ಚಿಂತಾಮಣಿ:ವಾಣಿಜ್ಯ ನಗರಿ ಚಿಂತಾಮಣಿಯಲ್ಲಿ ಬರುವಂತ ಶೈಕ್ಷಣಿಕ ವರ್ಷಕ್ಕೆ ಸರ್ಕಾರಿ ಇಂಜನಿಯರಿಂಗ್ ಕಾಲೇಜು ಕಾರ್ಯರಂಭ ಆಗುವ ಸೂಚನೆ ಕಂಡುಬರುತ್ತಿದೆ.ರಾಜ್ಯದ ಉನ್ನತ ಶಿಕ್ಷಣ ಸಚಿವರು ಚಿಕ್ಕಬಳ್ಳಾಪುರ ಜಿಲ್ಲೆ ಉಸ್ತುವಾರಿ ಸಚಿವ ಹಾಗು ಚಿಂತಾಮಣಿ ಶಾಸಕ ಡಾ.ಎಂ.ಸಿ.ಸುಧಾಕರ್ ಚಿಕ್ಕಬಳ್ಳಾಪುರ ಜಿಲ್ಲೆಗೆ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಮಂಜೂರಾತಿ ಪ್ರಕ್ರಿಯೆ ಪೂರ್ಣಗೊಳಿಸಿದ್ದು ಆರಂಭಿಕವಾಗಿ ಖಾಸಗಿ ಕಟ್ಟಡದಲ್ಲಿ ಸರ್ಕಾರಿ ಇಂಜನಿಯರಿಂಗ್ ಕಾಲೇಜು ಆರಂಭವಾಗಲಿದೆ ಎನ್ನುವ ಮಾತು ದಟ್ಟವಾಗಿ ಕೇಳಿಬರುತ್ತಿದ್ದು ಮುಂದಿನ ಜುನ್ ಜುಲೈ ತಿಂಗಳಲ್ಲಿ ದಾಖಲಾತಿಗಳು ಪ್ರಾರಂಭವಾಗಿ ದಿನಗಳಲ್ಲಿ ಕಾಲೇಜಿನ ತರಗತಿಗಳು ಶುರುವಾಗಲಿದೆ ಎನ್ನವಮಾತು ಕೇಳಿಬರುತ್ತಿದೆ.
ಸಚಿವ ಡಾ.ಸುಧಾಕರ್ ಹೇಳಿರುವಂತೆ ಚಿಂತಾಮಣಿ ನಗರದ ಬೆಂಗಳೂರು ರಸ್ತೆಯಲ್ಲಿ ಯಾದವ ಹಾಸ್ಟಲ್ ಬಳಿ ಸುಮಾರು ಹತ್ತು ಎಕರೆ ಜಾಗವನ್ನು ಇಂಜನಿಯರಿಂಗ್ ಕಾಲೇಜು ನಿರ್ಮಿಸಲು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಗೆ ಮಂಜೂರು ಮಾಡಿದ್ದು ಆರಂಭಿಕ 70 ಕೋಟಿ ಅಂದಾಜು ವೆಚ್ಚದಲ್ಲಿ ಎಂಜಿನಿಯರಿಂಗ್ ಕಾಲೇಜನ್ನು ನಿರ್ಮಿಸುವ ಬಗ್ಗೆ ತಿಳಿಸಿದ್ದಾರೆ, ಕಾಲೇಜು ಶಿಕ್ಷಣಕ್ಕೆ ಹೆಚ್ಚಿನ ಅನುದಾನ ನೀಡಲು ರಾಜ್ಯ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ ಅದರಲ್ಲೂ ವೃತ್ತಿ ಪರ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲಿದೆ ಎಂದಿರುತ್ತಾರೆ.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



