ಶ್ರೀನಿವಾಸಪುರ:ರಸ್ತೆಬದಿಯಲ್ಲಿ ವ್ಯಾಪಾರ ಮಾಡುವಂತ ಸಣ್ಣ-ಪುಟ್ಟ ವ್ಯಾಪಾರಸ್ಥರಿಗೆ ಆರ್ಥಿಕ ನೆರವು ಒದಗಿಸುವ ಸಲುವಾಗಿ ಪ್ರಧಾನಿಮಂತ್ರಿ ಮೋದಿ ಸರಕಾರ ಪ್ರಧಾನ ಮಂತ್ರಿ ಸ್ವನಿಧಿ ಯೋಜನೆ ಪ್ರಾರಂಬಿಸಿದೆ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳ ಪೈಕಿ ಒಂದಾಗಿರುವ ಪ್ರಧಾನಮಂತ್ರಿ ಸ್ವನಿಧಿ ಯೋಜನೆ ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಕೂಸಾಗಿದ್ದು, ಇದರ ಸೌಲತ್ತು ಪಡೆದುಕೊಂಡು ಸಣ್ಣ-ಪುಟ್ಟ ವ್ಯಾಪಾರಿಗಳು ಅರ್ಥಿಕವಾಗಿ ಅಭಿವೃದ್ಧಿಯಾಗುವಂತೆ ಸಂಸದ ಮುನಿಸ್ವಾಮಿ ಕರೆ ಇತ್ತರು ಅವರು ಪುರಸಭೆ ಆವರಣದಲ್ಲಿ ಆಯೋಜಿಸಿದ್ದ ಕೇಂದ್ರ ಸರ್ಕಾರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಅನುಷ್ಠಾನಗೊಳಿಸಿರುವ ಪ್ರಧಾನ ಮಂತ್ರಿ ಬೀದಿ ವ್ಯಾಪಾರಿಗಳ ಆತ್ಮನಿರ್ಭರ್ ನಿಧಿ’ (ಪಿಎಂ ಸ್ವನಿಧಿ) ಯೋಜನೆಯಡಿ ಅಯ್ಕೆಯಾಗಿರುವ ಫಲಾನುಭವಿಗಳಿಗೆ ವಿತರಿಸಿ ಮಾತನಾಡಿದರು ಮೀಟರ್ ಬಡ್ಡಿ ಮಾಫಿಯಾದಲ್ಲಿ ಬೀದಿ ವ್ಯಾಪಾರಿಗಳು ಸಿಲುಕದೆ ಆತ್ಮವಿಶ್ವಾಸದಿಂದ ವ್ಯಾಪಾರ ವಹಿವಾಟು ಮಾಡಿಕೊಳ್ಳಲು ಪ್ರಧಾನಿ ಮೋದಿ ಅವರು ಪಿಎಂ ಸ್ವನಿಧಿ ಯೋಜನೆ ಪ್ರಾರಂಭಿಸಿರುತ್ತಾರೆ
ಬೀದಿ ಬದಿ, ತಳ್ಳುವಗಾಡಿ, ಸಣ್ಣ ಸಣ್ಣ ವ್ಯಾಪಾರಿಗಳನ್ನು ಗುರುತಿಸಿ ಕೇಂದ್ರ ಸರ್ಕಾರದ ಸವಲತ್ತುಗಳನ್ನು ನೀಡುವ ಸಲುವಾಗಿ ಕಾರ್ಯಕ್ರಮ ರೂಪಿಸಲಾಗಿದೆ. ಬಡತನದಲ್ಲಿದ್ದು ವ್ಯಾಪಾರ ಮಾಡುವವರು ಮೀಟರ್ ಬಡ್ಡಿ ದಂದೆಗೆ ಸಿಲುಕದೆ ನೆಮ್ಮದಿಯ ಬದುಕು ಸಾಗಿಸಲು ನೆರವು ನೀಡುವಂತ ಕಾರ್ಯಕ್ರಮ ಆಗಿದ್ದು ಅರ್ಹರು ಯಾವುದೇ ಅಡಮಾನವಿಲ್ಲದೆ ಸಾಲಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದ್ದು ಆರಂಭಿಕವಾಗಿ 10 ಸಾವಿರ ಸಾಲ ತೆಗೆದುಕೊಳ್ಳಬಹುದು.ಸಾಲದ ಹಣವನ್ನು ಒಂದು ವರ್ಷದೊಳಗೆ ಮರುಪಾವತಿ ಮಾಡಬೇಕು.ನಿಗದಿತ ಅವಧಿಯೊಳಗೆ ಮರುಪಾವತಿ ಮಾಡಿದವರ ಸಾಲದ ಅರ್ಹತೆಯನ್ನು ಹೆಚ್ಚಿಸಿ, ಬಳಿಕ 20 ಸಾವಿರ ರೂ.ಗಳವರೆಗೆ ಸಾಲ ಕೊಡಲಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಪುರಸಭೆ ಮುಖ್ಯಾಧಿಕಾರಿ ಸತ್ಯನಾರಯಣ,ಕೋಲಾರ ಜಿಲ್ಲಾ ಬೆಜೆಪಿ ಅಧ್ಯಕ್ಷ ಡಾ.ವೇಣೂಗೋಪಾಲ್,ಮುಖಂಡರಾದ ರೋಣೂರುಚಂದ್ರಶೇಖರ್ ಮುಂತಾದವರು ಇದ್ದರು.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



