ನ್ಯೂಜ್ ಡೆಸ್ಕ್:ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ರಾಜಕೀಯದಲ್ಲಿ ಆಪರೇಷನ್ ಹಸ್ತದ ಬಗ್ಗೆ ಹಾಟ್ ಟಾಪಿಕ್ ಶುರುವಾಗಿದೆ, ಆಪರೇಷನ್ ಹಸ್ತ ನಡೆಯುತ್ತದೆ ಎಂದು ಸುದ್ದಿ ಸುಂಟರಗಾಳಿಯ ಅಲೆಗಳಂತೆ ಊಹಾಪೋಹಗಳಾಗಿ ಹರಿದಾಡುತ್ತಿವೆ.ಇದಕ್ಕೆ ಪುರಾವೆ ಎನ್ನುವಂತೆ ನೆಲಮಂಗಲ ಕಾಂಗ್ರೆಸ್ ಶಾಸಕ ಎನ್.ಶ್ರೀನಿವಾಸಯ್ಯ, ಬಿಜೆಪಿ ಶಾಸಕ ಸೋಮಶೇಖರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರಂತೆ ಇದಕ್ಕೆ ಬಿಜೆಪಿ ಶಾಸಕರಾದ ಎಸ್ಟಿ ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಕಾಂಗ್ರೆಸ್ ಸೇರ್ಪಡೆಗೆ ಚಿಂತನೆ ನಡೆಸಿದ್ದಾರಂತೆ ಎಂಬ ಸುದ್ದಿ ರಾಜ್ಯ ರಾಜಕೀಯ ಪಡಸಾಲೆಯಲ್ಲಿ ತಿರುಗಾಡುತ್ತಿದೆ. ಇದರ ನಡುವೆ ಮೊಸ್ಟ್ ಪವರ್ ಫುಲ್ ಕಾಂಗ್ರೆಸ್ ಲಿಡರ್ ದಿ.ಸಿ.ಎಂ ಡಿಕೆ ಶಿವಕುಮಾರ್ ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದೆಂದು ಹೇಳುವ ಮೂಲಕ ಆಪರೇಷನ್ ಹಸ್ತ ನಡೆಯುತ್ತದೆ ಎಂಬ ಕ್ಲೂ ಬಿಟ್ಟುಕೊಟ್ಟಿದ್ದಾರೆ.
ಬಾಂಬೆ ಬಾಯ್ಸ್ ಘರ್ವಾಪ್ಸಿ ವಿಚಾರದಲ್ಲಿ ಕಾಂಗ್ರೆಸ್ ಆಸಕ್ತಿ ವಹಿಸಿದೆ ಎನ್ನುವ ಮಾತು ಕೇಳಿಬರುತ್ತಿದೆ ಮೊನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬಿ.ಜೆ.ಪಿ ಶಾಸಕ ಎಸ್.ಟಿ ಸೋಮಶೇಖರ್ ಸರ್ಕಾರಿ ಕಾರ್ಯಕ್ರಮದ ಬಹಿರಂಗ ಸಭೆಯಲ್ಲಿ ಹೊಗಳಿದ್ದೆ ಘರ್ವಾಪ್ಸಿ ಸುಳಿವು ಎನ್ನಲಾಗಿತ್ತು ಹೀಗಾಗಿ ಸೋಮಶೇಖರ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಾರೆ ಎನ್ನುವ ಚರ್ಚೆಗಳು ನಡೆಯುತ್ತಿತ್ತು.
ಮೈಸೂರಿನಲ್ಲಿ ಮಾತನಾಡಿರುವ ಕೃಷಿ ಸಚಿವ ಚಲುವರಾಯಸ್ವಾಮಿ ಬಿಜೆಪಿ, ಜೆಡಿಎಸ್ ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಸೇರುವುದು ಖಚಿತ. ಈ ಬ್ಗಗೆ ಮಾತುಕತೆ ನಡೆಯುತ್ತಿದ್ದು, 10 ರಿಂದ 15 ಮಂದಿ ಹಾಲಿ ಮತ್ತು ಮಾಜಿ ಶಾಸಕರು ಕಾಂಗ್ರೆಸ್ ಸೇರಲು ಸಿದ್ಧರಿದ್ದಾರೆ ಪಕ್ಷ ಸೇರುವವರ ಹೆಸರನ್ನು ಈಗ ಹೇಳಲು ಸಾಧ್ಯವಿಲ್ಲ. ಇನ್ನೂ ಕೆಲವೇ ದಿನಗಳಲ್ಲಿ ಎಲ್ಲವೂ ಅಂತಿಮಗೊಳ್ಳಲಿದೆ ಎಂದು ಹೇಳುವ ಮೂಲಕ ಬಾಂಬ್ ಸಿಡಿಸಿದ್ದಾರೆ.
ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು ಡಿ.ಕೆ.ಶಿವಕುಮಾರ್!
ರಾಜ್ಯ ರಾಜಕೀಯದಲ್ಲಿ ಏನು ಬೇಕಾದರು ಆಗಬಹುದು ಎಂದು ಆಪರೇಷನ್ ಹಸ್ತದ ಗುಟ್ಟು ಬಿಟ್ಟುಕೊಟ್ಟಿರುವ ಡಿಕೆ ಶಿವಕುಮಾರ್
ಕಾಂಗ್ರೆಸ್ ಸೇರಲು ಸಿದ್ಧವಿದ್ದರೆ ಸೇರಿಸಿಕೊಳ್ಳಿ ಎಂದು ಹೇಳಿದ್ದೇನೆ. ಕೆಲ ಕಾರ್ಯಕರ್ತರು ಬಹಳ ಉತ್ಸಾಹದಿಂದ ಕೆಲಸ ಮಾಡ್ತಿದ್ದಾರೆ. ವೋಟ್ ಶೇರ್ ಜಾಸ್ತಿ ಮಾಡಿಕೊಳ್ಳಲು ಕಾರ್ಯಕರ್ತರಿಗೆ ಹೇಳಿದ್ದೇವೆ. ಸೋಮಶೇಖರ್ ಪಕ್ಷ ಸೇರ್ಪಡೆ ಬಗ್ಗೆ ವೈಯಕ್ತಿಕವಾಗಿ ಹೇಳಿರಬಹುದು. ಆ ವಿಚಾರ ಇನ್ನೂ ನನ್ನ ತನಕ ಬಂದಿಲ್ಲ, ಯಾವಾಗ ಏನು ಬೇಕಾದರೂ ಆಗಬಹುದು. ಆದ್ರೆ, ಯಾರು ಬರುತ್ತಾರೆ ಏನು ಎಂಬುವುದನ್ನ ನಾನು ಈಗ ಹೇಳುವುದಿಲ್ಲ ಎಂದಿರುವ ಅವರು,ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದೆಂದು ಓತ್ತಿ ಓತ್ತಿ ಹೇಳಿರುವುದೆ ಈಗ ದೊಡ್ದ ಸುದ್ದಿ.
ಗೃಹ ಸಚಿವ ಪರಮೇಶ್ವರ ಆಪರೇಷನ್ ಹಸ್ತದ ಮಾತು.
ಬಿಜೆಪಿಯಲ್ಲಿ ಬೆಸರದಿಂದ ಇರುವ ಶಾಸಕರು ಕಾಂಗ್ರೆಸ್ಗೆ ಬರಬಹುದು.ಈ ಹಿಂದೆ ಪಕ್ಷ ಬಿಟ್ಟು ಹೋದವರು ವಾಪಸ್ ಬಂದ ಉದಾಹರಣೆ ಇದೆ.ಬರುವ ಶಾಸಕರು ಕಾಂಗ್ರೆಸ್ ಐಡಿಯಾಲಜಿ ನಂಬಿ ಬರಲಿ.ಆದರೆ, ಅವರಿಗೆ ಫಸ್ಟ್ ಬೆಂಚ್ ಸಿಗುವುದಿಲ್ಲ. ತಪ್ಪು ಮಾಡಿರುವುದನ್ನು ಸರಿ ಮಾಡಿಕೊಂಡರೆ ಬರಬಹುದು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Monday, April 28