ನ್ಯೂಜ್ ಡೆಸ್ಕ್: ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲ್ ನಲ್ಲಿದ್ದ ನಟ ದರ್ಶನ್ ಅವರಿಗೆ ಇಂದು ಹೈಕೋರ್ಟ್ 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದು ಈ ವಿಚಾರವಾಗಿ ಸಚಿವ ಜಮೀರ್ ಅಹ್ಮದ್ ಖಾನ್ ಪ್ರತಿಕ್ರಿಯೆ ನೀಡಿ ದರ್ಶನ್ ಅವರು ನನಗೆ ತುಂಬಾ ಆಪ್ತರಾಗಿದ್ದು ಅವರಿಗೆ ಜಾಮೀನು ಸಿಕ್ಕಿರುವುದು ನನಗೆ ಖುಷಿಯಾಗಿದೆ ಎಂದು ತಿಳಿಸಿದ್ದಾರೆ.
ಹಾವೇರಿ ಜಿಲ್ಲೆಯ ಶಿಗ್ಗಾವಿಯಲ್ಲಿ ಚುನಾವಣೆ ಕ್ಯಾಂಪೈನ್ ನಲ್ಲಿರುವ ಸಚಿವ ಜಮೀರ್ ಅಹ್ಮದ್ ಖಾನ್ ಇಂದು ಮಾಧ್ಯಮಗಳೊಂದಿಗೆ ಮಾತನಾಡಿ ನ್ಯಾಯಾಲಯದಲ್ಲಿ ದರ್ಶನ್ಗೆ ಮಧ್ಯಂತರ ಜಾಮೀನು ಸಿಕ್ಕಿದೆ ಎಂದು ಗೊತ್ತಾಯಿತು. ಅವರು ನನ್ನ ಆಪ್ತರು. ಆತ್ಮೀಯರಾಗಿರುವ ಕಾರಣಕ್ಕೆ ಜಾಮೀನು ಸಿಕ್ಕಿರುವುದು ಸಹಜವಾಗಿಯೇ ಖುಷಿ ತಂದಿದೆ. ಅವರ ಆರೋಗ್ಯ ವಿಚಾರಿಸುತ್ತೇನೆ. ಅಲ್ಲದೆ ಈ ಘಟನೆಗೂ ಮುನ್ನ ಆಗಾಗ ಭೇಟಿಯಾಗುತ್ತಿದ್ದೆವು ಎಂದು ಹೇಳಿದರು.
ಇದೆ ವೇಳೆ ಉಪಚುನಾವಣೆ ಕುರಿತಂತೆ ಮಾತನಾಡಿದ ಅವರು, ಸಿದ್ದರಾಮಯ್ಯನವರು ಇಡೀ ರಾಜ್ಯವನ್ನು ಅಭಿವೃದ್ಧಿ ಮಾಡಿದ್ದಾರೆ. ಆದರೆ ಬೊಮ್ಮಾಯಿ ರಾಜ್ಯ ಇರಲಿ, ತಮ್ಮ ಕ್ಷೇತ್ರವನ್ನೂ ಸಹ ಅಭಿವೃದ್ಧಿ ಮಾಡಿಲ್ಲ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ 8 ಸಾವಿರ ಮತಗಳ ಲೀಡ್ ಸಿಕ್ಕಿತ್ತು. ಆಗ ಬೊಮ್ಮಾಯಿ ಶೇಂಗಾ ಬೀಜ ತಿನ್ನುತ್ತಿದ್ದರಾ? ಎಂದು ಜಮೀರ್ ಇದೇ ವೇಳೆ ಟೀಕಿಸಿದರು.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



