ನ್ಯೂಜ್ ಡೆಸ್ಕ್:ರಾಜಕೀಯ ಕ್ಷೇತ್ರ ಕಲುಷಿತಗೊಂಡಿರುವುದರಿಂದ 2028ರ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ಆದರೆ, ಸಕ್ರಿಯ ರಾಜಕಾರಣದಲ್ಲಿದ್ದು, ಜನರ ಕಷ್ಟ, ಸುಖಗಳಿಗೆ ಧ್ವನಿಯಾಗಿ ನಿಲ್ಲುತ್ತೇನೆ.ಹೀಗೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಇಂದು ಭಾನುವಾರ ಮಂಡ್ಯದ ಕೆ.ಆರ್ ಪೇಟೆಯಲ್ಲಿ ಜನತಾ ಪರಿವಾರದ ಮುಖಂಡ ಮಾಜಿ ಸ್ಪೀಕರ್ ದಿವಂಗತ.ಕೆ.ಆರ್.ಪೇಟೆ ಕೃಷ್ಣ ಅವರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಅವರು ಚುನಾವಣಾ ರಾಜಕೀಯ ನಿವೃತ್ತಿ ಮಾತು ಆಡಿದ್ದಾರೆ.
ಈ ವೇಳೆ ಅಭಿಮಾನಿಗಳು ಮುಂದಿನ 10 ವರ್ಷಗಳ ಚುನಾವಣಾ ರಾಜಕೀಯದಲ್ಲಿ ಇರುವಂತೆ ಮನವಿ ಮಾಡಿದ್ದು 2028ರ ಚುನಾವಣೆಗೆ ಸ್ಪರ್ಧೆ ಮಾಡಲ್ಲ ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ. ಈ ಮೂಲಕ 2028ಕ್ಕೆ ಸ್ಪರ್ಧೆ ಇಲ್ಲ ಎಂಬ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.
ಮುಖ್ಯಮಂತ್ರಿ ಸ್ಥಾನಕ್ಕೆ ಮೇ 28 ರಂದು ರಾಜೀನಾಮೆ ಸಲ್ಲಿಸಿದ್ದ ಸಿದ್ದರಾಮಯ್ಯ ಐದು ದಶಕಗಳ ಸುದೀರ್ಘ ರಾಜಕಾರಣದಲ್ಲಿ ದಣಿವರಿಯದ ರಾಜಕೀಯ ಮುತ್ಸದ್ದಿಯಾಗಿ ಹೋರಾಟಗಾರರಾಗಿ ಸಿದ್ದರಾಮಯ್ಯ ಯಶಸ್ವಿಯಾಗಿ ಎರಡನೇ ಅವಧಿಯ ಮುಖ್ಯಮಂತ್ರಿ ಆಡಳಿತ ಅಂತ್ಯ ಕಂಡಿತ್ತು. ಹೈಕಮಾಂಡ್ ಸೂಚನೆ ಮತ್ತು ರಾಹುಲ್ ಗಾಂಧಿಯವರ ಮಾತಿಗೆ ಗೌರವ ಕೊಟ್ಟ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸುವ ಮೂಲಕ ರಾಜ್ಯ ರಾಜಕಾರಣಕ್ಕೆ ಭಾವುಕ ತೆರೆ ಎಳೆದಿದ್ದರು.

ಮೈಸೂರು ರಾಜಕಾರಣದ ಮಣ್ಣಿನಲ್ಲಿ ಹುಟ್ಟಿ ಬೆಳೆದು ಹೋರಾಟ ಅಧಿಕಾರ ತ್ಯಾಗ, ಅಧಿಕಾರ ವಂಚಿತ, ಅಧಿಕಾರ ಅನುಭವಿಸಿದ ರಾಜಕಾರಣಿ ಅಂದರೆ ಅದು ಸಿದ್ದರಾಮಯ್ಯ ಅವರಿಂದ ಮಾತ್ರ ಸಾಧ್ಯ ಅನ್ನಬಹುದು.ಕರ್ನಾಟಕ ರಾಜಕಾರಣದಲ್ಲಿ ಕೆಲವರು ಹುದ್ದೆ ಹಿಡಿದು ದೊಡ್ಡವರಾಗುತ್ತಾರೆ. ಕೆಲವರು ದೊಡ್ಡವರಾಗಿದ್ದರಿಂದ ಹುದ್ದೆ ಹುಡುಕಿಕೊಂಡು ಬರುತ್ತದೆ. ಆದರೆ ಸಿದ್ದರಾಮಯ್ಯ ಈ ಎರಡಕ್ಕಿಂತಲೂ ವಿಭಿನ್ನವಾದ ರಾಜಕಾರಣಿ.
ಸಿದ್ದರಾಮಯ್ಯ ಕೇವಲ ಮುಖ್ಯಮಂತ್ರಿ ಅಗಿರಲಿಲ್ಲ. ಸಿದ್ದರಾಮಯ್ಯ ಕೇವಲ ಒಬ್ಬ ರಾಜಕೀಯ ನಾಯಕ ಅಲ್ಲ. ಬದಲಾಗಿ ಸಿದ್ದರಾಮಯ್ಯ ಅಂದರೆ ಒಂದು ವರ್ಗದ ಧ್ವನಿಯಾಗಿ, ಒಂದು ಸಮಾಜದ ಆತ್ಮಗೌರವ ತಂದುಕೊಟ್ಟ ಕಾರ್ಯಕರ್ತರಿಗೆ ಶಕ್ತಿಯಾಗಿ ಹಿಂದುಳಿದವರ ರಾಜಕೀಯಾದ ಭಾಷೆ ಎಂಬ ಮಟ್ಟಿಗೆ ರಾಜಕಾರಣ ಮಾಡಿಕೊಂಡು ಬಂದಿದ್ದಾರೆ ʻಸಾಮಾಜಿಕ ನ್ಯಾಯದ ಅಡಿಯಲ್ಲಿ. ಅವರ ಚುನಾವಣಾ ರಾಜಕೀಯ ಹೆಜ್ಜೆ ಗುರುತು ಇತ್ತು ನಿವೃತ್ತಿ ಘೋಷಣೆಯ ನಿರ್ಧಾರದಿಂದ ಅವರು ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ.
2028ರ ವೇಳೆಗೆ ನನಗೆ 82 ವರ್ಷವಾಗಿರುತ್ತದೆ. ಆಗ ನನ್ನ ರಾಜಕೀಯ ಜೀವನಕ್ಕೆ 50 ವರ್ಷಗಳು ಪೂರ್ಣಗೊಳ್ಳುತ್ತದೆ. 1978ರಲ್ಲಿ ನಾನು ತಾಲೂಕು ಮಂಡಳಿ ಸದಸ್ಯನಾಗಿ ರಾಜಕೀಯ ಜೀವನ ಆರಂಭಿಸಿದ್ದೆ. ಸೋಲು – ಗೆಲುವು ಎಲ್ಲವನ್ನೂ ಕಂಡಿದ್ದೇನೆ. ಆದರೆ ನಂಬಿದ ಸಿದ್ಧಾಂತಕ್ಕೆ ವಿರುದ್ಧವಾಗಿ ನಡೆದಿಲ್ಲ, ಆತ್ಮಸಾಕ್ಷಿಗೆ ದ್ರೋಹ ಬಗೆದಿಲ್ಲ ಎನ್ನುವ ಸಂತೃಪ್ತಿ ನನಗಿದೆ. ಎಂದು ತಮ್ಮ ನಿವೃತ್ತಿ ವಿಚಾರವನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.



