ನ್ಯೂಜ್ ಡೆಸ್ಕ್: ಬಂಗಾಳ ಕೊಲ್ಲಿಯಲ್ಲಿ ಹವಾಮಾನ ವೈಪರೀತ್ಯದಿಂದ ವಾಯುಭಾರ ಕುಸಿತವಾಗಿ ಏರ್ಪಡುವ ವಾತವರಣದ ಹಿನ್ನಲೆಯಲ್ಲಿ ಕರ್ನಾಟಕ, ಕೇರಳ, ತಮಿಳುನಾಡು, ಆಂಧ್ರಪ್ರದೇಶ ಮತ್ತು ಪುದುಚೇರಿಯಲ್ಲಿ ನವೆಂಬರ್ 14ರ ವರೆಗೆ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿದೆ ಕೆಲವೊಂದು ಕಡೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.ಕರ್ನಾಟಕದ ಕೋಲಾರ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹೇಳಿದೆ.
ಕರ್ನಾಟಕದ ಕೋಲಾರ ಜಿಲ್ಲೆ ಸೇರಿದಂತೆ ಚಿಕ್ಕಬಳ್ಳಾಪುರ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯನಗರ, ಯಾದಗಿರಿಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಆಂಧ್ರದ ಅನ್ನಮಯ್ಯ,ಚಿತ್ತೂರು ಮತ್ತು ತಿರುಪತಿ,ಸೀಮಾ,ನೆಲ್ಲೂರು ಹಾಗು ಕಾಕಿನಾಡ ಜಿಲ್ಲೆಗಳಲ್ಲಿ ನಾಳೆಯಿಂದಲೆ ಮಳೆಯಾಗಲಿದೆ ಎಂದು ತಿಳಿಸಿದೆ. ಮಳೆಯ ಹಿನ್ನೆಲೆಯಲ್ಲಿ ಜನರು ಜಾಗೃತರಾಗಿರಲು ಅಲ್ಲಿನ ಸರ್ಕಾರ ಸೂಚಿಸಿದೆ.
ಕರ್ನಾಟಕದಲ್ಲಿ ತಾಪಮಾನ ಕಡಿಮೆಯಾದಂತೆ ಬೆಳಗ್ಗೆ ಮತ್ತು ಸಂಜೆ ಚಳಿ ಹೆಚ್ಚಾಗಿದ್ದು ನವೆಂಬರ್ 21 ರ ನಂತರ ದಟ್ಟವಾದ ಮಂಜಿನಿಂದಾಗಿ ತಾಪಮಾನವು ಇನ್ನಷ್ಟು ಕಡಿಮೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



