ನ್ಯೂಜ್ ಡೆಸ್ಕ್:ಕರ್ನಾಟಕದ ಶಕ್ತಿ ಯೋಜನೆಯ ರೀತಿಯಲ್ಲೇ ಆಂಧ್ರಪ್ರದೇಶ ರಸ್ತೆ ಸಾರಿಗೆ ನಿಗಮ (APSRTC) ಅಡಿಯಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆಯನ್ನು (Free Bus)ಚಂದ್ರಬಾಬು ನೇತೃತ್ವದ NDA ಸರ್ಕಾರ ಜಾರಿಗೆ ತಂದಿದೆ. ಆಗಸ್ಟ್ 15, 2025 ರಂದು ಆಂಧ್ರಪ್ರದೇಶದ ಅಮರಾವತಿಯಲ್ಲಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು, ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಮತ್ತು ಐಟಿ ಸಚಿವ ನಾರಾ ಲೋಕೇಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಮಹಿಳೆಯರೊಂದಿಗೆ ಬಸ್ನಲ್ಲಿ ಸಂಚಾರ ಆರಂಭಿಸುವ ಮೂಲಕ ಸ್ತ್ರೀ ಶಕ್ತಿ ಉಚಿತ ಬಸ್ ಪ್ರಯಾಣ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಿದ್ದಾರೆ.
ಆಂಧ್ರ ಪ್ರದೇಶದಲ್ಲಿ ನಿವಾಸ ಇರುವಂತ ಮಹಿಳೆಯರು ಮತ್ತು ಮಂಗಳಮುಖಿಯರು ಈ ಯೋಜನೆ ಪ್ರಯೋಜನವನ್ನು ಪಡೆಯಬಹುದು.ಯೋಜನೆ APSRTCಯ ಸಾಮಾನ್ಯ ಬಸ್ಗಳಿಗೆ ಮಾತ್ರ ಅನ್ವಯಿಸುತ್ತದೆ ಎನ್ನಲಾಗಿದೆ.
2024 ರ ವಿಧಾನಸಭೆ ಚುನಾವಣೆಯ ಸಮಯದಲ್ಲಿ ರಾಜ್ಯದ ಜನರಿಗೆ ನೀಡಿದ್ದ ಸೂಪರ್ 6 ಭರವಸೆಯ ಪ್ರಮುಖ ಯೋಜನೆಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣವೂ ಒಂದಾಗಿದೆ, 19 ರಿಂದ 59,ವರ್ಷ ವಯಸ್ಸಿನ ಪ್ರತಿ ಮಹಿಳೆಗೆ ಮಾಸಿಕ 1,500 ರೂ. ನೆರವು, ಯುವಕರಿಗೆ 20 ಲಕ್ಷ ಉದ್ಯೋಗ ಅಥವಾ ಮಾಸಿಕ 3,000 ರೂ. ನಿರುದ್ಯೋಗ ಭತ್ಯೆ ಮತ್ತು ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೇರಿವೆ ಅವುಗಳನ್ನು ಹಂತ ಹಂತವಾಗಿ ಜಾರಿ ಮಾಡುತ್ತಿರುವುದಾಗಿ ಹೇಳಲಾಗಿದೆ.
ಸ್ವಾತಂತ್ರ್ಯ ದಿನಾಚರಣೆಯಿಂದ ಉಚಿತ ಬಸ್ ಪ್ರಯಾಣ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲಾಗಿದ್ದು ಆಂಧ್ರದಲ್ಲಿ ವಾಸಿಸುವ ಪ್ರಮಾಣೀಕೃತ ದಾಖಲೆ ತೋರಿಸಿ ಆಂಧ್ರ ರಾಜ್ಯ ರಸ್ತೆ ಸಾರಿಗೆ ನಿಗಮದ (APSRTC) ಬಸ್ಗಳಲ್ಲಿ ಉಚಿತವಾಗಿ ಸಂಚರಿಸಬಹುದು. ಇನ್ನೂ ಪ್ರಯಾಣಿಕರ ಸುರಕ್ಷತೆಗಾಗಿ ಎಲ್ಲಾ ಬಸ್ಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿದ್ದು ಜೊತೆಗೆ ಬಸ್ ಸಿಬ್ಬಂದಿಯು ತಮ್ಮ ಬಟ್ಟೆಯ ಮೇಲೆ ಹಾಕಿಕೊಳ್ಳಬಹುದಾದಂತಹ ಕ್ಯಾಮೆರಾವನ್ನು ಅಳವಡಿಸಲು ಯೋಚಿಸಿದೆ. ಅದಲ್ಲದೇ ಬಸ್ ನಿಲ್ದಾಣಗಳಲ್ಲಿ ಫ್ಯಾನ್, ಕುರ್ಚಿ, ಕುಡಿಯುವ ನೀರು ಮತ್ತು ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳು ದೊರೆಯಲಿದೆ.
ಈ ಯೋಜನೆಗೆ ವಾರ್ಷಿಕವಾಗಿ 1,942 ಕೋಟಿ ರೂ. ಹಾಗೂ ತಿಂಗಳಿಗೆ ಸುಮಾರು 162 ಕೋಟಿ ರೂ. ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ. ರಾಜ್ಯದ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಆಧುನೀಕರಿಸುವ ಭವಿಷ್ಯದ ದೃಷ್ಟಿಕೋನದಿಂದ, ನಾಯ್ಡು ಅವರು ಭವಿಷ್ಯದಲ್ಲಿ APSRTC ಎಸಿ ಎಲೆಕ್ಟ್ರಿಕ್ ಬಸ್ಗಳನ್ನು ಮಾತ್ರ ಖರೀದಿಸಬೇಕೆಂದು ಆದೇಶದಲ್ಲಿ ತಿಳಿಸಿದ್ದಾರೆ. ಎಲ್ಲಾ APSRTC ಡಿಪೋಗಳಲ್ಲಿ ಚಾರ್ಜಿಂಗ್ ಸ್ಟೇಷನ್ಗಳನ್ನು ಸ್ಥಾಪಿಸಲು ಮುಂದಿನ ದಿನಗಳಲ್ಲಿ ಚರ್ಚೆ ನಡೆಸಲಾಗುವುದು ಎಂದು ತಿಳಿಸಲಾಗಿದೆ
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Sunday, June 7



