ನ್ಯೂಜ್ ಡೆಸ್ಕ್:ಮಧ್ಯಪ್ರದೇಶದ ಮೌಗಂಜ್ ಜಿಲ್ಲೆಯಲ್ಲಿ ಚಲಿಸುವ ಆಂಬ್ಯುಲೆನ್ಸ್ನಲ್ಲಿ 16 ವರ್ಷದ ಬಾಲಕಿಯ ಮೇಲೆ ಇಬ್ಬರು ಸಾಮೂಹಿಕ ಅತ್ಯಾಚಾರವೆಸಗಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.
ಪೊಲೀಸರ ಮಾಹಿತಿಯಂತೆ ಘಟನೆ ನವೆಂಬರ್ 25 ರಂದು ಜಿಲ್ಲಾ ಕೇಂದ್ರ ಮೌಗಂಜ್ನಿಂದ ಸುಮಾರು 30 ಕಿಮೀ ದೂರದಲ್ಲಿರುವ ಹನುಮಾನ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಮೌಗಂಜ್ ಜಿಲ್ಲೆ ಹನುಮಾನ ತಹಸಿಲ್ ಉತ್ತರ ಪ್ರದೇಶದ ಮಿರ್ಜಾಪುರ್ ಜಿಲ್ಲೆಯೊಂದಿಗೆ ಗಡಿಯನ್ನು ಹಂಚಿಕೊಂಡಿದೆ. ಇಬ್ಬರು ವ್ಯಕ್ತಿಗಳು ತನ್ನನ್ನು ಅಪಹರಿಸಿ ಜನನಿ ಎಕ್ಸ್ಪ್ರೆಸ್ ಆಂಬ್ಯುಲೆನ್ಸ್ಗೆ ಬಲವಂತವಾಗಿ ಹತ್ತಿಸಿ ಅಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆ ಪೊಲೀಸರಿಗೆ ತಿಳಿಸಿದ್ದಾಳೆ ಇದನ್ನು ‘108- ಆಂಬ್ಯುಲೆನ್ಸ್’ ಎಂದೂ ಕರೆಯುತ್ತಾರೆ. ಜನನಿ ಎಕ್ಸ್ಪ್ರೆಸ್ ಆಂಬ್ಯುಲೆನ್ಸ್ ಅನ್ನು ರಾಜ್ಯ ಸರ್ಕಾರವು ಪಿಪಿಪಿ ಮಾದರಿಯಲ್ಲಿ ಮಧ್ಯಪ್ರದೇಶದ ಗ್ರಾಮೀಣ ಭಾಗಗಳಲ್ಲಿ ಗರ್ಭಿಣಿಯರು, ಅನಾರೋಗ್ಯದ ಶಿಶುಗಳು ಮತ್ತು ಬಿಪಿಎಲ್ ಕುಟುಂಬಗಳಿಗೆ ಅನಾರೋಗ್ಯ ತುರ್ತು ಬಳಸಲು ಒದಗಿಸಿದೆ.
ಆರೋಪಿಗಳಾದ ವೀರೇಂದ್ರ ಚತುರ್ವೇದಿ (ಆಂಬ್ಯುಲೆನ್ಸ್ ಚಾಲಕ) ಮತ್ತು ಆತನ ಸ್ನೇಹಿತ ರಾಜೇಶ್ ಕೇವತ್ ಅವರನ್ನು ಬುಧವಾರ ರಾತ್ರಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಆರೋಪಿಗಳು ಈ ಘಟನೆ ನಡೆದ ಹನುಮಾನ ತಹಸಿಲ್ನಿಂದ ಸುಮಾರು 50 ಕಿಮೀ ದೂರದಲ್ಲಿರುವ ಮೌಗಂಜ್ ಜಿಲ್ಲೆಯ ನೈಗರ್ಹಿ ತಹಸಿಲ್ನ ನಿವಾಸಿಗಳಾಗಿದ್ದು ನವೆಂಬರ್ 25 ರಂದು ಸಂತ್ರಸ್ತೆ ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಎಫ್ಐಆರ್ ದಾಖಲಿಸಿದ್ದಾರೆ ವೈದ್ಯಕೀಯ ಪರೀಕ್ಷೆಯಲ್ಲಿ ಅತ್ಯಾಚಾರ ದೃಢಪಟ್ಟಿದ್ದು, ಇಬ್ಬರೂ ಆರೋಪಿಗಳನ್ನು ಬುಧವಾರ ಬಂಧಿಸಲಾಗಿದೆ ಎಂದು ಮೌಗಂಜ್ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಸರ್ನಾ ಠಾಕೂರ್ ತಿಳಿಸಿದ್ದಾರೆ.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Sunday, April 27