ನ್ಯೂಜ್ ಡೆಸ್ಕ್:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಮೀಸಲಾಗಿರುವ ಹಾಸ್ಟೆಲ್ ನಲ್ಲಿ ಇರುವ ಸಂಖ್ಯೆಗಿಂತ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳ ದಾಖಲಾತಿ ತೋರಿಸಿ ಸರ್ಕಾರಕ್ಕೆ ಸುಳ್ಳು ಮಾಹಿತಿ ನೀಡಿ,ಸರ್ಕಾರದ ಹಣ ದುರುಪಯೋಗ ಪಡಿಸಿಕೊಂಡ ಆರೋಪದ ಮೇಲೆ ರಾಯಚೂರು ಸಮಾಜ ಕಲ್ಯಾಣ ಇಲಾಖೆ ಡಾ.ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕರ ಹಾಸ್ಟೆಲ್ ವಾರ್ಡನ್ ದೇವರಾಜ್ ಅವರನ್ನು ಅಮಾನತು ಮಾಡಲಾಗಿದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಮೀಸಲಾಗಿರುವ ಹಾಸ್ಟೆಲ್ ನಲ್ಲಿ ವಾಸ್ತವಿಕ ಸಂಖ್ಯೆಗಿಂತ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಹಾಸ್ಟೆಲ್ ನಲ್ಲಿ ಇದ್ದಾರೆಂದು ಸರ್ಕಾರಕ್ಕೆ ಸುಳ್ಳು ಮಾಹಿತಿ ನೀಡಲಾಗಿ,ಭ್ರಷ್ಟಾಚಾರ ನಡೆಸಿರುವುದು ಬೆಳಕಿಗೆ ಬಂದಿದೆ.
ಉಪಲೋಕಾಯುಕ್ತರ ಸಾಹಸ ಕಾರ್ಯಚರಣೆ ಭ್ರಷ್ಟಾಚಾರ ಬಯಲು
ಆಗಸ್ಟ್ 28 ರಂದು ರಾತ್ರಿ 8 ಗಂಟೆ ವೇಳೆ ಸುರಿಯುತ್ತಿದ್ದ ಭಾರೀ ಮಳೆಯ ನಡುವೆಯೂ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಹಾಸ್ಟೆಲ್ಗೆ ಅನಿರೀಕ್ಷಿತ ಭೇಟಿ ನೀಡಿದ್ದರು. ಈ ವೇಳೆ ಅಕ್ರಮ ಬೆಳಕಿಗೆ ಬಂದಿತ್ತು. ಬಯೋ-ಮೆಟ್ರಿಕ್ ಹಾಜರಾತಿಯ ಪ್ರಕಾರ ಹಾಸ್ಟೆಲ್ ನಲ್ಲಿ ಕೇವಲ 159 ವಿದ್ಯಾರ್ಥಿಗಳು ಮಾತ್ರ ಇರುವುದು ಕಂಡುಬಂದಿತ್ತು. ಆದರೆ, ಹಾಜರಾತಿ ನೋಂದಣಿಯಲ್ಲಿ 427 ವಿದ್ಯಾರ್ಥಿಗಳಿರುವುದಾಗಿ ತೋರಿಸಲಾಗಿದೆ.ಅಹಾರಕ್ಕಾಗಿಯೇ ಇಲಾಖೆಯು ಪ್ರತಿ ಮೆಟ್ರಿಕ್ ನಂತರದ ವಿದ್ಯಾರ್ಥಿಗೆ ಮಾಸಿಕ 1,850 ರೂ. ಮತ್ತು ಪ್ರತಿ ಪ್ರಿ-ಮೆಟ್ರಿಕ್ ವಿದ್ಯಾರ್ಥಿಗೆ 1,750 ರೂ. ಖರ್ಚು ಮಾಡುತ್ತಿದೆ. ಇದಲ್ಲದೆ, ಸರ್ಕಾರವು ಹಾಸ್ಟೆಲ್ಗಳಲ್ಲಿನ ವಿದ್ಯಾರ್ಥಿಗಳಿಗೆ ಇತರ ಸೌಲಭ್ಯಗಳಿಗೂ ಹಣ ನೀಡುತ್ತಿದೆ.ಇದರ ಅಧಾರದಲ್ಲಿ ಹಾಸ್ಟೆಲ್ಗಳಲ್ಲಿ ಹೆಚ್ಚುವರಿ ವಿದ್ಯಾರ್ಥಿಗಳನ್ನು ತೋರಿಸಿ, ಸರ್ಕಾರದ ಹಣ ದುರ್ಬಳಕೆ ಮಾಡುತ್ತಿರುವುದು ಪತ್ತೆಯಾಗಿತ್ತು.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Wednesday, July 22



