ನ್ಯೂಜ್ ಡೆಸ್ಕ್:ಅಮೆರಿಕದಲ್ಲಿ ಸೊಳ್ಳೆ ಕಡಿತದಿಂದ ‘ಈಸ್ಟರ್ನ್ ಎಕ್ವೈನ್ ಎನ್ಸೆಫಾಲಿಟಿಸ್’ ಎಂಬ ವೈರಸ್ ಸೋಂಕಿಗೆ ಒಳಗಾಗಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ದೇಶದ ಆಡಳಿತವು ಎಚ್ಚೆತ್ತುಕೊಂಡಿದ್ದು ಮ್ಯಾಸಚೂಸೆಟ್ಸ್, ವರ್ಮೊಂಟ್ ಮತ್ತು ಇತರ ಪ್ರದೇಶಗಳಲ್ಲಿ ಸರ್ಕಾರ ಹೈ ಅಲರ್ಟ್ ಘೋಷಿಸಿದೆ,ಸೊಳ್ಳೆಗಳಿಂದ ಈ ಸೋಂಕು ಹರಡುವ ಹಿನ್ನೆಲೆಯಲ್ಲಿ ಜನರಿಗೆ ಸ್ಪ್ರೇಗಳನ್ನು ನೀಡುತ್ತಿದ್ದು, ಟ್ರಕ್ಗಳ ಮೂಲಕವೂ ಸ್ಪ್ರೇ ಸಿಂಪಡಣೆ ಮಾಡಲಾಗುತ್ತಿದೆ. ಪ್ಲೇಮೌತ್ ಸೇರಿದಂತೆ ಹಲವು ಕೌಂಟಿಗಳಲ್ಲಿ ಈಗಾಗಲೇ ಸ್ಪ್ರೇ ಸಿಂಪಡಣೆ ಮಾಡಲಾಗಿದೆ.ಅನಧಿಕೃತ ಲಾಕ್ಡೌನ್ ಅನ್ನು ಜಾರಿಗೊಳಿಸಲಾಗುತ್ತಿದೆ. ಉದ್ಯಾನವನಗಳು ಮತ್ತು ಸಾರ್ವಜನಿಕ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ. ಹೆಲಿಕಾಪ್ಟರ್ ಮೂಲಕ ಔಷಧ ಸಿಂಪಡಿಸಲಾಗುತ್ತಿದೆ. ಈ ವೈರಸ್ ಸೋಂಕಿತರಲ್ಲಿ ಜ್ವರ, ಅತಿಸಾರ ಮತ್ತು ತಲೆನೋವಿನಂತಹ ಲಕ್ಷಣಗಳು ಕಂಡುಬರುತ್ತವೆ. ಅದಕ್ಕೆ ಸದ್ಯಕ್ಕೆ ಲಸಿಕೆ ಇಲ್ಲ ಎನ್ನಲಾಗಿದೆ.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Saturday, April 26