ಶ್ರೀನಿವಾಸಪುರ:ಕೆ ಎಸ್ ಆರ್ ಟಿ ಸಿ ಉದ್ಯೋಗಿ ಎಂ.ಡಿ.ಬಾಬಾಜಾನ್(53) ಇಂದು ಮುಂಜಾನೆ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ.ಶ್ರೀನಿವಾಸಪುರ ಘಟಕದಲ್ಲಿ ಚಾಲಕನಾಗಿದ್ದ ಅವರು ಅಪಘಾತದಲ್ಲಿ ಕಾಲುಗಳಿಗೆ ತೀವ್ರಗಾಯವಾದ ಹಿನ್ನಲೆಯಲ್ಲಿ ಕಚೇರಿ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ಅವರು 26ವರ್ಷಗಳಿಂದ ರಾಜ್ಯಸಾರಿಗೆ ಸಂಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು.ಮೂಲತಃ ತಾಲೂಕಿನ ಮುತ್ತಕಪಲ್ಲಿ ಗ್ರಾಮದವರಾಗಿದ್ದು ಶ್ರೀನಿವಾಸಪುರ ಪಟ್ಟಣದಲ್ಲಿ ಕುಟುಂಬ ಸಮೇತರಾಗಿ ವಾಸವಾಗಿದ್ದರು, ಸದಾ ಹಸನ್ಮುಖಿಯಾಗಿ ಸಮಾಜದಲ್ಲಿ ಎಲ್ಲರೊಂದಿಗೂ ಸೌಹಾರ್ದತೆಯಿಂದ ಬೆರೆಯುತ್ತಿದ್ದರು ಎಂದು ಸ್ನೇಹಿತರು ಹೇಳುತ್ತಾರೆ.ಮೃತ ಬಾಬಾಜಾನ್ ಪತ್ನಿ ಒರ್ವಪುತ್ರ ಒರ್ವಪುತ್ರಿ ಹಾಗು ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ಸಾರಿಗೆ ಸಂಸ್ಥೆ ವತಿಯಿಂದ ಗೌರವ
ಮೃತ ಬಾಬಾಜಾನ್ ಅವರಿಗೆ ರಾಜ್ಯ ಸಾರಿಗೆ ಸಂಸ್ಥೆ ವತಿಯಿಂದ ಗೌರವ ಸಲ್ಲಿಸಲಾಯಿತು ಸಾರಿಗೆ ಸಂಸ್ಥೆ ಶ್ರೀನಿವಾಸಪುರ ಘಟಕದ ವ್ಯವಸ್ಥಾಪಕ ವೆಂಕಟೇಶ್ ಹಾಗು ಸಂಸ್ಥೆ ಕಾರ್ಮಿಕ ಕಲ್ಯಾಣಾಧಿಕಾರಿ ನಾಗರಾಜ್ ಅವರು ಮುತ್ತಕಪಲ್ಲಿಗೆ ಭೇಟಿಕೊಟ್ಟು ಶ್ರದ್ಧಾಂಜಲಿ ಸಲ್ಲಿಸಿ ಕಾರ್ಮಿಕ ಕಲ್ಯಾಣ ನಿಧಿಯನ್ನು ಅವರ ಕುಟುಂಬಸ್ಥರಿಗೆ ಹಸ್ತಾಂತರಿಸಿರುತ್ತಾರೆ.ಇಲಾಖೆ ಉದ್ಯೋಗಿಗಳು ಮುನಿರೆಡ್ಡಿ,ರೋಣೂರುಮಂಜು,ಸತೀಶ್,ನಾರಯಣಸ್ವಾಮಿ ಭೇಟಿಕೊಟ್ಟಿದ್ದರು.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



