ಶ್ರೀನಿವಾಸಪುರ:ಮಾವು ಬೆಳೆ ಕುರಿತಂತೆ ಬೆಳೆಗಾರರಿಗೆ ಕಾರ್ಯಗಾರ ಏರ್ಪಡಿಸಿರುವುದಾಗಿ ಕಾರ್ಯಗಾರದಲ್ಲಿ ಮಾವು ಬೆಳೆಗಾರರು ಪಾಲ್ಗೋಂಡು ಮಾವಿನ ಬೆಳೆಗೆ ತಗಲುವ ರೋಗ ನಿಯಂತ್ರಣ ಕುರಿತಂತೆ ಔಷಧಿಗಳ ಸಿಂಪರಣೆ ಅನುಸರಿಸಬೇಕಾದ ಕ್ರಮಗಳ ಕುರಿತಾಗಿ ವಿಷಯ ತಜ್ಞರು ಮಾವು ಬೆಳೆಗಾರರಿಗೆ ಮಾಹಿತಿ ನೀಡಲಿದ್ದಾರೆ ಎಂದು ಕೋಲಾರ ಜಿಲ್ಲಾ ಮಾವು ಬೆಳೆಗಾರರ ಸಂಘದ ಅಧ್ಯಕ್ಷ ನೀಲಟೂರು ಚಿನ್ನಪ್ಪ ರೆಡ್ಡಿ ಹೇಳಿದರು ಅವರ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದರು.
ದಿನಾಂಕ 17ಜನವರಿ 2024 ರಂದು ಬುಧವಾರ ಬೆಳಗ್ಗೆ 11 ಗಂಟೆಗೆ ಸರ್ಕಾರಿ ಬಾಲಕರ ಕಾಲೇಜು ಮುಂಬಾಗದ ಮಾರುತಿ ಸಭಾ ಭವನದಲ್ಲಿ ಒಂದು ದಿನದ ಕಾರ್ಯಗಾರವನ್ನು ತೋಟಗಾರಿಕಾ ಇಲಾಖೆ, ಮಾವು ಅಭಿವೃದ್ಧಿ ಮಂಡಳಿ ಮತ್ತು ಕೃಷಿ ಇಲಾಖೆಯ ಸಹಯೋಗದಲ್ಲಿ ಆಯೋಜಿಸಲಾಗಿದೆ ಇಲ್ಲಿ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ ಮತ್ತು ಕೃಷಿ ವಿಜ್ಞಾನ ಕೇಂದ್ರದ ನುರಿತ ವಿಜ್ಞಾನಿಗಳು ತೋಟಗಾರಿಕಾ ಮತ್ತು ಕೃಷಿ ಇಲಾಖೆಯ ಅಧಿಕಾರಿಗಳು ಭಾಗವಹಿಸುತ್ತಿದ್ದು ಕಾರ್ಯಗಾರದಲ್ಲಿ ಮಾವು ಬೆಳೆಗಾರರು ಮತ್ತು ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರತಿ ವರ್ಷ ಮಾವಿನ ತೋಟಗಳಿಗೆ ಐದಾರು ಬಾರಿ ಔಷಧಿ ಸಿಂಪರಣೆ ಮಾಡಿದರು ರೋಗ ನಿಯಂತ್ರಣಕ್ಕೆ ಬಾರದೆ ಆರ್ಥಿಕವಾಗಿ ಸಂಕಷ್ಟಕ್ಕೆ ಒಳಗಾಗುವಂತ ಸ್ಥಿತಿ ಏರ್ಪಟ್ಟಾಗ ಅನುಸರಿಸಬೇಕಾದ ಕ್ರಮಗಳ ಕುರಿತಾಗಿ ವಿಚಾರ ಮಂಡಿಸುತ್ತಾರೆ ಎಂದರು.
ಕರ್ನಾಟಕ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಪಿ. ಆರ್. ಸೂರ್ಯನಾರಾಯಣ ಮಾತನಾಡಿ ಕರ್ನಾಟಕದಲ್ಲಿ ಅತಿ ಹೆಚ್ಚು ಮಾವು ಬೆಳೆಯುವ ಪ್ರದೇಶ ಶ್ರೀನಿವಾಸಪುರ ಆಗಿದೆ. ಉತ್ತಮ ಮಾರುಕಟ್ಟೆ ಕೇಂದ್ರ ವಾಗಿದ್ದರೂ ಗುಣಮಟ್ಟದ ಮಾವು ಬೆಳೆಯಲು ಸಾಧ್ಯವಾಗುತ್ತಿಲ್ಲ. ಮಾರುಕಟ್ಟೆ ಬೇಡಿಕೆ ಆಧಾರಿತವಾಗಿ ವೈಜ್ಞಾನಿಕ ಪದ್ಧತಿಯಲ್ಲಿ ಬೆಳೆಯಲು ರೈತರಿಗೆ ಅರಿವು ಮೂಡಿಸುವ ಸಲುವಾಗಿ ಈ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಮುಂದಿನ ದಿನಗಳಲ್ಲಿ ವೈಜ್ಞಾನಿಕ ಮಾವಿನ ಕೊಯಿಲು ಬಗ್ಗೆಯು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು. ಮಾವು ಬೆಳೆಗಾರರ ಸಂಘದ ಕಾರ್ಯದರ್ಶಿ ಪಾತಕೋಟೆ ನವೀನ್ ಕುಮಾರ್ ಪ್ರಮುಖ ಮುಖಂಡ ಅಸ್ಲಾಂ ಇದ್ದರು.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



