ಶ್ರೀನಿವಾಸಪುರ:ಸೆಲ್ಫಿ ಹುಚ್ಚಾಟಕ್ಕೆ ಬಿದ್ದ ಯುವಕನೊರ್ವ ರೈಲ್ವೆ ವಿದ್ಯತ್ ತಗಲಿ ಸಾವನ್ನಪ್ಪಿರುವ ಮನ ಕಲುಕುವ ಘಟನೆ ಶ್ರೀನಿವಾಸಪುರದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಮೃತ ಯುವಕನನ್ನು ಪದವಿ ಪೂರ್ವ ವ್ಯಾಸಂಗ ಮಾಡುತ್ತಿದ್ದ ಶ್ರೀನಿವಾಸಪುರದ ನಿವಾಸಿ ಕಾರ್ತಿಕ್ ಎನ್ನಲಾಗಿದ್ದು, ಯುವಕ ತನ್ನ ಇಬ್ಬರು ಸ್ನೇಹಿತರೊಂದಿಗೆ ರೈಲು ನಿಲ್ದಾಣಕ್ಕೆ ಹೋಗಿದ್ದಾನೆ,ಅಲ್ಲಿ ನಿಲ್ಲಿಸಿದ್ದ ಗೂಡ್ಸ್ ರೈಲಿನ ಮೇಲೆ ಹತ್ತಿ ಮೊಬೈಲ್ ಫೋನ್ನಿಂದ ಸೆಲ್ಫಿ ತೆಗೆದುಕೊಳ್ಳುವ ಸಾಹಸ ಮಾಡುವ ವೇಳೆ ಅವನ ಕೈ ಹೈ ಟೆನ್ಷನ್ ವಿದ್ಯುತ್ ತಂತಿಗೆ ತಗುಲಿದೆ ವಿದ್ಯುತ್ ಹರಿದು ಯುವಕ ಪಕ್ಕದ ಮಾವಿನ ತೋಟಕ್ಕೆ ಎಸೆಯಲ್ಪಟ್ಟಿದ್ದಾನೆ.
ಅವನೊಂದಿಗೆ ಹೋಗಿದ್ದ ಇನ್ನಿಬ್ಬರು ಕೆಳಗಿಂದ ಆಘಾತವನ್ನು ನೋಡುತ್ತಿದ್ದು ತಕ್ಷಣ ಕುಟುಂಬದವರಿಗೆ ಮಾಹಿತಿ ನೀಡಿದ್ದು ಪೋಷಕರು ವಿದ್ಯತ್ ಅಪಘಾತಕ್ಕೆ ಒಳಗಾದ ಯುವಕನನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದಾರೆ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅಘಾತ ನಡೆದ ಮೂರು ದಿನಕ್ಕೆ ಯುವಕ ಮೃತಪಟ್ಟಿರುವುದಾಗಿ ಹೇಳಲಾಗುತ್ತಿದೆ.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



