ಶ್ರೀನಿವಾಸಪುರ:ಕರ್ನಾಟಕದ ರೈತರ,ಗ್ರಾಮೀಣ ಜನರ ಹಾಗು ಸಾಮಾನ್ಯ ಜನರ ಬವಣೆ ನೀಗಿಸಿ ಅವರು ಅಭಿವೃದ್ಧಿಯಾಗಲು ಕುಮಾರಸ್ವಾಮಿ ಮುಖ್ಯಮಂತ್ರಿಯಾಗಬೇಕಿದೆ ಎಂದು ಜಿಲ್ಲಾಪಂಚಾಯಿತಿ ಮಾಜಿ ಅಧ್ಯಕ್ಷ ತೂಪಲ್ಲಿನಾರಯಣಸ್ವಾಮಿ ಹೇಳಿದರು ಅವರು ತಾಲೂಕಿನಲ್ಲಿ ಜೆಡಿಎಸ್ ಕಾರ್ಯಕರ್ತರು ಆಯೋಜಿಸಿದ್ದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹುಟ್ಟುಹಬ್ಬದ ಪ್ರಯುಕ್ತ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣುಹಂಪಲು ವಿತರಿಸಿ ಮಾತನಾಡಿ ರಾಷ್ಟ್ರೀಯ ಪಕ್ಷಗಳ ನಿರ್ಲಕ್ಷ್ಯ ಅಡಳಿತದಿಂದ ರಾಜ್ಯ ವಿವಿಧ ಸಮಸ್ಯೆಗಳಿಂದ ಅಭಿವೃದ್ಧಿ ವಿಚಾರದಲ್ಲಿ ಹಿಂದೆ ಬಿದ್ದಿದೆ ಎಂದರು.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಇಂದಿರಾಭವನ್ ರಾಜಣ್ಣ ಮಾತನಾಡಿ ಜನಸಾಮಾನ್ಯರ ಬದುಕಿನಲ್ಲಿ ಆಶಾಕಿರಣವಾಗಿರುವ ಕುಮಾರಸ್ವಾಮಿ ಈ ರಾಜ್ಯದ ಮುಖ್ಯಮಂತ್ರಿಯಾದರೆ ರಾಜ್ಯ ಅಭಿವೃದ್ಧಿ ಪಥದತ್ತ ಸಾಗುತ್ತದೆ ಎಂದರು.
ಜೆಡಿಎಸ್ ಕಾರ್ಯಕರ್ತರು ಪಟ್ಟಣದ ಇಂದಿರಾಭವನ್ ವೃತ್ತದಲ್ಲಿ ಪಟಾಕಿ ಸಿಡಿಸಿ ಕೆಕ್ ಕತ್ತರಿಸಿ ಸಂಭ್ರಮಿಸಿದರು.
ಈ ಸಂದರ್ಬದಲ್ಲಿ ಪುರಸಭೆ ಮಾಜಿ ಅಧ್ಯಕ್ಷ ಶ್ರೀನಿವಾಸಪ್ಪ,ಅಂಬೇಡ್ಕರ್ ಪಾಳ್ಯ ರವಿ,ಕಾರ್ ಬಾಬು, ಮಂಜುನಾಥಗೌಡ,ನಾಗದೇನಹಳ್ಳಿ ಚೌಡರೆಡ್ಡಿ,ಜಗದೀಶ್,ನಿವೃತ್ತ ಶಿಕ್ಷಕ ವೆಂಕಟರೆಡ್ಡಿ ಮುಂತಾದವರು ಇದ್ದರು.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Sunday, June 7



