ಬೆಂಗಳೂರು:-2023ರ ವಿಧಾನಸಭಾ ಚುನಾವಣೆ ಗೆಲ್ಲಲು ಜೆಡಿಎಸ್ ಪಕ್ಷವನ್ನು ಬಲಗೊಳಿಸಲು ಸಂಘಟನಾತ್ಮಕವಾಗಿ ಕಾರ್ಯತಂತ್ರ ರೂಪಿಸಲು ಹೋರಟಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿ ದೇವೇಗೌಡ ಅದಕ್ಕಾಗಿ ಈಗಿನಿಂದಲೇ ಪಕ್ಷವನ್ನು ಬಲಗೊಳಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ ಪಕ್ಷದಲ್ಲಿ ಈಗಿರುವ ವ್ಯವಸ್ಥೆಯನ್ನು ಸಂಪೂರ್ಣವಾಗಿ ಬದಲಿಸಿ ಸಂಕ್ರಾಂತಿ ಬಳಿಕ ಹೊಸ ರೂಪದಲ್ಲಿ ಪಕ್ಷ ಸಂಘಟನೆ ತರುತ್ತಾರಂತೆ.
ಪಕ್ಷವನ್ನು ಬಲಗೊಳಿಸುವ ಹಾಗು ಕಾರ್ಯಕರ್ತರಲ್ಲಿ ವಿಶ್ವಾಸ ತುಂಬುವ ಸಲುವಾಗಿ ಪ್ರಮುಖ ಕಾರ್ಯಕರ್ತರಲ್ಲಿ ಹಾಗು ಮುಖಂಡರೊಂದಿಗೆ ಕುಮಾರಸ್ವಾಮಿ ನಿರಂತರವಾಗಿ ಸಭೆಗಳನ್ನು ನಡೆಸುತ್ತಿದ್ದಾರೆ.ಜೋತೆಗೆ ಕಾರ್ಯಕರ್ತರ ಸಲಹೆ, ಅಹವಾಲುಗಳನ್ನು ಕೇಳುತ್ತಿದ್ದಾರೆ.
ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ, ಪಕ್ಷದ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ, ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಹಿರಿಯ ನಾಯಕರು ಸಭೆಗಳಲ್ಲಿ ಪಾಲ್ಗೊಳ್ಳುತ್ತಿರುವುದು ವಿಶೇಷ.
ಸಂಕ್ರಾಂತಿ ವೇಳೆಗೆ 8 ರಿಂದ 10 ಮುಖಂಡರನ್ನು ಒಳಗೊಂಡ ಕೋರ್ ಕಮಿಟಿಯನ್ನು ರಚನೆ ಮಾಡಲಾಗುವುದು ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ವೈಯಕ್ತಿಕವಾಗಿ ನಾನಾಗಲಿ, ತಂದೆಯವರಾಗಲಿ ಯಾವುದೇ ತೀರ್ಮಾನ ಕೈಗೊಳ್ಳುವುದಿಲ್ಲ. ಸಭೆಯಲ್ಲಿ ಚರ್ಚೆ ಮಾಡಿದ ಬಳಿಕ ಒಮ್ಮತದ ನಿರ್ಧಾರ ಕೈಗೊಳ್ಳಲಾಗುವುದು, ಪಕ್ಷವನ್ನು ಬಲಗೊಳಿಸಲು ವಿಭಾಗವಾರು, ಜಾರಿವಾರು ತಂಡಗಳನ್ನು ರಚನೆ ಮಾಡಲಾಗುತ್ತದೆ. ಜಾತ್ಯಾತೀತತೆ ಎಂದು ಹೇಳಿದರೂ ಚುನಾವಣೆ ವೇಳೆ ಎಲ್ಲಾ ಪಕ್ಷಗಳು ಜಾತಿವಾರು ಆಯ್ಕೆ ಮಾಡಲಾಗುತ್ತದೆ. ಹೀಗಾಗಿ ಜಾತಿವಾರು ಯಾರು ಸಕ್ರಿಯವಾಗಿ ಕೆಲಸ ಮಾಡುತ್ತಾರೋ ಅಂತಹವರಿಗೆ ಅವಕಾಶ ನೀಡಲಾಗುವುದು ಎಂದು ಕುಮಾರಸ್ವಾಮಿ ಹೇಳಿದರೆ,
ಪಕ್ಷದಲ್ಲಿ ಸಣ್ಣ ಪುಟ್ಟ ಸಮಸ್ಯೆಗಳಿವೆ.ಅವುಗಳನ್ನು ಬಗೆಹರಿಸಿಕೊಂಡು ಮುಂದೆ ಹೋಗೋಣ ಎಂದು ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಕಾರ್ಯಕರ್ತರಿಗೆ ಹೇಳಿದ್ದಾರಂತೆ.
ಮುಂಬರುವ ತಾಲೂಕು,ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗಳಿಸಬೇಕು.ಜೊತೆಗೆ 2023 ಕ್ಕೆ ಜೆಡಿಎಸ್ ಪಕ್ಷ ಸ್ವತಂತ್ರವಾಗಿ ಅಧಿಕಾರ ಹಿಡಿಯಬೇಕು.ಅದಕ್ಕಾಗಿ ಪಕ್ಷ ಸಂಘಟನೆ,ಹೋರಾಟ ಮಾಡೋಣ ಎಂದು ಹೇಳಿದ್ದಾರೆ
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Sunday, April 27