ಶ್ರೀನಿವಾಸಪುರ: ಅಂಬೇಡ್ಕರ್ ಪುತ್ತಳಿಗಳಿಗೆ ಮಾಲಾರ್ಪಣೆ ಮಾಡಿದರೆ ಸಾಲದು ಅವರ ಆಶಯಗಳಂತೆ ಸಮಾಜದಲ್ಲಿ ನಮ್ಮ ನಡವಳಿಕೆಗಳು ಇರಬೇಕು ಹಾಗು ಇಂದಿನ ಯುವ ಪೀಳಿಗೆ ಆಶಯಗಳನ್ನು ತಿಳಿಸುವಂತ ಪ್ರಯತ್ನ ಆಗಬೇಕಿದೆ ಎಂದು ಶಾಸಕ ರಮೇಶ್ ಕುಮಾರ್ ಹೇಳಿದರು ಅವರು, ತಾಲ್ಲೂಕು ಆಡಳಿತ ಆಯೋಜಿಸಿದ್ದ ಡಾ. ಅಂಬೇಡ್ಕರ್ ರವರ 130ನೇ ಜನ್ಮ ದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು, ಮಹಾನ್ ವ್ಯಕ್ತಿಗಳ ವಿಚಾರ ದಾರೆಗಳನ್ನು ತಿಳಿದುಕೊಳ್ಳಬೇಕು, ಅವರ ಆಶಯಗಳಂತೆ ನಮ್ಮ ನಾವು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು, ಅಂಬೇಡ್ಕರ್ ಯಾರ ಬಳಿ ಕೈ ಚಾಚದವರಲ್ಲ ಇದಕ್ಕೆ ಉದಾರಣೆಯಾಗಿ ಅವರ ಪುತ್ರ ವಿಧಿವಶರಾದಾಗ, ಅಂತ್ಯಕ್ರಿಯೆ ಸಂದರ್ಭದಲ್ಲಿ ಅವರ ಅರ್ಥಿಕ ಸ್ಥಿತಿ ಶೋಚನೀಯವಾಗಿದ್ದರೂ ಅವರು ಸ್ವಾಭಿಮಾನ ಬಿಡದೆ ಕರ್ಮಗಳನ್ನು ತೀರಿಸಿದವರು. ಸಾಮಾಜಿಕ ಅಸಮಾನತೆಯ ವಿರುದ್ದ ಹೋರಾಡಿದ ಅಂಬೇಡ್ಕರ್, ಸಂವಿಧಾನದ ಮೂಲಕ ಪ್ರಜಾಪ್ರಭುತ್ವಕ್ಕೆ ರೂಪ ನೀಡಿದವರು ಅವರು ಹಚ್ಚಿದ ದೀಪದ ಬೆಳಕು ಇವತ್ತು ನಮಗೆಲ್ಲ ದಾರಿದೀಪವಾಗಿದೆ. ಎಂದರು.
ಕಾರ್ಯಕ್ರಮಕ್ಕೂ ಮುಂಚಿತವಾಗಿ ತಾಲೂಕು ಕಚೇರಿ ಮುಂಬಾಗದಲ್ಲಿರುವ ಅಂಬೇಡ್ಕರ್ ಪುತ್ಥಳಿಗೆ ಶಾಸಕ ಮಾಲಾರ್ಪಣೆ ಮಾಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಎಂ. ಶ್ರೀನಿವಾಸನ್, ತಾಲ್ಲೂಕು ದಂಡಾಧಿಕಾರಿ ಎಸ್.ಎಂ. ಶ್ರೀನಿವಾಸ್, ತಾ.ಪಂ ಇ.ಒ. ಎಸ್. ಆನಂದ್, ಪಿ.ಎಲ್.ಡಿ. ಬ್ಯಾಂಕ್ ಅಧ್ಯಕ್ಷ ದಿಂಬಾಲ ಅಶೋಕ್, ಕೆ.ಕೆ ಮಂಜುನಾಥ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ರಾಮೇಗೌಡ, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಶ್ರೀನಿವಾಸನ್, ಕೃಷಿಇಲಾಖೆಯ ಸಹಾಯಕ ನಿರ್ದೇಶಕ ಧನಂಜಯ್ ಬಿ.ಸಿ.ಎಂ. ಇಲಾಖೆಯ ಅಧಿಕಾರಿ ಬೀರೇಗೌಡ, ವರ್ತನಹಳ್ಳಿ ವೆಂಕಟೇಶ್,ಹೊಗಳಗೆರೆ ಅಂಜಪ್ಪ, ರತ್ನಪ್ಪ ಇತರೆ ದಲಿತ ಸಂಘಟನೆಗಳ ಮುಖಂಡರು ಅಧಿಕಾರಿಗಳು ಉಪಸ್ಥತರಿದ್ದರು.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Monday, April 28