ನ್ಯೂಜ್ ಡೆಸ್ಕ್:ಚಳಿಗಾಲ ಶುರುವಾಗಿದೆ ಮಂಜು ಬಿಳಲು ಆರಂಭವಾಗಿದೆ. ರೈತಾಪಿ ಜನ ಕೃಷಿ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ ಇಂತಹ ವಾತವರಣದಲ್ಲಿ ಮತ್ತೆ ಮಳೆಯ ಮುನ್ಸೂಚನೆ ನೀಡಲಾಗಿದೆ. ಮುಂದಿನ 48 ಗಂಟೆಗಳ ಕಾಲ ಮಳೆಯಾಗುವ ಬಗ್ಗೆ ಹೇಳಲಾಗಿದೆ. ನೈರುತ್ಯ ಬಂಗಾಳ ಕೊಲ್ಲಿಯಲ್ಲಿ ಹವಾಮಾನ ವೈಪರೀತ್ಯ ಉಂಟಾಗುವ ಪರಿಣಾಮ ಚಂಡಮಾರುತ ಸೃಷ್ಟಿಯಾಗಿ ಮಳೆಯ ಸಂಭವ ಇದೆ ಎನ್ನುವ ಮಾತು ತಜ್ನರಿಂದ ಹೇಳಲಾಗಿದೆ..
ಈ ಬಾರಿ ಹೆಚ್ಚೇ ಎನ್ನಬಹುದಾದಷ್ಟು ಮಳೆ ಸುರುದಿದೆ ಬಿಡುವು ಕೊಡದೇ ಸತತ ಮಳೆಯಿಂದ ಬೆಳೆಗಳು ನೆಲೆ ಕಚ್ಚಿ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ರೈತರು ಸಾಕಷ್ಟು ಕಷ್ಟ-ನಷ್ಟ ಅನುಭವಿಸಿದ್ದಾರೆ. ಇನ್ನೇನು ಮಳೆಗಾಲ ಮುಗಿದು ಚಳಿಗಾಲ ಆರಂಭವಾಗಿದೆ ಎನ್ನುವ ಹೊತ್ತಿನಲ್ಲಿ ಮತ್ತೆ ಮಳೆರಾಯ ಅಬ್ಬರಿಸಲು ಸಜ್ಜಾಗಿದ್ದಾನೆ. ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆಯಾಗಲಿದೆಯಂತೆ.
ನೈರುತ್ಯ ಬಂಗಾಳ ಕೊಲ್ಲಿಯಲ್ಲಿ ಹವಾಮಾನ ವೈಪರೀತ್ಯ ಶುರುವಾಗಿದೆ.ಇತ್ತ ಹಿಂದೂ ಮಹಾಸಾಗರದಲ್ಲಿ ಚಂಡಮಾರುತ ಉಂಟಾಗಿ ಕರ್ನಾಟಕ ಕೇರಳ ತಮಿಳುನಾಡು ಹಾಗೂ ಶ್ರೀಲಂಕಾ ಕರಾವಳಿ ಮಾರ್ಗವಾಗಿ ಸಂಚಾರ ಮಾಡಲಿದೆ. ಹೀಗಾಗಿ ದಕ್ಷಿಣ ಭಾರತದಲ್ಲಿ ಇಂದು ಹಾಗೂ ನವೆಂಬರ್ 27ರಂದು ಭಾರೀ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ.ಕರ್ನಾಟಕ ಮತ್ತು ಕೇರಳದಲ್ಲಿ ಮಳೆ ಅಬ್ಬರ ಹೆಚ್ಚಾಗಲಿದೆ ಎನ್ನುವ ಸೂಚನೆ ನೀಡಲಾಗಿದೆ. ಕರ್ನಾಟಕದ ಹತ್ತು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾದರೆ, ಏಳು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ಹೇಳಿದೆ.
ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ
ಕೋಲಾರ ಸೇರಿದಂತೆ ಚಿಕ್ಕಬಳ್ಳಾಪುರ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೊಡಗು, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ಮುನ್ಸೂಚನೆ ನೀಡಲಾಗಿದೆ.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



