ನ್ಯೂಜ್ ಡೆಸ್ಕ್: ಬಿಹಾರ ರಾಜ್ಯದ ಅರಾರಿಯಾ ಜಿಲ್ಲೆಯಲ್ಲಿ ಒರ್ವ ಪತ್ರಕರ್ತನನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಮೃತ ಪತ್ರಕರ್ತನನ್ನು ವಿಮಲ್ ಕುಮಾರ್ ಯಾದವ್ (35) ಎಂದು ಗುರುತಿಸಲಾಗಿದ್ದು ದೈನಿಕ್ ಜಾಗರಣ ದಿನಪತ್ರಿಕೆಯ ಕ್ರೈಂ ವರದಿಗಾರನಾಗಿ ಕೆಲಸ ಮಾಡುತ್ತಿದ್ದ ಎಂದು ಪೋಲಿಸರು ತಿಳಿಸಿರುತ್ತಾರೆ.ಶುಕ್ರವಾರ ಮುಂಜಾನೆ 4.30 ಸಮಯದಲ್ಲಿ ರಾಣಿಗಂಜ್ನಲ್ಲಿರುವ ವಿಮಲ್ ಕುಮಾರ್ ಯಾದವ್ ಅವರ ಮನೆ ಬಾಗಿಲು ಬಡೆಯುವ ದುಷ್ಕರ್ಮಿಗಳು ಬಾಗಿಲು ತಗೆದ ವಿಮಲ್ ಕುಮಾರ್ ನ ಎದೆಗೆ ಗುಂಡು ಹಾರಿಸಿದ್ದಾರೆ. ಇದರಿಂದ ಕುಸಿದು ಬಿದ್ದ ವಿಮಲ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಿಮಲ್ ಅವರ ಸಹೋದರನನ್ನು ಈ ಹಿಂದೆಯೂ ಕೊಲೆ ಮಾಡಲಾಗಿದ್ದು, ಘಟನೆಗೆ ವಿಮಲ್ ಪ್ರತ್ಯಕ್ಷದರ್ಶಿಯಾಗಿದ್ದ ಎಂದು ಅರಾರಿಯಾ ಎಸ್ಪಿ ಅಶೋಕ್ ಕುಮಾರ್ ಸಿಂಗ್ ಹೇಳಿದ್ದಾರೆ. ಈ ಪ್ರಕರಣದ ಆರೋಪಿಗಳು ವಿಮಲ್ನನ್ನೂ ಹತ್ಯೆ ಮಾಡಿರಬಹುದು ಎಂದು ಶಂಕಿಸಿದ್ದಾರೆ.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



