ಕೋಲಾರ:ಕೋಲಾರ ಲೋಕಸಭಾ ವ್ಯಾಪ್ತಿಯಲ್ಲಿ ನೀರಾವರಿ ಯೋಜನೆ, ಯುಕವರಿಗೆ ಉದ್ಯೋಗ ಸೃಷ್ಟಿಸಿ ಕುರಿತಂತೆ ಯೋಜನೆಗಳನ್ನು ರೂಪಿಸಿ ಜಾರಿಗೆ ತರಲು ಮೊದಲ ಆಧ್ಯತೆಯನ್ನು ನೀಡುವುದಾಗಿ ಸಂಸದ ಮಲ್ಲೇಶ್ಬಾಬು ಹೇಳಿದರು.
ಮೊದಲ ಬಾರಿಗೆ ಸಂಸತ್ ಪ್ರವೇಶಿಸಿರುವ ಅವರು ದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಕೋಲಾರ ಜನತೆ ನೀಡಿರುವ ಜವಾಬ್ದಾರಿಯನ್ನು ಅತ್ಯಂತ ಗೌರ್ಹಾನಿತವಾಗಿ ನಿಭಾಯಿಸುತ್ತೇನೆ 5 ವರ್ಷದ ಅವಧಿಯಲ್ಲಿ ಕ್ಷೇತ್ರದ ಅಭಿವೃದ್ದಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದರು.
ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಸಾಕಷ್ಟು ಅನುಭವವನ್ನು ಹೊಂದಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಕೇಂದ್ರದಲ್ಲಿ ಸಚಿವ ಸ್ಥಾನ ನೀಡಿದರೆ ಅವರ ಜೊತೆ ಇದ್ದು ಅವರ ಕಾರ್ಯಶೈಲಿಯಂತೆ ಜಿಲ್ಲೆಯ ಜನತೆಗೆ ನ್ಯಾಯ ಒದಗಿಸುವುದಾಗಿ ತಿಳಿಸಿದರು.
ಕುಮಾರಸ್ವಾಮಿಯವರಿಗೆ ಯಾವ ಖಾತೆ ನೀಡುತ್ತಾರೆ ಎನ್ನುವುದು ಬಿಜೆಪಿ ಹೈಕಮಾಂಡ್ ಹಾಗೂ ಕುಮಾರಸ್ವಾಮಿ ಅವರಿಗೆ ಬಿಟ್ಟ ವಿಚಾರ ನೀರಾವರಿ ಯೋಜನೆಗಳು ಅನುಷ್ಠನಗೊಳಿಸಲು ಸೂಕ್ತವಾದ ಸಚಿವ ಸ್ಥಾನ ನೀಡಿದರೆ ಉತ್ತಮ ಎಂದು ತಿಳಿಸಿದರು.
ಕಳೆದ 5 ವರ್ಷಗಳಲ್ಲಿ ಬಿಜೆಪಿ ಸಂಸದರಾಗಿದ್ದ ಎಸ್ ಮುನಸ್ವಾಮಿ ಅವರು ಕ್ಷೇತ್ರಕ್ಕೆ ಸಾಕಷ್ಟು ಅಭಿವೃದ್ದಿ ಕಾರ್ಯಕ್ರಮಗಳನ್ನು ಕೊಟ್ಟಿದ್ದಾರೆ ಸಮಯದ ಅಭಾವದಿಂದ ಕೆಲವು ಪೂರ್ಣಗೊಂಡಿಲ್ಲ ಅವರು ಕೈಗೆತ್ತಿಗೊಂಡಿರುವ ಅಭಿವೃದ್ದಿ ಯೋಜನೆಗಳನ್ನು ಪೂರೈಸಲು ಪ್ರಾಮಾಣಿ ಪ್ರಯತ್ನವನ್ನು ಮಾಡುತ್ತೇನೆ, ನೀರಾವರಿ ಯೋಜನೆ ಹಾಗೂ ಯುವಕರಿಗೆ ಉದ್ಯೋಗ ಸೃಷ್ಟಿಸಬೇಕು ಎನ್ನುವುದು ನನ್ನ ಮೊದಲ ಆಧ್ಯತೆ ಎಂದು ವಿವರಿಸಿದರು.
ಬಂಗಾರಪೇಟೆ ಹಾಗೂ ಕೆಜಿಎಫ್ ಭಾಗದಿಂದ ಪ್ರತಿನಿತ್ಯ 30 ಸಾವಿರಕ್ಕೂ ಹೆಚ್ಚು ಯುವಕ ಯುವತಿಯರು ಉದ್ಯೋಗ ಆರಿಸಿ ಬೆಂಗಳೂರಿಗೆ ಹೋಗಿಬರುತ್ತಿದ್ದಾರೆ ಅದನ್ನು ತಪ್ಪಿಸಲು ಬಿಜಿಎಲ್ ಪ್ರದೇಶದಲ್ಲಿ ಉತ್ದಾದನಾ ಘಟಕ ಸ್ಥಾಪನೆಯಾಗಬೇಕು, ಕೋಲಾರ ಗಡಿಯಾದ ವಿ.ಕೋಟ ಪಲಮನೇರು ಭಾಗದಲ್ಲಿ ಹರಿಯುತ್ತಿರುವ ಕೃಷ್ಟ ನದಿ ನೀರನ್ನು ಕೋಲಾರಕ್ಕೆ ತರುವ ಬಗ್ಗೆ ಎನ್.ಡಿ.ಎ ಮೈತ್ರಿಯಲ್ಲಿ ಭಾಗವಾಗಿರುವ ಟಿಡಿಪಿ ಅವರ ಜೊತೆ ಮಾತನಾಡಲು ಒಳ್ಳೆಯ ಅವಕಾಶ ಲಭಿಸಿದೆ ಆಂದ್ರದ ಟಿಡಿಪಿ ಪಕ್ಷವು ಅಧಿಕಾರಕ್ಕೆ ಬಂದ ಕೂಡಲೇ ಕೃಷ್ಣಾ ನದಿ ನೀರನ್ನು ಕೋಲಾರಕ್ಕೆ ತರುವ ನಿಟ್ಟಿನಲ್ಲಿ ಪ್ರಧಾನಿಗಳ ಮೇಲೆ ಒತ್ತಡ ಹಾಕಿ ಈ ಯೋಜನೆ ಜಾರಿಗೆ ತರಲು ರೂಪು ರೇಷೆ ಮಾಡಲಾಗುವುದು ಎಂದು ಭರವಸೆ ವ್ಯಕ್ತಪಡಿದರು.
ಲೋಕಸಭಾ ಕ್ಷೇತ್ರದ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ, ಜೆಡಿಎಸ್ ಮುಖಂಡರು ಕಾರ್ಯಕರ್ತರು ಒಗ್ಗಟ್ಟಾಗಿ ಕೆಲಸ ಮಾಡಿದ್ದಾರೆ ಈ ಹಿನ್ನಲೆಯಲ್ಲಿ ಗೆಲುವು ಸಾಧಿಸಲು ಸಾಧ್ಯವಾಗಿದೆ ಅವರಿಗೆಲ್ಲಾ ಚಿರರುಣಿಯಾಗಿರುತ್ತೇನೆ ಎಂದರು.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Saturday, April 26