ಶ್ರೀನಿವಾಸಪುರ:ಅಪರಿಚಿತ ವಾಹನ ಬಡಿದು ದ್ವಿಚಕ್ರ ವಾಹನದಲ್ಲಿ ಊರಿಗೆ ತೆರಳುತ್ತಿದ್ದ ತಾಯಿ ಮಗ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಮಂಗಳವಾರ ರಾತ್ರಿ 8 ಗಂಟೆ ಸಮಯದಲ್ಲಿ ಪಟ್ಟಣದ ಹೊರ ವಲಯದಲ್ಲಿ ಶ್ರೀನಿವಾಸಪುರ-ಮುಳಬಾಗಿಲು ರಸ್ತೆಯಲ್ಲಿ ಪುರಸಭೆ ಕಟ್ಟಡದ ಬಳಿ ನಡೆದಿರುತ್ತದೆ.
ಮೃತರನ್ನು ಶ್ರೀನಿವಾಸಪುರ ತಾಲ್ಲೂಕಿನ ಕೇತಗಾನಹಳ್ಳಿ ಗ್ರಾಮದ ಪದ್ಮಮ್ಮ(48)ಹಾಗು ಅವರ ಮಗ ರಘು(22)ಎಂದು ಗುರುತಿಸಲಾಗಿದೆ.ಪದ್ಮಮ್ಮನಿಗೆ ಮೈಯಲ್ಲಿ ಹುಷಾರಿಲ್ಲ ಎಂದು ಮಗ ರಘು ಜೋತೆ ದ್ವಿಚಕ್ರ ವಾಹನದಲ್ಲಿ ಶ್ರೀನಿವಾಸಪುರಕ್ಕೆ ಆಗಮಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ಊರಿಗೆ ಹೋಗುತ್ತಿರುವಾಗ ಎದರುಗಡೆಯಿಂದ ಬಂದಂತ ಬೊಲೊರೋ ವಾಹನ ಡಿಕ್ಕಿ ಹೋಡೆದ ಪರಿಣಾಮ ಅಪಘಾತ ಆಗಿದೆ ಎಂದು ಹೇಳಲಾಗುತ್ತಿದೆ ಡಿಕ್ಕಿ ಹೊಡೆದ ವಾಹನ ನಿಲ್ಲಿಸದೆ ಹೋರಟು ಹೋಗಿದ್ದು ಅಪರಿಚಿತ ವಾಹನದ ಪತ್ತೆಗಾಗಿ ಪೊಲೀಸರು ಹಾದಿಯಲ್ಲಿರುವಂತ ಸಿಸಿ ಕ್ಯಾಮೆರಾಗಳ ಪರಿಶೀಲನೆಗೆ ಮುಂದಾಗಿದ್ದಾರೆ ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಾಲಾಗಿದೆ.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



