ಶ್ರೀನಿವಾಸಪುರ: ತಾಲೂಕಿನಲ್ಲಿ ಕಳೆದ ಹತ್ತು ವರ್ಷಗಳಿಂದ ಹಿಂದುಳಿದ ಸಮಾಜಗಳು ತೀವ್ರ ನಿರ್ಲಕ್ಷ್ಯಕ್ಕೆ ಒಳಗಾಗಿದೆ ಎಂದು ಜಿಲ್ಲಾಪಂಚಾಯಿತಿ ಮಾಜಿ ಸದಸ್ಯ ಇಂದಿರಾಭವನ್ ರಾಜಣ್ಣ ಹೇಳಿದರು ಅವರು ಇಂದು ತಾಲೂಕಿನ ಯಲ್ದೂರು ಹೋಬಳಿ ಕೊಳತೂರು ಹಾಗು ಲಕ್ಷ್ಮಿಸಾಗರ ಪಂಚಾಯಿತಿಗಳಲ್ಲಿ ಜೆಡಿಎಸ್ ಅಭ್ಯರ್ಥಿ ವೆಂಕಟಶಿವಾರೆಡ್ದಿ ಪರ ಪ್ರಚಾರ ನಡೆಸಿ ಮಾತನಾಡಿದರು, ವೆಂಕಟಶಿವಾರೆಡ್ಡಿಯವರು ಶಾಸಕರಾಗಿದ್ದ ಅವಧಿಯಲ್ಲಿ ಎಲ್ಲಾ ಸಮಾಜಗಳಿಗೆ ನ್ಯಾಯೋಚಿತವಾದ ಸಾಮಜಿಕ ನ್ಯಾಯ ಒದಗಿಸಿದ್ದರು ಸರ್ಕಾರದ ಸೌಲಭ್ಯಗಳ ಹಂಚಿಕೆ ಸಂದರ್ಭದಲ್ಲೂ ಅರ್ಹ ಬಡ ಫಲಾನುಭವಿಗಳನ್ನು ಪಕ್ಷಾತೀತವಾಗಿ ಧರ್ಮಾತೀತವಾಗಿ ಗುರುತಿಸಿ ನ್ಯಾಯ ಒದಗಿಸಿದ್ದಾರೆ ಆದರೆ ಈಗ ಕಳೆದ ಹತ್ತು ವರ್ಷಗಳಿಂದ ಕ್ಷೇತ್ರದಲ್ಲಿ ಸಾಮಜಿಕವಾಗಿ ಹಿಂದುಳಿದ ಸಮಾಜಗಳಿಗೆ ಅನ್ಯಾಯವಾಗಿದೆ ಎಂದು ದೂರಿದರು ವೆಂಕಟಶಿವಾರೆಡ್ಡಿ ಪರಿಶಿಷ್ಟ ಜಾತಿ ಜನಾಂಗ ಮತ್ತು ಹಿಂದುಳಿದ ವರ್ಗಗಳ ಹಿತಚಿಂತಕರಾಗಿದ್ದು ಅವರು ಮತ್ತೆ ಶಾಸಕರಾದರೆ ಹಿಂದುಳಿದ ಸಮಾಜಗಳಿಗೆ ನ್ಯಾಯ ಸಿಗುತ್ತದೆ ಎಂಬ ಭರವಸೆ ಇದ್ದು ಶೋಷಿತ ಸಮಾಜಗಳಿಗೆ ನ್ಯಾಯ ಒದಗಿಸಲು ಮತ್ತು ಕ್ಷೇತ್ರದ ಅಭಿವೃದ್ಧಿಗೆ ಜೆಡಿಎಸ್ ಅಭ್ಯರ್ಥಿ ವೆಂಕಟಶಿವಾರೆಡ್ಡಿಯನ್ನು ಬೆಂಬಲಿಸುವಂತೆ ಹೇಳಿದರು.
ಕಾರ್ಯಕ್ರಮದಲ್ಲಿ ಹಿರಿಯ ಮುಖಂಡ ಶೇಷಾಪುರ ಡಾ.ಗೋಪಾಲ್,ಸಹಕಾರಿ ಧುರಿಣ ಗೋವಿಂದಗೌಡ,ಮಂಜಲನಗರ ಮಂಜಲನಗರ ರಘುನಾಥ್,ಶೆಟ್ಟಿಹಳ್ಳಿ ಮಂಜು ಮುಂತಾದವರು ಇದ್ದರು
Breaking News
- ಮದನಪಲ್ಲಿ-ತಿರುಪತಿ ಘಾಟ್ ರಸ್ತೆಯಲ್ಲಿ ಅಪಘಾತ ಕರ್ನಾಟಕದ ನಾಲ್ವರ ಸಾವು!
- ಕಮ್ಯುನಿಸ್ಟ್ ಧ್ವನಿ ಸೀತಾರಾಂ ಯೆಚೂರಿ ಇನ್ನಿಲ್ಲ!
- ಚಿಂತಾಮಣಿ ನಗರಸಭೆ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ
- ಅಮೇರಿಕಾದಲ್ಲಿ ರಾಹುಲ್-ಶಿವಕುಮಾರ್ ಭೇಟಿ ರಾಜಕೀಯ ಸಂಚಲನ
- ಮೃತ ಪತ್ರಕರ್ತನ ಕುಟುಂಬಕ್ಕೆ ಪರಿಹಾರ ಮಂಜೂರು ಮಾಡಿದ ಸಿಎಂ
- ಚಿಂತಾಮಣಿ ಎಪಿಎಂಸಿ ಅಂಗಡಿಯಲ್ಲಿ ಲಕ್ಷಾಂತರ ಹಣ ಎಗರಿಸಿದ ಖದೀಮರು
- ಹಳೆ ವಸ್ತುಗಳ ಗುಜರಿ ವ್ಯಾಪಾರಿಗೆ ಲಾಟರಿಯಲ್ಲಿ ಕೋಟಿಗಟ್ಟಲೆ ದುಡ್ಡು!
- ಪತ್ರಕರ್ತರ ರೈಲ್ವೆ ಪಾಸ್ ಸೌಲಭ್ಯ ಆರಂಭಿಸಲು ಮನವಿ
- ದೇಶದ ಮೊದಲ MPAX ಪ್ರಕರಣ ಪತ್ತೆ!
- ನಂದಮೂರಿ ಬಾಲಕೃಷ್ಣ ಮಗ ಮೊಕ್ಷಜ್ಞ ಸಿನಿಮಾ ರಂಗಕ್ಕೆ ಎಂಟ್ರಿ
Friday, September 13