ಶ್ರೀನಿವಾಸಪುರ:ಕೆಸಿ ವ್ಯಾಲಿ ನೀರನ್ನು ಕೋಲಾರ ಜಿಲ್ಲೆಗೆ ಕೊಡಲೆ ಬೇಕು ಎಂದು ಇದ್ದರೆ ಪರಿಣಾಮಕಾರಿಯಾಗಿ ಮೂರನೆ ಹಂತದ ಶುದ್ಧೀಕರಣ ಮಾಡಿ ಹರಿಸುವ ಮೂಲಕ ಈ ಭಾಗದ ಜನರಿಗೆ ಅಗಿರುವಂತ ಅನ್ಯಾಯವನ್ನು ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಸರಿಪಡಿಲಾಗುವುದು ಸಾದ್ಯವಾಗದಿದ್ದರೆ ಕೆಸಿ ವ್ಯಾಲಿ ಯೋಜನೆಯನ್ನು ಸ್ಥಗಿತಗೊಳಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದರು ಅವರು ತಾಲೂಕಿನ ನಕ್ಕಲಗಡ್ದ ಗ್ರಾಮದಲ್ಲಿ ಗ್ರಾಮವಾಸ್ತವ್ಯ ಮಾಡಿದ್ದು ಗ್ರಾಮಕ್ಕೆ ಹೋದಾಗ ತಡರಾತ್ರಿ 2 ಗಂಟೆಯಾಗಿದ್ದು ಮತ್ತು ಮಳೆ ಹಿನ್ನಲೆಯಲ್ಲಿ ಮರುದಿನ ಬುಧವಾರ ಮುಂಜಾನೆ ಗ್ರಾಮಸ್ಥರೊಂದಿಗೆ ಸಂವಾದ ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೆಸಿ ವ್ಯಾಸಿ ಯೋಜನೆಯ ಎರಡನೆ ಹಂತದ ನೀರು ಶುದ್ಧೀಕರಣದ ಯಂತ್ರಗಳು ಕೆಟ್ಟು ನಿಂತಿದ್ದು ಬೆಂಗಳೂರಿನಿಂದ ನೀರು ನೇರವಾಗಿ ಹರಿದು ಬರುತ್ತಿದೆ ಬಿಜೆಪಿ ವಿರುದ್ದ 40 ಪರ್ಸಂಟೆಜ್ ಆರೋಪ ಮಾಡುವವರು ಈ ಯೋಜನೆಯಲ್ಲಿ ಎನೆಲ್ಲಾ ಅಕ್ರಮಗಳು ಮಾಡಿದ್ದಾರೆ ಎಂಬುದು ಗೊತ್ತಿದೆ ಎಂದು ಮಾರ್ಮಿಕವಾಗಿ ಹೇಳಿದರು.
ಬಿಜೆಪಿ ಸರ್ಕಾರಗಳ ವಿರುದ್ದ ತೀವ್ರವಾಗಿ ವಾಗ್ದಾಳಿ
ನೆಲ ಜಲ ಸಂರಕ್ಷಣೆಯಲ್ಲಿ ಡಬಲ್ ಇಂಜಿನ್ ಸರ್ಕಾರ ವಿಫಲವಾಗಿದೆ ಎಂದು ಬಿಜೆಪಿ ಸರ್ಕಾರಗಳ ವಿರುದ್ದ ತೀವ್ರವಾಗಿ ವಾಗ್ದಾಳಿ ನಡೆಸಿದರು ರಾಜ್ಯದ ನೆಲ ಜಲ ಸಂರಕ್ಷಣೆಯಲ್ಲಿ ಡಬಲ್ ಇಂಜಿನ್ ಸರ್ಕಾರ ವಿಫಲವಾಗಿದೆ
ರಾಷ್ಟ್ರೀಯ ಪಕ್ಷಗಳಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ಸರಿಪಡಿಸಲು ಸಾಧ್ಯವಿಲ್ಲ ಎಂದ ಅವರು ಬಿಜೆಪಿ ಸರ್ಕಾರ ರಾಜ್ಯದ ಜನತೆಗೆ ದ್ರೋಹ ಎಸಗುತ್ತಿದೆ ಎಂದರು.
ಯಾರದೋ ಅನಕೂಲಕ್ಕಾಗಿ ಕೋಲಾರಕ್ಕೆ ಯಾರನ್ನೆ ಕರೆತಂದು ನಿಲ್ಲಿಸಿದರು ಕೋಲಾರ ಜಿಲ್ಲೆಯ ಐದು ಕ್ಷೇತ್ರಗಳಲ್ಲೂ ನಮ್ಮ ಪಕ್ಷ ಬಲಿಷ್ಠವಾಗಿದೆ ಜನತೆ ಜೆಡಿಎಸ್ ಗೆಲ್ಲಿಸಬೇಕು ಎಂಬ ಹುಮ್ಮಸ್ಸಿನಲ್ಲಿದ್ದಾರೆ, ಕೋಲಾರ-ಚಿಕ್ಕಬಳ್ಳಾಪುರ ಎರಡು ಜಿಲ್ಲೆಗಳು ಸೇರಿದಂತೆ ರಾಜ್ಯಾದ್ಯಂತ 10 ರಿಂದ 15 ಕ್ಷೇತ್ರಗಳಲ್ಲಿ ಮಹಿಳೆಯರು ಸ್ಪರ್ದಿಸಲು ಅವಕಾಶ ಕಲ್ಪಿಸುವುದಾಗಿ ಹೇಳಿದರು.
ಇವರೊಂದಿಗೆ ಚಿಂತಾಮಣಿ ಶಾಸಕ ಕೃಷ್ಣಾರೆಡ್ದಿ,ಮಾಜಿ ಶಾಸಕ ವೆಂಕಟಶಿವಾರೆಡ್ದಿ,ವಿಧಾನಪರಿಷತ್ ಸದಸ್ಯ ಇಂಚರಗೋವಿಂದರಾಜು,ಮಾಜಿ ಸದಸ್ಯ ಪಲ್ಲಿಚೌಡರೆಡ್ಡಿ,ಸಮೃದ್ದಿ ಮಂಜುನಾಥ್,ಭಿಮಗುಂಟಪಲ್ಲಿ ಶಿವಾರೆಡ್ದಿ ಮುಂತಾದವರು ಇದ್ದರು.
Breaking News
- ನಾಗಮಂಗಲ ಗಲಭೆ ಸಂಬಂಧ ಕೇರಳದ ಇಬ್ಬರ ಬಂಧನ!
- J&Kಚುನಾವಣೆ ವೇಳೆ ಎನ್ಕೌಂಟರ್ ಮೂವರು ಉಗ್ರರ ಹತ್ಯೆ ಇಬ್ಬರು ಸೈನಿಕರ ವೀರ ಮರಣ!
- BIGSHOK ಏರಿಕೆಯಾದ ಅಡುಗೆ ಎಣ್ಣೆ ರೇಟು!
- ಶ್ರೀನಿವಾಸಪುರದ KSRTC ಗಣೇಶ ವಿಸರ್ಜನೆ
- ಶ್ರೀನಿವಾಸಪುರದ ಯುವಕ ಗೋಕರ್ಣದಲ್ಲಿ ಸಮುದ್ರದಪಾಲು
- ಮದನಪಲ್ಲಿ-ತಿರುಪತಿ ಘಾಟ್ ರಸ್ತೆಯಲ್ಲಿ ಅಪಘಾತ ಕರ್ನಾಟಕದ ನಾಲ್ವರ ಸಾವು!
- ಕಮ್ಯುನಿಸ್ಟ್ ಧ್ವನಿ ಸೀತಾರಾಂ ಯೆಚೂರಿ ಇನ್ನಿಲ್ಲ!
- ಚಿಂತಾಮಣಿ ನಗರಸಭೆ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ
- ಅಮೇರಿಕಾದಲ್ಲಿ ರಾಹುಲ್-ಶಿವಕುಮಾರ್ ಭೇಟಿ ರಾಜಕೀಯ ಸಂಚಲನ
- ಮೃತ ಪತ್ರಕರ್ತನ ಕುಟುಂಬಕ್ಕೆ ಪರಿಹಾರ ಮಂಜೂರು ಮಾಡಿದ ಸಿಎಂ
Monday, September 16