ಬೆಂಗಳೂರು:ಪತ್ರಕರ್ತರು ಸದಾ ಒತ್ತಡದಲ್ಲಿ ಕಾರ್ಯನಿರ್ವಹಿಸುತ್ತಾರೆ ಅವರು ವೃತ್ತಿಯಲ್ಲಿ ಸಕ್ರೀಯರಾಗಬೇಕಾದರೆ, ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡುರಾವ್ ಹೇಳಿದರು.
ಅವರು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಮತ್ತು ಬಿಬಿಎಂಪಿ ಸಹಯೋಗದೊಂದಿಗೆ ಪತ್ರಕರ್ತರಿಗೆ ಏರ್ಪಡಿಸಿದ್ದ ಉಚಿತ ಆರೋಗ್ಯ ತಪಾಸಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪತ್ರಕರ್ತರು ಸಮಾಜ ಮತ್ತು ಸರ್ಕಾರದ ನಡುವಿನ ಸಂಪರ್ಕ ಸೇತುವೆಯಾಗಿ ಕಾರ್ಯನಿರ್ವಹಿಸುತ್ತಿದ್ದು ಅವರು ಶಿಸ್ತಿನ ಜೀವನವನ್ನು ಪಾಲಿಸಬೇಕಾಗುತ್ತದೆ. ಹಾಗಾಗಿ ನಿರಂತರ ಆರೋಗ್ಯ ತಪಾಸಣೆಗಳನ್ನು ಮಾಡಿಸಿಕೊಂಡು ಉತ್ತಮ ಆರೋಗ್ಯ ಕಾಪಾಡಿಕೊಳ್ಳುವುದು ಅತ್ಯಗತ್ಯ ಎಂದರು.
ಆರೋಗ್ಯದ ವಿಚಾರದಲ್ಲಿ ಯಾರು ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ವಹಿಸಬಾರದು. ಆಗಿಂದಾಗ್ಗೆ ಆರೋಗ್ಯದ ಕುರಿತಾದ ತಪಾಸಣೆ ಮಾಡಿಸಿಕೊಂಡು ಜಾಗ್ರತೆ ವಹಿಸಿದರೆ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು. ಈ ನಿಟ್ಟಿನಲ್ಲಿ ಕೆಯುಡಬ್ಲ್ಯೂಜೆ ಪತ್ರಕರ್ತರ ಬಗ್ಗೆ ಕಾಳಜಿ ವಹಿಸಿ ಮಾಡುತ್ತಿರುವ ಕಾರ್ಯ ಶ್ಲಾಘನೀಯ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಪ್ರಾಸ್ತವಿಕವಾಗಿ ಮಾತನಾಡಿದ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಕೆಯುಡಬ್ಲ್ಯೂಜೆ ಸದಸ್ಯರ ಕಾಳಜಿಯೂ ಸಹ ಪತ್ರಕರ್ತರ ಸಂಘಕ್ಕೆ ಮುಖ್ಯವಾಗಿ ಇರುವುದರಿಂದ ಸಂಘವು ಇಂತಹ ಕಾರ್ಯಚಟುವಟಿಕೆಗಳನ್ನು ಸತತವಾಗಿ ಹಮ್ಮಿಕೊಳ್ಳುತ್ತಿದೆ ಎಂದರು.
ಸಂಗದ ರಾಜ್ಯ ಖಜಾಂಚಿ ಎಂ.ವಾಸುದೇವ ಹೊಳ್ಳ ಸ್ವಾಗತಿಸಿದರು. ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ವಿ.ಮುನಿರಾಜು, ಬಿಬಿಎಂಪಿ ಆರೋಗ್ಯಾಧಿಕಾರಿ ಡಾ.ಶರಣಪ್ಪ ವೇದಿಕೆಯಲ್ಲಿ ಉಪಸ್ಥಿತರಿದ್ದರು.ರಾಜ್ಯ ಸಮಿತಿ ಸದಸ್ಯರಾದ ಕೌಸಲ್ಯ ಫಳನಾಕರ್, ಕೆ. ಆರ್ .ದೇವರಾಜ್,ಮತ್ತು ನರೇಂದ್ರ ಪಾರೇಕಟ್, ಶಿವರಾಜ್ ಮುಂತಾದವರು ಇದ್ದರು.
Breaking News
- ಫೋಟೋಗೆ ಅಡ್ಡ ಬಂದಿದ್ದಕ್ಕೆ ಉತ್ತರ ಭಾರತೀಯನ ದೌರ್ಜನ್ಯ ರಕ್ತ ಬರುವಂತೆ ಹಲ್ಲೆ
- ವಿಶ್ವದ ಗಗನಚುಂಬಿ ಕಟ್ಟಡದ ಎತ್ತರ 1 ಕೀ.ಮಿ!
- ಚಾಮುಂಡೇಶ್ವರಿ ಆಶಿರ್ವಾದ ನನ್ನ ಮೇಲೆ ಇದೆ ಸಿದ್ದರಾಮಯ್ಯ
- ಮದನಪಲ್ಲಿ ಜಿಲ್ಲೆ ರಚನೆ ಸದ್ಯಕ್ಕಿಲ್ಲ ಚಂದ್ರಬಾಬು
- ಶ್ರೀನಿವಾಸಪುರ ನೌಕರರ ಸಂಘದ ಮತದಾರ ಪಟ್ಟಿಯಲ್ಲಿ ಅಕ್ರಮ ಅರೋಪ!
- lover Boy ಕಳ್ಳಾಟಕ್ಕೆ ಬೆಸೆತ್ತು ಕಳ್ಳಿ ಹಾಲು ಕುಡಿದ ಯುವತಿ ಆತ್ಮಹತ್ಯೆಗೆ ಯತ್ನ!
- ಶ್ರೀನಿವಾಸಪುರ ಅಪರಿಚಿತ ವಾಹನ ಬಡಿದು ಬೈಕನಲ್ಲಿದ್ದ ತಾಯಿ-ಮಗ ಸಾವು
- ಹರಿಯಾಣದಲ್ಲಿ 200 Days ಮುಖ್ಯಮಂತ್ರಿಯಿಂದ ಬಿಜೆಪಿಗೆ ಹ್ಯಾಟ್ರಿಕ್ ಗೆಲವು!
- ಶ್ರೀನಿವಾಸಪುರ ತಾಡಿಗೋಳ್ RTO ಚೆಕ್ ಪೋಸ್ಟ್ ಲೋಕಾಯುಕ್ತ ದಾಳಿ.
- ಮುತ್ತಕಪಲ್ಲಿ ಪಂಚಾಯಿತಿ ಅಕ್ರಮಗಳ ತನಿಖೆಗೆ ಆಗ್ರಹ
Saturday, October 12