- ಅಧ್ಯಕ್ಷರಾಗಿ ಶಾಸಕ ಕೊತ್ತೂರು ಮಂಜುನಾಥ್ ಅವಿರೋಧ ಆಯ್ಕೆ
- ಉಪಾಧ್ಯಕ್ಷರಾಗಿ ಮೋಹನ್ ರೆಡ್ಡಿ ಅವಿರೋಧ ಆಯ್ಕೆ
- ಎರಡೂ ಸ್ಥಾನಗಳಿಗೆ ತಲಾ ಒಂದೊಂದು ನಾಮಪತ್ರ ಮಾತ್ರ ಸಲ್ಲಿಕೆ
- ಸುಬ್ಬಾರೆಡ್ಡಿ ಮನವೊಲಿಕೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಯಶಸ್ವಿ.
- ಡಿಸಿಸಿ ಬ್ಯಾಂಕ್ ಮುಂಭಾಗ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ
ಕೋಲಾರ: ಕೋಲಾರ–ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರ ಸಹಕಾರ (KDCC) ಬ್ಯಾಂಕ್ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ಇಂದು ನಡೆದು ಅಧ್ಯಕ್ಷರಾಗಿ ಕೋಲಾರ ಶಾಸಕ ಕೊತ್ತೂರು ಮಂಜುನಾಥ್ ಹಾಗೂ ಉಪಾಧ್ಯಕ್ಷರಾಗಿ ಚಿಕ್ಕಬಳ್ಳಾಪುರದ ಡಿಸಿಸಿ ಬ್ಯಾಂಕ್ ಸದಸ್ಯ ಮೋಹನ್ ರೆಡ್ಡಿ ಆಯ್ಕೆಯಾಗಿದ್ದಾರೆ
ಅಧ್ಯಕ್ಷ ಹಾಗು ಉಪಾಧ್ಯಕ್ಷ ಸ್ಥಾನಗಳಿಗೆ ತಲಾ ಒಬ್ಬರೆ ನಾಮಪತ್ರ ಮಾತ್ರ ಸಲ್ಲಿಸಿದ ಹಿನ್ನೆಲೆ ಆಯ್ಕೆ ಅವಿರೋಧವಾಗಿ ನಡೆಯಿತು.
ಮುಖ್ಯಮಂತ್ರಿ ಹಾಗೂ ಡಿ.ಕೆ. ಶಿವಕುಮಾರ್ ಅವರ ಸೂಚನೆಯಂತೆ ಬ್ಯಾಂಕ್ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ನಡೆದಿದ್ದು ಕೋಲಾರ–ಚಿಕ್ಕಬಳ್ಳಾಪುರದ ಕಾಂಗ್ರೆಸ್ ಶಾಸಕರಾದ ಬಂಗಾರಪೇಟೆ ಶಾಸಕ ನಾರಾಯಣಸ್ವಾಮಿ, ಮಾಲೂರು ಶಾಸಕ ಕೆ.ವೈ. ನಂಜೇಗೌಡ, ಗೌರಿಬಿದನೂರು ಶಾಸಕ ಪುಟ್ಟಸ್ವಾಮಿಗೌಡ ಹಾಗೂ ಎಂಎಲ್ಸಿ ಅನಿಲ್ ಕುಮಾರ್ ಸೇರಿದಂತೆ ಬಹುತೇಕ ಕಾಂಗ್ರೆಸ್ ಮುಖಂಡರು ಕೊತ್ತೂರು ಮಂಜುನಾಥ್ ಅವರಿಗೆ ಅಧ್ಯಕ್ಷ ಹಾಗು ಉಪಾಧ್ಯಕ್ಷರಾಗಿ ಚಿಕ್ಕಬಳ್ಳಾಪುರದ ಮೋಹನ್ ರೆಡ್ಡಿಅವರುಗಳಿಗೆ ಬೆಂಬಲ ನೀಡಿದರು ಎಂದು ಪಕ್ಷದ ಮೂಲಗಳು ತಿಳಿಸಿವೆ.
ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿಗೆ ಅಪೇಕ್ಸ್ ಭರವಸೆ
ಮಂತ್ರಿ ಪದವಿ ಸಿಗದ ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟು ಪ್ರಭಲ ಆಕಾಂಕ್ಷಿಯಾಗಿದ್ದರು ಆದರೆ ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ತಟಸ್ಥರಾದ ಅವರಿಗೆ ಮುಂದಿನ ದಿನಗಳಲ್ಲಿ ಅವರಿಗೆ ಅಪೆಕ್ಸ್ ಬ್ಯಾಂಕ್ ನಿರ್ದೇಶಕರಾನ್ನಾಗಿಸುವ ಭರವಸೆ ಕೋಡಲಾಗಿದಿಯಂತೆ ಎನ್ನಲಾಗುತ್ತಿದೆ.
ನ್ಯಾಯ, ಧರ್ಮ ಹಾಗೂ ಪಾರದರ್ಶಕತೆಯಿಂದ ಬ್ಯಾಂಕ್ ನಡೆಸುತ್ತೇನೆ
ಡಿಸಿಸಿ ಬ್ಯಾಂಕ್ನ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಮಾತನಾಡಿದ ಶಾಸಕ ಕೊತ್ತೂರು ಮಂಜುನಾಥ್, ಬ್ಯಾಂಕ್ ನಲ್ಲಿ ಇದುವರಿಗೂ ನದೆದ ವಹಿವಾಟು ಹಾಗು ಆಗುಹೋಗುಗಳ ಬಗ್ಗೆ ತಿಳಿದುಕೊಳ್ಳಲು ಒಂದು ತಿಂಗಳ ಕಾಲವಕಾಶ ಬೇಕಿದ್ದು ನಂತರ ಬ್ಯಾಂಕ್ ಆಡಳಿತವನ್ನು ನ್ಯಾಯ ಮತ್ತು ಧರ್ಮದ ಮಾರ್ಗದಲ್ಲಿ ಮುನ್ನಡೆಸುತ್ತೇನೆ. ರೈತರು ಹಾಗೂ ಗ್ರಾಹಕರ ಹಿತ ಕಾಪಾಡುವ ನಿಟ್ಟಿನಲ್ಲಿ ಪಾರದರ್ಶಕವಾಗಿ ಕಾರ್ಯನಿರ್ವಹಿಸುತ್ತೇನೆ ಎಂದು ಭರವಸೆ ನೀಡಿದರು.
ಕೋಲಾರ–ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಶಾಸಕ ಕೊತ್ತೂರು ಮಂಜುನಾಥ್ ಅವಿರೋಧ ಆಯ್ಕೆ ಘೋಷಣೆಯಾದ ಬಳಿಕ ಡಿಸಿಸಿ ಬ್ಯಾಂಕ್ ಮುಂಭಾಗ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದರು. ಬ್ಯಾಂಕ್ ಆಡಳಿತದಲ್ಲಿ ಕಾಂಗ್ರೆಸ್ ಹಿಡಿತ ಸಾಧಿಸಿರುವುದಕ್ಕೆ ಕಾರ್ಯಕರ್ತರು ಜಯಘೋಷ ಮೊಳಗಿಸಿದರು.



