- ಡಾ. ವಿಷ್ಣುವರ್ಧನ್ ಅಮೃತ ಮಹೋತ್ಸವ
- ಸೆಪ್ಟೆಂಬರ್ 27, 2026,ಬೆಳಗ್ಗೆ 6ರಿಂದ ರಾತ್ರಿ 12ರವರೆಗೆ
- ಅರ್ಧ ಕಿಲೋಮೀಟರ್ ಉದ್ದದ ಬೃಹತ್ ಧ್ವಜದ
- ಮೆರವಣಿಗೆ ಟೌನ್ಹಾಲ್ ನಿಂದ ಹೋರಟು
- ನಾಯಂಡಹಳ್ಳಿ ನಂದಿ ಲಿಂಕ್ ಗ್ರೌಂಡ್ ನಡಯಲಿದೆ.
ನ್ಯೂಜ್ ಡೆಸ್ಕ್: ಕನ್ನಡದ ಖ್ಯಾತ ನಟ ಡಾ.ವಿಷ್ಣುವರ್ಧನ್ (Dr. Vishnuvardhan) ಅವರ 75ನೇ ಜನ್ಮವರ್ಷದ ಸ್ಮರಣಾರ್ಥ ಆಯೋಜಿಸಲಾಗುತ್ತಿರುವ ‘ಡಾ. ವಿಷ್ಣುವರ್ಧನ್ ಅಮೃತಮಹೋತ್ಸವ’ ಕಾರ್ಯಕ್ರಮವನ್ನು ಡಾ. ವಿಷ್ಣುವರ್ಧನ್ ಅಭಿಮಾನಿಗಳೆ ಆಯೋಜಿಸಿರುವುದು ವಿಶೇಷ.
ಕನ್ನಡ ಚಿತ್ರರಂಗದ ಮೇರು ನಟ ಡಾ. ವಿಷ್ಣುವರ್ಧನ್ ಅವರ ಜೀವನ, ಸಾಧನೆ ಮತ್ತು ಕನ್ನಡ ಚಿತ್ರರಂಗಕ್ಕೆ ಅವರು ನೀಡಿದ ಅಪಾರ ಕೊಡುಗೆಯನ್ನು ಸ್ಮರಿಸುವ ಸದುದ್ದೇಶದಿಂದ ಸೆಪ್ಟೆಂಬರ್ 27ರಂದು ಬೆಂಗಳೂರಿನ ನಾಯಂಡಹಳ್ಳಿಯ ನಂದಿ ಲಿಂಕ್ ಗ್ರೌಂಡ್ ಮೈದಾನದಲ್ಲಿ ‘ಡಾ. ವಿಷ್ಣುವರ್ಧನ್ ಅಮೃತಮಹೋತ್ಸವ’ವನ್ನು ಆಯೋಜಿಸಲಾಗಿದೆ ಎಂದು ಡಾ.ವಿಷ್ಣುವರ್ಧನ್ ಅಭಿಮಾನಿ ವೀರಕಪುತ್ರ ಶ್ರೀನಿವಾಸ ತಿಳಿಸಿದ್ದಾರೆ.
ಡಾ. ವಿಷ್ಣುವರ್ಧನ್ ಅವರ ವ್ಯಕ್ತಿತ್ವ ಮತ್ತು ಸಾಧನೆಯನ್ನು ಇಡೀ ಚಿತ್ರರಂಗ ಒಗ್ಗೂಡಿ ಸಂಭ್ರಮಿಸಿದ ಉದಾಹರಣೆಗಳು ವಿರಳವಾಗಿವೆ. ಈ ಹಿನ್ನೆಲೆಯಲ್ಲಿ ಅವರ 75ನೇ ಜನ್ಮವರ್ಷವನ್ನು ಅಮೃತಮಹೋತ್ಸವವಾಗಿ ಆಚರಿಸುವ ಮೂಲಕ ಅವರ ಸಾಧನೆಗಳ ಮೇಲೆ ಮತ್ತೆ ಮತ್ತೆ ಬೆಳಕು ಚೆಲ್ಲಲು ಮತ್ತು ಮುಂದಿನ ಪೀಳಿಗೆಗೆ ಪರಿಚಯಿಸುವ ಮಹತ್ವದ ಪ್ರಯತ್ನವಾಗಿದೆ ಎಂದು ಅವರು ಹೇಳಿದರು.
ಅಭಿಮಾನಿಗಳ ಪ್ರೀತಿಯ ‘ಯಜಮಾನ’ ಡಾ. ವಿಷ್ಣುವರ್ಧನ್ ಅವರ ಅಮೃತ ಮಹೋತ್ಸವವನ್ನು ಐತಿಹಾಸಿಕವಾಗಿ ಆಚರಿಸಲು ವಿಷ್ಣು ಸೇನಾನಿಗಳು ಸಜ್ಜಾಗುತ್ತಿದ್ದು ಬರೋಬ್ಬರಿ 18 ಗಂಟೆಗಳ ಕಾಲ ನಡೆಯಲಿರುವ ಈ ಬೃಹತ್ ಮಹೋತ್ಸವಕ್ಕೆ ಈಗಾಗಲೇ ಸಿದ್ಧತೆಗಳು ಆರಂಭವಾಗಿವೆ. ನೂರಾರು ಜನರ ಶ್ರಮ, ಸಾವಿರಾರು ಅಭಿಮಾನಿಗಳ ಸಹಕಾರ ಹಾಗೂ ತಿಂಗಳುಗಳ ಪೂರ್ವತಯಾರಿಯೊಂದಿಗೆ ಈ ಮಹೋತ್ಸವವನ್ನು ಅತ್ಯಂತ ಅದ್ಧೂರಿಯಾಗಿ ರೂಪಿಸಲಾಗುತ್ತಿದ್ದು ಕಾರ್ಯಕ್ರಮದಲ್ಲಿ ಡಾ.ವಿಷ್ಣುವರ್ಧನ್ ಅವರ ಜೊತೆ ನಟಿಸಿದ್ದ ದಕ್ಷಿಣ ಭಾರತದ ಖ್ಯಾತ ನಟ ನಟಿಯರು ಪಾಲ್ಗೋಳ್ಳಲಿದ್ದಾರೆ.ಅವರೊಂದಿಗೆ ಕೆಲಸ ಮಾಡಿದ ಎಲ್ಲ ನಿರ್ದೇಶಕರು, ನಿರ್ಮಾಪಕರು ಹಾಗೂ ತಂತ್ರಜ್ಞರನ್ನು ಈ ಕಾರ್ಯಕ್ರಮದ ವೇದಿಕೆಗೆ ಕರೆತರಲು ಪ್ರಯತ್ನ ನಡೆದಿದ್ದು, ರಾಜ್ಯದ ಪ್ರಮುಖ ರಾಜಕಾರಣಿಗಳು ಸೇರಿದಂತೆ ಖ್ಯಾತನಾಮರು ಕಾರ್ಯಕ್ರಮದಲ್ಲಿ ವೇದಿಕೆ ಹಂಚಿಕೊಳ್ಳಲಿದ್ದಾರಂತೆ.
ರಾಜ್ಯದ ವಿವಿಧ ಜಿಲ್ಲೆಗಳಿಂದ ಸುಮಾರು 25 ಸಾವಿರಕ್ಕೂ ಹೆಚ್ಚು ಡಾ.ವಿಷ್ಣುವರ್ಧನ್ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆಯಿದ್ದು, ಕನ್ನಡ ಚಿತ್ರರಂಗದ ಕಲಾವಿದರು, ನಿರ್ದೇಶಕರು, ನಿರ್ಮಾಪಕರು, ತಂತ್ರಜ್ಞರು, ಸಾಹಿತ್ಯ ಕ್ಷೇತ್ರದ ಗಣ್ಯರು ಹಾಗೂ ಸಂಗೀತ ಕ್ಷೇತ್ರದ ದಿಗ್ಗಜರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದರು. ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿ ಅರ್ಧ ಕಿಲೋಮೀಟರ್ ಉದ್ದದ ಬೃಹತ್ ಧ್ವಜದ ಮೆರವಣಿಗೆ ನಡೆಯಲಿದ್ದು ಸೆಪ್ಟೆಂಬರ್ 27ರಂದು ಬೆಳಗ್ಗೆ 6 ಗಂಟೆಗೆ ಬೆಂಗಳೂರಿನ ಟೌನ್ ಹಾಲ್ನಿಂದ ಆರಂಭವಾಗುವ ಮೆರವಣಿಗೆ ನಾಯಂಡಹಳ್ಳಿಯವರೆಗೆ ಸಾಗಲಿದೆ. ಅರ್ಧ ಕಿಲೋಮೀಟರ್ ಉದ್ದದ ಬೃಹತ್ ಧ್ವಜವನ್ನು ಸಾವಿರಾರು ವಿಷ್ಣುವರ್ಧನ್ ಅಭಿಮಾನಿಗಳು ಹೆಮ್ಮೆಯಿಂದ ಹೊತ್ತು ಸಾಗಲಿದ್ದಾರೆ. ಇದು ಅಮೃತ ಮಹೋತ್ಸವದ ಅತ್ಯಂತ ವಿಶೇಷ ಹಾಗೂ ಸ್ಮರಣೀಯ ಕ್ಷಣಗಳಲ್ಲಿ ಒಂದಾಗಲಿದೆ.

ಮೆರವಣಿಗೆಯ ನಂತರ ನಾಯಂಡಹಳ್ಳಿಯ ನಂದಿ ಲಿಂಕ್ ಗ್ರೌಂಡ್ನಲ್ಲಿ ನಡೆಯುವ ದಿನವಿಡೀ ವಿವಿಧ ಕಾರ್ಯಕ್ರಮಗಳು ಬೆಳಗ್ಗೆ 6 ಗಂಟೆಗೆ ಆರಂಭವಾಗಿ ರಾತ್ರಿ 12 ಗಂಟೆಯವರೆಗೂ ನಡೆಯಲಿದೆ, ಡಾ. ವಿಷ್ಣುವರ್ಧನ್ ಅಮೃತ ಮಹೋತ್ಸವ



