಾರುಣ ಘಟನೆ ಮುಳಬಾಗಿಲು ತಾಲ್ಲೂಕು ಎನ್.ವಡ್ಡಹಳ್ಳಿಯಿಂದ ಗುಡಿಪಲ್ಲಿ ಮಾರ್ಗದಲ್ಲಿ ಬುಧವಾರ ಸಂಜೆ ನಡೆದಿದೆ ಮೃತಪಟ್ಟವರೆಲ್ಲ ಕೃಷಿ ಕಾರ್ಮಿಕರು ಎಂದು ಗುರುತಿಸಲಾಗಿದೆ.
ಮೃತ ಪಟ್ಟವರನ್ನು ಕೋನಂಗುಂಟೆ ಗ್ರಾಮದ ರಾಧಪ್ಪ 82,ಚಿಕ್ಕವೆಂಕಟರವಣಪ್ಪ 52,ಇತನ ಪತ್ನಿ ಅಲುವೇಲಮ್ಮ35, ನಾಗನಹಳ್ಳಿ ಗ್ರಾಮದ ಸಿ.ವೆಂಕಟರಾಮಪ್ಪ 45 ಇತನ ಪತ್ನಿ ಗಾಯಿತ್ರಮ್ಮ 40 ಸೇರಿದಂತೆ ಒಟ್ಟು ಆರು ಮಂದಿ ಮೃತಪಟ್ಟಿರುತ್ತಾರೆ.
ಇವರೆಲ್ಲಾ ದಿನಗೂಲಿ ಕೃಷಿ ಕಾರ್ಮಿಕರಾಗಿದ್ದು ಎನ್.ವಡ್ದಹಳ್ಳಿ ಟಮ್ಯಾಟೊ ಮಂಡಿಯಲ್ಲಿ ಕೆಲಸ ಮುಗಿಸಿಕೊಂಡು ತಮ್ಮ ಗ್ರಾಮಗಳಿಗೆ ಐದು ಮಂದಿ ಮೂವರು ದ್ವಿಚಕ್ರ ವಾಹನಗಳಲ್ಲಿ ಎನ್.ವಡ್ಡಹಳ್ಳಿ-ಗುಡಿಪಲ್ಲಿ ಮಾರ್ಗದಲ್ಲಿ ಆಂಬ್ಲಿಕಲ್ ಮುಖ್ಯ ರಸ್ತೆ ಬಳಿ ಹೋಗುತ್ತಿದ್ದಾಗ ಎದರುಗಡೆ ಅಜಾಗುರುಕತೆ ಹಾಗು ಅತಿಯಾದ ವೇಗವಾಗಿ ಬಂದಂತ ಬೊಲೊರೊ ಪಿಕ್ ಅಪ್ ವಾಹನ ಡಿಕ್ಕಿ ಹೊಡೆದಿದೆ ಡಿಕ್ಕಿಯಾಗುತ್ತಿದ್ದಂತೆ ದ್ವಿಚಕ್ರ ವಾಹನಗಳಲ್ಲಿದ್ದ ನಾಲ್ಕು ಮಂದಿ ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ ತೀವ್ರವಾಗಿ ಗಾಯಗೊಂಡಿದ್ದ ಗಾಯಿತ್ರಮ್ಮ ಆಸ್ಪತ್ರೆಯಲ್ಲಿ ಕೊನೆಯುಸಿರು ಎಳೆದಿರುತ್ತಾರೆ.ಬೊಲೊರೊ ವಾಹನ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಿರುತ್ತಾರೆ.
ಸ್ಥಳಕ್ಕೆ ಬಂದ ಜಿಲ್ಲಾ ಎಸ್ಪಿ
ನಂಗಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ನಡೆದಿದ್ದು ಸ್ಥಳಕ್ಕೆ ಕೋಲಾರ ಎಸ್ಪಿ ನಿಖಿಲ್ ಭೇಟಿ ನೀಡಿ ಪರಶೀಲನೆ ನಡೆಸಿರುತ್ತಾರೆ.ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Sunday, April 27