ಶ್ರೀನಿವಾಸಪುರ:ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ತಮಟೆ ಕಲಾವಿದ ನಾಡೋಜ ಪಿಂಡಿಪಾಪನಹಳ್ಳಿ ಮುನಿವೆಂಕಟಪ್ಪ ಅವರನ್ನು ಸೋಮವಾರ ಪಟ್ಟಣದಲ್ಲಿ ಅದ್ದೂರಿಯಾಗಿ ಸನ್ಮಾನಿಸಲು ಸಮಾನ ಮನಸ್ಕರ ಸಾಂಸ್ಕೃತಿಕ ವೇದಿಕೆ ಸಜ್ಜಾಗಿದೆ ಸೋಮವಾರ ತಾಲೂಕು ಕಛೇರಿಯ ಆವರಣದಲ್ಲಿ ಕಾರ್ಯಕ್ರಮ ಆಯೋಜಿಸಿರುವುದಾಗಿ ದಲಿತ ಮುಖಂಡರು ತಿಳಿಸಿದರು.
ಪಿಎಲ್ಡಿ ಬ್ಯಾಂಕ್ ಸಭಾಂಗಣದಲ್ಲಿ ಸಮಾನ ಮನಸ್ಕರ ಸಾಂಸ್ಕೃತಿಕ ವೇದಿಕೆ ವತಿಯಿಂದ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ. ಶ್ರೀನಿವಾಸನ್ ಮಾತನಾಡಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಪಿಂಡಿಪಾಪನಹಳ್ಳಿ ಮುನಿವೆಂಕಟಪ್ಪ ಅವರನ್ನು ಕೇಂದ್ರ ಸರ್ಕಾರ ಗುರುತಿಸಿ ಪ್ರಶಸ್ತಿ ನೀಡಿರುವುದಕ್ಕೆ ಹೆಮ್ಮೆಯ ವಿಚಾರವಾಗಿದ್ದು ತಮ್ಮ ಬಾಲ್ಯದಿಂದಲೇ ತಮಟೆ ವಾದ್ಯ ಅಭ್ಯಾಸ ಮಾಡುತ್ತ ವಿಶೇಷ ಕೌಶಲ್ಯವನ್ನು ಪಡೆದು ನಮ್ಮ ರಾಜ್ಯ ದೇಶ ಅಲ್ಲದೆ ವಿದೇಶಗಳಿಗೆ ತೆರಳಿ ತಮಟೆ ವಾದ್ಯದ ಸದ್ದನ್ನು ಕೇಳಿಸಿದ್ದಾರೆ ಇಂತಹ ಮಹಾನ್ ಕಲಾವಿದ ತಾಲೂಕಿನ ಅಳಿಯರಾಗಿದ್ದು ಅವರನ್ನು ತಾಲ್ಲೂಕಿಗೆ ಕರೆತಂದು ಅಭಿನಂದನೆ ಸಲ್ಲಿಸಿ ಅದ್ದೂರಿಯಾಗಿ ಗೌರವಿಸಲಾಗುವುದು ಎಂದರು. ಕಾರ್ಯಕ್ರಮದಲ್ಲಿ ತಾಲೂಕಿನ ಕಲಾವಿದರು,ಕವಿಗಳು,ಪ್ರಗತಿಪರ ಚಿಂತಕರು,ಸಾಹಿತಿಗಳು,ವಿದ್ಯಾರ್ಥಿಗಳು,ಶಿಕ್ಷಕರು, ಕಲಾಭಿಮಾನಿಗಳು, ಕನ್ನಡಪರ , ರೈತಪರ ಸಂಘಟನೆಗಳು, ಅಲ್ಪಸಂಖ್ಯಾತ ಹಾಗೂ ದಲಿತ ಸಂಘಟನೆಗಳ ಪದಾಧಿಕಾರಿಗಳು ಪಕ್ಷಾತೀತವಾಗಿ ಪಾಲ್ಗೊಂಡು ಸಮಾರಂಭವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.
ಪಲ್ಲಕ್ಕಿಯಲ್ಲಿ ಮೆರವಣಿಗೆ
ಮಾರ್ಚ್ 6 ರ ಸೋಮವಾರ ಬೆಳಿಗ್ಗೆ 11;30 ಕ್ಕೆ ಪಿಂಡಿಪಾಪನಹಳ್ಳಿ ಮುನಿವೆಂಕಟಪ್ಪರವರನ್ನ ಮುಳಬಾಗಿಲು ವೃತ್ತದಿಂದ ಪುಷ್ಪಪಲ್ಲಕಿಯಲ್ಲಿ ಗೌರವಯುತವಾಗಿ ಎಂಜಿ ರಸ್ತೆಯ ಮೂಲಕ ತಾಲ್ಲೂಕು ಕಛೇರಿ ಆವರಣಕ್ಕೆ ಕರೆತಂದು,ಶಾಸಕ ರಮೇಶ್ಕುಮಾರ್ ರವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸನ್ಮಾನ ಕಾರ್ಯಕ್ರಮದಲ್ಲಿ ಮುನಿವೆಂಕಟಪ್ಪನವರನ್ನು ಅಭಿನಂದಿಸಲಾಗುವುದು ಎಂದರು.
ಸುದ್ದಿಗೋಷ್ಠಿಯಲ್ಲಿ ಪಿಎಲ್ಡಿ ಬ್ಯಾಂಕ್ ತಾಲೂಕು ಅಧ್ಯಕ್ಷ ದಿಂಬಾಲ್ ಅಶೋಕ್ ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಕೆ.ಕೆ.ಮಂಜುನಾಥ್, ಮುಖಂಡರಾದ ದಲಿತ ಮುಖಂಡರಾದ ಉಪ್ಪರಪಲ್ಲಿ ತಿಮಯ್ಯ, ರಾಮಾಂಜನಮ್ಮ, ದೊಡ್ಡಬಂರ್ಲಾಪಲ್ಲಿ ಮುನಿಯಪ್ಪ, ಚಲ್ದಿಗಾನಹಳ್ಳಿ ಮುನಿವೆಂಕಟಪ್ಪ, ವೆಂಕಟೇಶ್, ದೊಡಮಲದೊಡ್ಡಿ, ಶ್ರೀನಿವಾಸ್, ಬೋರ್ವೆಲ್ ಕೃಷ್ಣಾರೆಡ್ಡಿ, ಅಂಬೇಡ್ಕರ್ ಪಾಳ್ಯ ನರಸಿಂಹಮೂರ್ತಿ, ಮುದಿಮಡಗು ವಾಸು,ವಿವಿಧ ಸಂಘಟನೆಗಳ ಹಲವರು ಉಪಸ್ಥಿತರಿದ್ದರು.
Breaking News
- ನಾಗಮಂಗಲ ಗಲಭೆ ಸಂಬಂಧ ಕೇರಳದ ಇಬ್ಬರ ಬಂಧನ!
- J&Kಚುನಾವಣೆ ವೇಳೆ ಎನ್ಕೌಂಟರ್ ಮೂವರು ಉಗ್ರರ ಹತ್ಯೆ ಇಬ್ಬರು ಸೈನಿಕರ ವೀರ ಮರಣ!
- BIGSHOK ಏರಿಕೆಯಾದ ಅಡುಗೆ ಎಣ್ಣೆ ರೇಟು!
- ಶ್ರೀನಿವಾಸಪುರದ KSRTC ಗಣೇಶ ವಿಸರ್ಜನೆ
- ಶ್ರೀನಿವಾಸಪುರದ ಯುವಕ ಗೋಕರ್ಣದಲ್ಲಿ ಸಮುದ್ರದಪಾಲು
- ಮದನಪಲ್ಲಿ-ತಿರುಪತಿ ಘಾಟ್ ರಸ್ತೆಯಲ್ಲಿ ಅಪಘಾತ ಕರ್ನಾಟಕದ ನಾಲ್ವರ ಸಾವು!
- ಕಮ್ಯುನಿಸ್ಟ್ ಧ್ವನಿ ಸೀತಾರಾಂ ಯೆಚೂರಿ ಇನ್ನಿಲ್ಲ!
- ಚಿಂತಾಮಣಿ ನಗರಸಭೆ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ
- ಅಮೇರಿಕಾದಲ್ಲಿ ರಾಹುಲ್-ಶಿವಕುಮಾರ್ ಭೇಟಿ ರಾಜಕೀಯ ಸಂಚಲನ
- ಮೃತ ಪತ್ರಕರ್ತನ ಕುಟುಂಬಕ್ಕೆ ಪರಿಹಾರ ಮಂಜೂರು ಮಾಡಿದ ಸಿಎಂ
Monday, September 16