ಶ್ರೀನಿವಾಸಪುರ: ತಾಲೂಕು ಶಿಕ್ಷಕರ ಸಂಘದಲ್ಲಿ ಗುಂಪುಗಾರಿಕೆ ಹಾಗೂ ಆಂತರಿಕ ಭಿನ್ನಮತದ ಆರೋಪಗಳು ಕೇಳಿಬಂದಿದ್ದು, ಶಿಕ್ಷಕರ ದಿನಾಚರಣೆಯಂದೇ ಭಿನ್ನಮತ ಭುಗಿಲೆದ್ದು ಮತ್ತಷ್ಟು ಚರ್ಚೆಗೆ ಗ್ರಾಸವಾಗಿದೆ.
ಶಿಕ್ಷಕರ ಸಂಘದ ಚುನಾಯಿತ ಸದಸ್ಯರು ಹಾಗೂ ಪದಾಧಿಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ, ಕೆಲ ಪ್ರಭಾವಿ ಶಿಕ್ಷಕರು ವೈಯಕ್ತಿಕ ಹಿತಾಸಕ್ತಿಗೆ ಆದ್ಯತೆ ನೀಡಿ, ಶಿಷ್ಟಾಚಾರವನ್ನು ಗಾಳಿಗೆ ತೂರಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಸಂಘದ ಚುನಾಯಿತ ಪ್ರತಿನಿಧಿಗಳನ್ನು ಬದಿಗಿಟ್ಟು ಕಾರ್ಯಕ್ರಮ ಆಯೋಜಿಸಿರುವುದು ಸಂಘದ ಸದಸ್ಯರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ ಎನ್ನಲಾಗುತ್ತಿದೆ. ಸಂಘದ ಹೆಸರಿನಲ್ಲಿ ನಡೆಯುವ ಯಾವುದೇ ಕಾರ್ಯಕ್ರಮಗಳಲ್ಲಿ ಚುನಾಯಿತ ಸದಸ್ಯರು ಸೇರಿದಂತೆ ಎಲ್ಲ ಶಿಕ್ಷಕರನ್ನು ಸಮಾನವಾಗಿ ಒಳಗೊಂಡು, ಒಗ್ಗಟ್ಟಿನಿಂದ ಕಾರ್ಯಕ್ರಮ ನಡೆಸಬೇಕೆಂಬ ಅಭಿಪ್ರಾಯವೂ ಶಿಕ್ಷಕರ ವಲಯದಲ್ಲಿ ವ್ಯಕ್ತವಾಗಿದೆ.
ಇನ್ನು ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನೇ ಬಣಗಳಾಗಿ ವಿಂಗಡಿಸಿ ನಡೆಸಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ. ಜಿಲ್ಲಾ ಮಟ್ಟದಲ್ಲಿ ಪ್ರಶಸ್ತಿ ಪಡೆದ ಶಿಕ್ಷಕರನ್ನೂ ಕಾರ್ಯಕ್ರಮಕ್ಕೆ ಸೌಜನ್ಯಕ್ಕೂ ಆಹ್ವಾನಿಸದೆ ಅವಮಾನಿಸಲಾಗಿದೆ ಎಂಬ ಮಾತುಗಳು ಶಿಕ್ಷಕರ ವಲಯದಲ್ಲಿ ಕೇಳಿಬರುತ್ತಿವೆ.
ಶಿಕ್ಷಕರ ಹಿತಾಸಕ್ತಿಯನ್ನು ಕಡೆಗಣಿಸಿ, ಪ್ರಭಾವಿ ಶಿಕ್ಷಕರೇ ದಿನಾಚರಣೆ ಕಾರ್ಯಕ್ರಮದ ವೇದಿಕೆಯಲ್ಲಿ ಮೇಲುಗೈ ಸಾಧಿಸಿದ್ದಾರೆ ಎಂದು ಕೆಲ ಶಿಕ್ಷಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಶಿಕ್ಷಕರ ದಿನಾಚರಣೆ ಕಾರ್ಯಕ್ರಮಕ್ಕೆ ಸಹಕಾರ ನೀಡಿದ ದಾನಿಗಳು ಹಾಗೂ ಹಿತೈಷಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸದೆ ನಿರ್ಲಕ್ಷಿಸಲಾಗಿದೆ ಎಂಬ ಆರೋಪವೂ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ.
ತಾಲೂಕು ಶಿಕ್ಷಕರ ಸಂಘದಲ್ಲಿನ ಭಿನ್ನಾಭಿಪ್ರಾಯಗಳು ದಿನದಿಂದ ದಿನಕ್ಕೆ ಹೊಸ ರೂಪದಲ್ಲಿ ಬಹಿರಂಗವಾಗುತ್ತಿರುವುದು ಸಂಘದ ಪದಾಧಿಕಾರಿಗಳ ಕಾರ್ಯವೈಖರಿ ಕುರಿತು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ಈ ಬೆಳವಣಿಗೆ ಕುರಿತು ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಪ್ರತಿಕ್ರಿಯೆ ಏನು? ಚುನಾಯಿತ ಸದಸ್ಯರನ್ನು ಕಾರ್ಯಕ್ರಮದಿಂದ ದೂರವಿಡಲು ಕಾರಣವೇನು? ಜಿಲ್ಲಾ ಮಟ್ಟದಲ್ಲಿ ಪ್ರಶಸ್ತಿ ಪಡೆದ ಶಿಕ್ಷಕರನ್ನು ಆಹ್ವಾನಿಸದಿರುವುದಕ್ಕೆ ಕಾರಣವೇನು? ಎಂಬ ಪ್ರಶ್ನೆಗಳು ಇದೀಗ ಶಿಕ್ಷಕರ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿವೆ.
Trending
- ಶ್ರೀನಿವಾಸಪುರ:ತಾಲೂಕು ಶಿಕ್ಷಕರ ಸಂಘದಲ್ಲಿ ಗುಂಪುಗಾರಿಕೆ,ಭುಗಿಲೆದ್ದ ಭಿನ್ನಮತ!
- ನಮ್ಮ ಜಮೀನು ನಮಗೆ ವಾಪಸ್ಸು ಕೋಡಿ DFO ಕಚೇರಿ ಮುಂದೆ ಪ್ರತಿಭಟನೆ!
- ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಕೊತ್ತೂರು ಮಂಜುನಾಥ್ ಅವಿರೋಧ ಆಯ್ಕೆ!
- ಶ್ರೀನಿವಾಸಪುರ: ಶಿಕ್ಷಕನ ವಿರುದ್ಧ ದೂರು ವಿರೋಧಿಸಿ ನೌಕರರ ಸಂಘದ ಬೃಹತ್ ಪ್ರತಿಭಟನೆ!
- ಹಿಂದುಳಿದ ಜಾತಿಗಳ ಜನಜಾಗೃತಿ ಸಮಾವೇಶಕ್ಕೆ ಶ್ರೀನಿವಾಸಪುರದಿಂದ ಜನ!
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
Thursday, September 10



