ಚಿಂತಾಮಣಿ:ಮುಡಾ ಹಗರಣದಲ್ಲಿ ಸರ್ಕಾರ ಪತನವಾಗುವುದು ಗ್ಯಾರೆಂಟಿ ಎಂದು ಶ್ರೀನಿವಾಸಪುರ ಶಾಸಕ ವೆಂಕಟಶಿವಾರೆಡ್ಡಿ ಹೇಳಿದರು ಅವರು ಚಿಂತಾಮಣಿ ನಗರದ ಹೊರವಲಯದಲ್ಲಿ ಜೆಕೆ ಭವನದಲ್ಲಿ ನಡೆದಂತ ಕೋಲಾರ ಹಾಗು ಚಿಕ್ಕಬಳ್ಳಾಪುರ ಸಂಸದರ ಸನ್ಮಾನ ಸಮಾರಂಭ ಕಾರ್ಯಕ್ರಮದಲ್ಲಿ ಮಾತನಾಡಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ತೀವ್ರ ವಾಗ್ದಾಳಿ ನಡೆಸಿದರು.
ಚಿಂತಾಮಣಿ ಮಾಜಿ ಶಾಸಕ ಕೃಷ್ಣಾರೆಡ್ಡಿ ತಮ್ಮ ಸಾರ್ವಜನಿಕ ಕಚೇರಿ ಜೆಕೆ ಭವನದಲ್ಲಿ ಆಯೋಜಿಸಿದ್ದ ಕೋಲಾರ-ಚಿಕ್ಕಬಳ್ಳಾಪುರ ಲೋಕಸಭಾ ಚುನಾವಣೆಯಲ್ಲಿ ವಿಜೇತರಾದ ಕೋಲಾರ ಸಂಸದ ಮಲ್ಲೇಶ್ ಬಾಬು ಹಾಗು ಚಿಕ್ಕಬಳ್ಳಾಪುರ ಕ್ಷೇತ್ರದ ಸಂಸದ ಡಾ.ಕೆ.ಸುಧಾಕರ್ ಅವರುಗಳಿಗೆ ಏರ್ಪಡಿಸಿದ್ದ ಸನ್ಮಾನ ಸಮಾರಂಭ ಕಾರ್ಯಕ್ರಮದಲ್ಲಿ ಮಾತನಾಡಿದ ವೆಂಕಟಶಿವಾರೆಡ್ಡಿ ನಾನು 5 ಬಾರೀ ಶಾಸಕನಾಗಿರುವೆ ನನ್ನ 45 ವರ್ಷದ ರಾಜಕೀಯ ಜೀವನದಲ್ಲಿ ಇತಂಹ ಕೆಟ್ಟ ಹಾಗು ಭ್ರಷ್ಟ ಸರ್ಕಾರವನ್ನು ನಾನು ನೋಡಿಲ್ಲಾ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ದ ತೀವ್ರ ಬೇಸರವನ್ನು ಹೊರಹಾಕಿದರು.ಅಭಿವೃದ್ಧಿ ಶ್ಯೂನ್ಯ ಸರ್ಕಾರದಲ್ಲಿ ಬಿಟ್ಟಿ ಭಾಗ್ಯಗಳನ್ನು ಕೊಟ್ಟು ರಾಜ್ಯವನ್ನು ಶ್ರೀಲಂಕಾ ಪಾಕಿಸ್ತಾನದ ಪರಿಸ್ಥಿತಿಗೆ ತಳ್ಳಲಿದ್ದಾರೆ ಎಂದು ಕಾಂಗ್ರೆಸ್ ಸರ್ಕಾರವನ್ನು ಜರಿದರು.
ಲೋಕಸಭಾ ಚುನಾವಣೆಯಲ್ಲಿ ಕೋಲಾರ-ಚಿಕ್ಕಬಳ್ಳಾಪುರ ಕ್ಷೇತ್ರಗಳ ಮತದಾರರು ಉತ್ತಮ ಅಭ್ಯರ್ಥಿಗಳನ್ನು ಗೆಲ್ಲಿಸಿದ್ದಾರೆ ಇಬ್ಬರು ಗೌರಹ್ವಾನಿತ ವ್ಯಕ್ತಿಗಳು ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸುವ ಕಾಳಜಿ ಇಟ್ಟುಕೊಂಡಿದ್ದಾರೆ, ಚಿಕ್ಕಬಳ್ಳಾಪುರ ಲೋಕಸಭಾ ಸಂಸದ ಡಾ.ಕೆ.ಸುಧಾಕರ್ ಅವರು ಅನುಭವಿ ರಾಜಕಾರಣಿ ಅಭಿವೃದ್ಧಿ ಹರಿಕಾರರು ಎಂದು ಹೊಗಳಿದ ಅವರು ಜನ ಕೊಟ್ಟ ಗೌರವವನ್ನು ನೂತನ ಸಂಸದರು ಉಳಿಸಿಕೊಂಡು ರಾಜಕಾರಣ ಮಾಡುವಂತೆ ಸಲಹೆ ಇತ್ತರು.
ದೇಶ ಮೋದಿ ನೇತೃತ್ವದಲ್ಲಿ ಸಾಕಷ್ಟು ಅಭಿವೃದ್ಧಿ ಕಾಣುತ್ತಿದೆ.ಕುಮಾರಸ್ವಾಮಿಯಂತಹ ಅಪರೂಪದ ಆಡಳಿತಗಾರನಿಗೆ ಒಳ್ಳೆಯ ಅವಕಾಶ ಸಿಕ್ಕಿದೆ. ನಮ್ಮ ಭಾಗದ ರಸ್ತೆಗಳ ಅಭಿವೃದ್ಧಿಗೆ ಅವರ ಬಳಿ ಬೇಡಿಕೆ ಇಟ್ಟಿದ್ದು ಅದನ್ನು ಅವರು ಶೀಘ್ರದಲ್ಲೇ ಮಂಜೂರು ಮಾಡಿಸಲಿದ್ದಾರೆ ಎಂದು ವಿಶ್ವಾಸವನ್ನು ವ್ಯಕ್ತಪಡಿಸಿದರು.
Breaking News
- ನಾಗಮಂಗಲ ಗಲಭೆ ಸಂಬಂಧ ಕೇರಳದ ಇಬ್ಬರ ಬಂಧನ!
- J&Kಚುನಾವಣೆ ವೇಳೆ ಎನ್ಕೌಂಟರ್ ಮೂವರು ಉಗ್ರರ ಹತ್ಯೆ ಇಬ್ಬರು ಸೈನಿಕರ ವೀರ ಮರಣ!
- BIGSHOK ಏರಿಕೆಯಾದ ಅಡುಗೆ ಎಣ್ಣೆ ರೇಟು!
- ಶ್ರೀನಿವಾಸಪುರದ KSRTC ಗಣೇಶ ವಿಸರ್ಜನೆ
- ಶ್ರೀನಿವಾಸಪುರದ ಯುವಕ ಗೋಕರ್ಣದಲ್ಲಿ ಸಮುದ್ರದಪಾಲು
- ಮದನಪಲ್ಲಿ-ತಿರುಪತಿ ಘಾಟ್ ರಸ್ತೆಯಲ್ಲಿ ಅಪಘಾತ ಕರ್ನಾಟಕದ ನಾಲ್ವರ ಸಾವು!
- ಕಮ್ಯುನಿಸ್ಟ್ ಧ್ವನಿ ಸೀತಾರಾಂ ಯೆಚೂರಿ ಇನ್ನಿಲ್ಲ!
- ಚಿಂತಾಮಣಿ ನಗರಸಭೆ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ
- ಅಮೇರಿಕಾದಲ್ಲಿ ರಾಹುಲ್-ಶಿವಕುಮಾರ್ ಭೇಟಿ ರಾಜಕೀಯ ಸಂಚಲನ
- ಮೃತ ಪತ್ರಕರ್ತನ ಕುಟುಂಬಕ್ಕೆ ಪರಿಹಾರ ಮಂಜೂರು ಮಾಡಿದ ಸಿಎಂ
Monday, September 16