ಶ್ರೀನಿವಾಸಪುರ: ಪ್ರೌಡಶಾಲಾ ವಿಧ್ಯಾರ್ಥಿಯ ಬೈಕ್ ವೀಲಿಂಗ್ ಹುಚ್ವಾಟಕ್ಕೆ ಏಳು ಮಂದಿ ವಿಧ್ಯಾರ್ಥಿಗಳು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿಸ್ಥೆ ಪಡೆಯುತ್ತಿದ್ದಾರೆ.
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದ KSRTC ಬಸ್ ಡಿಪೋ ಬಳಿ ಶ್ರೀನಿವಾಸಪುರದ ಪ್ರತಿಷ್ಟಿತ ವೇಣು ಶಾಲೆಯಲ್ಲಿ ಓದುತ್ತಿರುವ ಪ್ರೌಡಶಾಲಾ ವಿಧ್ಯಾರ್ಥಿ ಸೂರ್ಯ ತಾನು ತಂದಿದ್ದ ಪಲ್ಸರ್ ಬೈಕ್ ನಲ್ಲಿ ತನ್ನ ಇಬ್ಬರು ಸ್ನೇಹಿತರನ್ನು ಕೂರಿಸಿಕೊಂಡು ನಡು ರಸ್ತೆಯಲ್ಲಿ ಬೈಕ್ ವೀಲಿಂಗ್ ಮಾಡುತ್ತ ಸ್ಟಂಟ್ ಮಾಡಿಕೊಂಡು ಬೈಕ್ ಚಲಾಯಿಸಿಕೊಂಡು ಹೋಗಿರುತ್ತಾನೆ ಈ ಸಂದರ್ಭದಲ್ಲಿ ಆಯಾತಪ್ಪಿದ ಬೈಕ್ ರಸ್ತೆಯಲ್ಲಿ ಹೋಗುತ್ತಿದ್ದ ವಿಧ್ಯಾರ್ಥಿಗಳ ಮೇಲೆ ಹರಿದಿದೆ ಘಟನೆಯಿಂದ ಏಳು ವಿಧ್ಯಾರ್ಥಿನಿಯರು ಮತ್ತು ಬೈಕ್ ಸವಾರ ಸೂರ್ಯ ಹಾಗು ಹಿಂಬದಿ ಕುಳಿತಿದ್ದ ಇಬ್ಬರು ವಿಧ್ಯಾರ್ಥಿಗಳು ತೀವ್ರವಾಗಿ ಗಾಯಗೊಂಡು ಚಿಕಿತ್ಸೆಗಾಗಿ ಶ್ರೀನಿವಾಸಪುರ ಸರ್ಕಾರಿ ಆಸ್ಪತ್ರೆ ಹಾಗು ಖಾಸಗಿ ಆಸ್ಪತ್ರೆಗೆ ದಾಖಲಾಗಿರುತ್ತಾರೆ.
ಲಿಖಿತ ಎನ್ನುವ ವಿಧ್ಯಾರ್ಥಿನಿ ಸ್ಥಿತಿ ಗಂಭೀರವಾಗಿದ್ದು ಕೋಲಾರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ತಡರಾತ್ರಿ ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ರವಾನಿಸಿರುವುದಾಗಿ ಹೇಳಲಾಗಿದೆ.
ಘಟನ ಸ್ಥಳಕ್ಕೆ ಶ್ರೀನಿವಾಸಪುರ ಇನ್ಸ್ಪೇಕ್ಟರ್ ರವಿಕುಮಾರ್ ಭೇಟಿ ನೀಡಿ ಮಾಹಿತಿ ಪಡೆದು ಬೈಕ್ ಅನ್ನು ವಶಕ್ಕೆ ಪಡೆದಿರುತ್ತಾರೆ. ಈ ಸಂಬಂಧ ವಿಧ್ಯಾರ್ಥಿ ಸೂರ್ಯ ಪೋಷಕರ ವಿರುದ್ದ ದೂರುದಾಖಲಿಸುವುದಾಗಿ ಹೇಳಿರುತ್ತಾರೆ.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



