ಕಾಶ್ಮೀರಿ ಪಂಡಿತರು ಅನುಭವಿಸಿದ ನರಕಯಾತನೆಯ ಕಥೆ ಆಧಾರಿತ ಸಿನಿಮಾ ‘ದಿ ಕಾಶ್ಮೀರ್ ಫೈಲ್ಸ್’ ದೊಡ್ಡ ಯಶಸ್ಸು ಕಂಡಿದೆ ವಿಮರ್ಶಕರ ಟೀಕೆಗಳ ಹೊರತಾಗಿಯೂ, ಬಹುಪಾಲು ಚಲನಚಿತ್ರ ಗಣ್ಯರು ಮತ್ತು ಪ್ರೇಕ್ಷಕರು ಚಿತ್ರವನ್ನು ನಿರ್ಮಿಸಿದ ನಿರ್ದೇಶಕ ಮತ್ತು ನಿರ್ಮಾಪಕರ ಬಗ್ಗೆ ಪ್ರಶಂಸೆಯ ಸುರಿಮಳೆಗೈದಿರುತ್ತಾರೆ. ಈ ನಿಟ್ಟಿನಲ್ಲಿ ತೆಲಗು ನಟ ಪವರ್ ಸ್ಟಾರ್ ಪವನ್ ಕಲ್ಯಾಣ್ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರ ನಿರ್ಮಾಪಕರನ್ನು ಹೊಗಳಿದ್ದಾರೆ. ಪ್ರಮುಖ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರು 1990 ರ ದಶಕದಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಂಸಾತ್ಮಕ ದಂಗೆ, ಗಲಭೆಗಳು ಮತ್ತು ಕಾಶ್ಮೀರಿ ಹಿಂದೂಗಳ ಮೇಲಿನ ದಾಳಿ ದೌರ್ಜನ್ಯಗಳ ಕುರಿತಾಗಿ “ದಿ ಕಾಶ್ಮೀರ್ ಫೈಲ್ಸ್” ಎಂಬ ಚಲನಚಿತ್ರ ನಿರ್ಮಾಣ ಮಾಡಿದ್ದು ಇದರ ನಿರ್ಮಾಪಕ ಅಭಿಷೇಕ್ ಅಗರ್ವಾಲ್ ಅವರು ನಿರ್ದೇಶಕ ಹರೀಶ್ ಶಂಕರ್ ಜೊತೆಗೂಡಿ ಪವರ್ ಸ್ಟಾರ್ ಪವನ್ ಕಲ್ಯಾಣ್ ಅವರನ್ನು ಭೇಟಿಯಾಗಿದ್ದರು ಈ ಸಂದರ್ಭದಲ್ಲಿ ಚಿತ್ರದ ಅದ್ಧೂರಿ ಯಶಸ್ಸಿಗೆ ನಿರ್ಮಾಪಕ ಅಭಿಷೇಕ್ ಅಗರ್ವಾಲ್ ಅವರನ್ನು ಪವನ್ ಕಲ್ಯಾಣ್ ಅಭಿನಂದಿಸಿದ್ದಾರೆ.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Sunday, April 27