ಶ್ರೀನಿವಾಸಪುರ: ತಾಲೂಕಿನಲ್ಲಿ ಹೊಸ ರಾಜಕಿಯ ಭಾಷ್ಯ ಬರೆಯಲು ಮುಂದಾಗಿ ಕಳೆದ ಒಂದು ವರ್ಷದಿಂದ ಪಕ್ಷೇತರ ಅಭ್ಯರ್ಥಿಯಂದು ಕ್ಷೇತ್ರದಾದ್ಯಂತ ಸುತ್ತಾಡಿ ಪರಿಚಿತರಾಗಿರುವ ಗುಂಜೂರು ಶ್ರೀನಿವಾಸರೆಡ್ದಿ 2023ರ ವಿಧಾನಸಭಾ ಘೋಷಣೆಯಾದ ಮರು ದಿನವೆ ಬಿಜೆಪಿ ಸೇರಲಿದ್ದಾರೆ ಎಂದು ಹೇಳಲಾಗುತ್ತಿದೆ.
ಗುಂಜೂರು ಶ್ರೀನಿವಾಸರೆಡ್ದಿ ಅವರ ಆಪ್ತ ವಲಯದ ಮುಖಂಡರು ಹೇಳುವಂತೆ ದಿನಾಂಕ 30/3/23 ಗುರುವಾರ ಶ್ರೀರಾಮನವಮಿಯಂದು ಶ್ರೀನಿವಾಸರೆಡ್ದಿ ಬಿಜೆಪಿಗೆ(BJP) ಸೇರಲಿದ್ದಾರಂತೆ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿರುವುದಾಗಿ ಹೇಳುತ್ತಾರೆ.
ಬೆಂಗಳೂರು ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನಾಥ ಭವನದಲ್ಲಿ ಗುರುವಾರ ಮಧ್ಯಾಹಃ ವಿಧಾನಪರಿಷತ್ ಮುಖ್ಯ ಸಚೇತಕ ವೈ.ಎ.ನಾರಯಣಸ್ವಾಮಿ ನೇತೃತ್ವದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ತಮ್ಮ ಅಪಾರ ಬೆಂಬಲಿಗರೊಂದಿಗೆ ಬಿಜೆಪಿ ಪಕ್ಷ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.
ತಮ್ಮ ಬೆಂಬಲಿಗರನ್ನು ಬೆಂಗಳೂರಿಗೆ ಕರೆದೊಯ್ಯಲು ಗುಂಜೂರು ಶ್ರೀನಿವಾಸರೆಡ್ದಿ ಸುಮಾರು ಇಪ್ಪತ್ತಕ್ಕೂ ಹೆಚ್ಚು ಬಸ್ಸುಗಳನ್ನು ಮತ್ತು ಟಾಟಾ ಸುಮೊಗಳನ್ನು ಬಾಡಿಗೆಗೆ ನಿಗದಿಪಡೆಸಿರುವುದಾಗಿ ಹೇಳಲಾಗುತ್ತಿದೆ.
Breaking News
- ನಾಗಮಂಗಲ ಗಲಭೆ ಸಂಬಂಧ ಕೇರಳದ ಇಬ್ಬರ ಬಂಧನ!
- J&Kಚುನಾವಣೆ ವೇಳೆ ಎನ್ಕೌಂಟರ್ ಮೂವರು ಉಗ್ರರ ಹತ್ಯೆ ಇಬ್ಬರು ಸೈನಿಕರ ವೀರ ಮರಣ!
- BIGSHOK ಏರಿಕೆಯಾದ ಅಡುಗೆ ಎಣ್ಣೆ ರೇಟು!
- ಶ್ರೀನಿವಾಸಪುರದ KSRTC ಗಣೇಶ ವಿಸರ್ಜನೆ
- ಶ್ರೀನಿವಾಸಪುರದ ಯುವಕ ಗೋಕರ್ಣದಲ್ಲಿ ಸಮುದ್ರದಪಾಲು
- ಮದನಪಲ್ಲಿ-ತಿರುಪತಿ ಘಾಟ್ ರಸ್ತೆಯಲ್ಲಿ ಅಪಘಾತ ಕರ್ನಾಟಕದ ನಾಲ್ವರ ಸಾವು!
- ಕಮ್ಯುನಿಸ್ಟ್ ಧ್ವನಿ ಸೀತಾರಾಂ ಯೆಚೂರಿ ಇನ್ನಿಲ್ಲ!
- ಚಿಂತಾಮಣಿ ನಗರಸಭೆ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ
- ಅಮೇರಿಕಾದಲ್ಲಿ ರಾಹುಲ್-ಶಿವಕುಮಾರ್ ಭೇಟಿ ರಾಜಕೀಯ ಸಂಚಲನ
- ಮೃತ ಪತ್ರಕರ್ತನ ಕುಟುಂಬಕ್ಕೆ ಪರಿಹಾರ ಮಂಜೂರು ಮಾಡಿದ ಸಿಎಂ
Monday, September 16